ತುಮಕೂರು: ಜಿಲ್ಲೆಯ ಗುಬ್ಬಿ(Gubbi) ತಾಲೂಕಿನ ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ಎಂಬುವವರು ಲಂಚ ಪಡೆದಿದ್ದ ಹಿನ್ನಲೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಹೌದು ನೊಂದಣಿಗಳ ಮಹಾಪರಿವಿಕಕ್ಷರು ಹಾಗೂ ಮುದ್ರಾಂಕ ಇಲಾಖೆ ಆಯುಕ್ತರು ಡಾ. ಮಮತಾ ಅವರು ಈ ಆದೇಶ ನೀಡಿದ್ದಾರೆ. ನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಯಶೋಧ ಅವರು ಕರ್ತವ್ಯದ ಸಮಯದಲ್ಲಿ ಲಂಚದ ಹಣ ಪಡೆದುಕೊಂಡಿದ್ದರು. ಈ ಬಗ್ಗೆ ಮಂಜುನಾಥ್ ಎಂಬುವರು ದೂರು ನೀಡಿದ್ದರು. ತನಿಖೆಯಲ್ಲಿ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆ ಕಡ್ಡಾಯ ನಿವೃತ್ತಿಗೆ ಆದೇಶ ನೀಡಿದ್ದಾರೆ.
ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಆಗಿರುವ ಮಲ್ಲೇಶ್ನನ್ನು ಬಂಧಿಸಿದ್ದರು. 50 ಸಾವಿರ ರೂ. ಸಾಲದ ಮೊತ್ತ ಬಿಡುಗಡೆ ಮಾಡಲು ಬುರುಜನಹಟ್ಟಿಯ ರಾಕೇಶ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 9 ಸಾವಿರ ರೂಪಾಯಿ ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದು ಅರೆಸ್ಟ್ ಮಾಡಲಾಗಿತ್ತು.
ಇದನ್ನೂ ಓದಿ:ಕಲಬುರಗಿ: 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 7000 ಪಡೆಯುವಾಗ ತಗ್ಲಾಕೊಂಡ ಪೊಲೀಸ್ ಕಾನ್ಸಟೇಬಲ್
ಚಿತ್ರದುರ್ಗ: ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿತ್ತು. ಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಚಿಕ್ಕಜಾಜೂರು ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಬಲೆಗೆ ಬಿದ್ದಿದ್ದರು. ಮೃತ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಕಾಗಳಗೆರೆ ಗ್ರಾಮದ ರೈತ ಎಸ್.ಸ್ವಾಮಿಯಿಂದ 7,000 ರೂ. ಲಂಚ ಸ್ವೀಕರಿಸುತ್ತಿದ್ದರು ಎನ್ನಲಾಗಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ