AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಲ್ಲಿ ಕ್ಷುಲ್ಲಕ ವಿಚಾರಕ್ಕೆ ಸಹೋದರರ ಫೈಟ್​​: ಕಲ್ಲಿಂದ ಜಜ್ಜಿ ತಮ್ಮನನ್ನೇ ಕೊಂದ ಅಣ್ಣ!

ತುಮಕೂರಿನಲ್ಲಿ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಸಹೋದರರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಧುಗಿರಿಯ ನಿಟ್ಟರಹಳ್ಳಿಯಲ್ಲಿ ತಮ್ಮನನ್ನು ಆತನ ಅಣ್ಣನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಹಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿ ಈ ದುರಂತ ಸಂಭವಿಸಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಕುಡಿದ ಮತ್ತಲ್ಲಿ ಕ್ಷುಲ್ಲಕ ವಿಚಾರಕ್ಕೆ ಸಹೋದರರ ಫೈಟ್​​: ಕಲ್ಲಿಂದ ಜಜ್ಜಿ ತಮ್ಮನನ್ನೇ ಕೊಂದ ಅಣ್ಣ!
ಮೃತ ವ್ಯಕ್ತಿ ಮತ್ತು ಆರೋಪಿ
ಜಗದೀಶ ಬಿ.
| Edited By: |

Updated on: Apr 28, 2026 | 5:48 PM

Share

ತುಮಕೂರು, ಏಪ್ರಿಲ್​​ 28: ಕ್ಷುಲ್ಲಕ ವಿಚಾರಕ್ಕೆ ಒಡಹುಟ್ಟಿದವರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಮಧುಗಿರಿ ತಾಲೂಕಿನ ನಿಟ್ಟರಹಳ್ಳಿ ನಿವಾಸಿ ಗಂಗರಾಜು ಮೃತನಾಗಿದ್ದು, ಕಲ್ಲಿನಿಂದ ಜಜ್ಜಿ ಸಹೋದರನ ಹತ್ಯೆಗೈದ ಆರೋಪಿ ನರಸಿಂಹಮೂರ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕೋಪದ ಕೈಗೆ ಬುದ್ಧಿಕೊಟ್ಟ ಅಣ್ಣ ಜೈಲು ಸೇರಿದ್ದರೆ, ಮದ್ಯಕ್ಕೆ ದಾಸನಾಗಿದ್ದ ತಮ್ಮ ಇಹಲೋಕವನ್ನೇ ತೊರೆದಿದ್ದಾನೆ. ಭೀಕರ ಘಟನೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದು, ಮೃತ ಗಂಗರಾಜು ಅವಿವಾಹಿತ ಎಂಬುದು ಕೂಡ ಗೊತ್ತಾಗಿದೆ.

ಇನ್ನು ಗಂಗರಾಜು ಸಹೋದರರರಿಗೆ ಅಪ್ಪ-ಅಮ್ಮ ಇರಲಿಲ್ಲ. ಹೀಗಾಗಿ ಅಜ್ಜಿಯ ಆಶ್ರಯದಲ್ಲಿಯೇ ಇವರು ಬೆಳೆದಿದ್ದರು. ಓದು ತಲೆಗೆ ಹತ್ತದಿದ್ದರೂ ಕುಡಿತದ ಚಟ ಮಾತ್ರ ಮೈಗಂಟಿತ್ತು. ಮದುವೆ ಬಳಿಕ ಗಂಗರಾಜು ಅಣ್ಣಂದಿರು ಬೇರೆ ಮನೆ ಮಾಡಿಕೊಂಡು ವಾಸವಿದ್ದರೆ, ಈತ ಮಾತ್ರ ಅಜ್ಜಿಯ ಸೇವೆ ಮಾಡಿಕೊಂಡು ಆಕೆಯ ಜೊತೆಗೇ ಇದ್ದ. ಈ ನಡುವೆ ನಿನ್ನೆ ಸಂಜೆ ವೇಳೆಗೆ ಮನೆಯಲ್ಲಿದ್ದ ಗಂಗರಾಜು ಬಾರ್​​ಗೆ ತೆರಳಿ ಕುಡಿದು ಬಂದಿದ್ದಾನೆ. ಇದೇ ವೇಳೆ ಸಹೋದರ ನರಸಿಂಹಮೂರ್ತಿ ಸಹ ಕುಡಿದ ಮತ್ತಿನಲ್ಲಿ ಪ್ರತ್ಯಕ್ಷನಾಗಿದ್ದಾನೆ. ಈ ವೇಳೆ ಅಣ್ಣ-ತಮ್ಮನ ನಡುವೆ ಹಣದ ವಿಚಾರ ಸಂಬಂಧ ಗಲಾಟೆ ಶುರುವಾಗಿದೆ. ಆ ಜಗಳ ವಿಕೋಪಕ್ಕೆ ತೆರಳಿ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ನಡುವೆ ಕುಸಿದು ಬಿದ್ದ ಗಂಗರಾಜುವಿನ ಮೇಲೆ ಅಲ್ಲೇ ಇದ್ದ ಕಲ್ಲಿನಿಂದ ನರಸಿಂಹಮೂರ್ತಿ ದಾಳಿ ಮಾಡಿದ್ದಾನೆ. ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿ ಸಹೋದರನ ಕೊಲೆಗೈದಿದ್ದಾನೆ.

ಇದನ್ನೂ ಓದಿ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯ ಭೀಕರ ಕೊಲೆ; ಸಂಬಂಧಿಕರಿಂದಲೇ ನಡೀತು ಭೀಭತ್ಸ ಕೃತ್ಯ

ಪ್ರಕರಣ ಸಂಬಂಧ ಕೊಡಿಗೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಗಂಗರಾಜುವಿನ ಮತ್ತೋರ್ವ ಸಹೋದರ ನೀಡಿರುವ ದೂರಿನ ಅನ್ವಯ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದಲ್ಲಿ ತಮ್ಮನ ಕೊಂದ ಅಣ್ಣನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತಿದ್ದಾರೆ. ಮೇಲ್ನೋಟಕ್ಕೆ ಕ್ಷುಲ್ಲಕ ವಿಚಾರಕ್ಕೆ ಕೊಲೆ ನಡೆದಿರುವಂತೆ ಕಂಡುಬಂದಿದೆ. ಆದರೆ ಇದರ ಹೊರತಾಗಿ ಸಹೋದರರ ನಡುವೆ ಬೇರೆನಾದರೂ ವಿಚಾರ ಸಂಬಂಧ ಜಗಳ ಸೃಷ್ಟಿಯಾಗಿ ಕೊಲೆ ನಡೆದಿದೆಯಾ ಎಂಬ ಅನುಮಾನ ಸಹ ಮೂಡಿದ್ದು, ಪೊಲೀಸರ ತನಿಖೆಯಿಂದಷ್ಟೇ ಮತ್ತಷ್ಟು ಸಂಗತಿಗಳು ಹೊರಬರಬೇಕಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ