Tumakuru: ಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

ಜಿಲ್ಲೆಯ ಗುಬ್ಬಿ ತಾಲೂಕಿನ ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ಎಂಬುವವರು ಲಂಚ ಪಡೆದಿದ್ದ ಹಿನ್ನಲೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

Tumakuru: ಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ
ಲಂಚ ಸ್ವೀಕರಿಸಿದ ಮಹಿಳಾ ಅಧಿಕಾರಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 01, 2023 | 8:23 AM

ತುಮಕೂರು: ಜಿಲ್ಲೆಯ ಗುಬ್ಬಿ(Gubbi) ತಾಲೂಕಿನ ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ಎಂಬುವವರು ಲಂಚ ಪಡೆದಿದ್ದ ಹಿನ್ನಲೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಹೌದು ನೊಂದಣಿಗಳ‌ ಮಹಾಪರಿವಿಕಕ್ಷರು ಹಾಗೂ ಮುದ್ರಾಂಕ ಇಲಾಖೆ ಆಯುಕ್ತರು ಡಾ. ಮಮತಾ ಅವರು ಈ ಆದೇಶ‌ ನೀಡಿದ್ದಾರೆ. ನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಯಶೋಧ ಅವರು ಕರ್ತವ್ಯದ ಸಮಯದಲ್ಲಿ ಲಂಚದ ಹಣ ಪಡೆದುಕೊಂಡಿದ್ದರು. ಈ ಬಗ್ಗೆ ಮಂಜುನಾಥ್ ಎಂಬುವರು ದೂರು ನೀಡಿದ್ದರು. ತನಿಖೆಯಲ್ಲಿ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆ ಕಡ್ಡಾಯ ನಿವೃತ್ತಿಗೆ ಆದೇಶ ನೀಡಿದ್ದಾರೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿ ದೇವರಾಜ ಅರಸು ನಿಗಮದ ಅಧಿಕಾರಿ ಬಂಧನ

ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಲೋಕಾಯುಕ್ತ ಎಸ್​​ಪಿ ವಾಸುದೇವರಾಮ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಆಗಿರುವ ಮಲ್ಲೇಶ್​ನನ್ನು ಬಂಧಿಸಿದ್ದರು. 50 ಸಾವಿರ ರೂ. ಸಾಲದ ಮೊತ್ತ ಬಿಡುಗಡೆ ಮಾಡಲು ಬುರುಜನಹಟ್ಟಿಯ ರಾಕೇಶ್​ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 9 ಸಾವಿರ ರೂಪಾಯಿ ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದು ಅರೆಸ್ಟ್​ ಮಾಡಲಾಗಿತ್ತು.

ಇದನ್ನೂ ಓದಿ:ಕಲಬುರಗಿ: 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 7000 ಪಡೆಯುವಾಗ ತಗ್ಲಾಕೊಂಡ ಪೊಲೀಸ್ ಕಾನ್ಸಟೇಬಲ್

ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ

ಚಿತ್ರದುರ್ಗ: ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿತ್ತು. ಎಸ್​ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಚಿಕ್ಕಜಾಜೂರು ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಬಲೆಗೆ ಬಿದ್ದಿದ್ದರು. ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಕಾಗಳಗೆರೆ ಗ್ರಾಮದ ರೈತ ಎಸ್.ಸ್ವಾಮಿಯಿಂದ 7,000 ರೂ. ಲಂಚ ಸ್ವೀಕರಿಸುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ