ತುಮಕೂರು KSRTC ಬಸ್ ನಿಲ್ದಾಣದಲ್ಲಿ ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೊರಟಿದ್ದ ಇಬ್ಬರು ಮಹಿಳಾ ಭಕ್ತರು ಬಸ್​ಗಳ ನಡುವೆ ಸಿಲುಕಿ ಸಾವನ್ನಪ್ಪಿದ ಘಟನೆ ತುಮಕೂರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. KSRTC ಬಸ್ ಅನ್ನು ರಿವರ್ಸ್ ತೆಗೆಯುವಾಗ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ತುಮಕೂರು KSRTC ಬಸ್ ನಿಲ್ದಾಣದಲ್ಲಿ ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು
ತುಮಕೂರು ಬಸ್ ನಿಲ್ದಾಣದಲ್ಲಿ ಕೆಎಸ್​ಆರ್​ಟಿ ಬಸ್​ಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಸಾವು
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on:Sep 15, 2023 | 12:24 PM

ತುಮಕೂರು, ಸೆ.15: ಎರಡು ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆಎಸ್​ಆರ್​ಟಿಸಿ (KSRTC) ಬಸ್​ ನಿಲ್ದಾಣದಲ್ಲಿ ನಡೆದಿದೆ. ಬಸ್​ ನಿಲ್ದಾಣದಲ್ಲಿ ಬಸ್ ಅನ್ನು ರಿವರ್ಸ್ ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ (60) ಮತ್ತು ಪಂಕಜ (50) ಮೃತ ದುರ್ದೈವಿಗಳು. ಉಚಿತ ಬಸ್ ಪ್ರಯಾಣ ಹಿನ್ನೆಲೆ ಕೆಎಸ್​ಆರ್​ಟಿಸಿ ಬಸ್​ ಮೂಲಕ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗಲು ಏಳು ಮಹಿಳೆಯುರುಳ್ಳ ತಂಡ ಬಸ್ ನಿಲ್ದಾಣಕ್ಕೆ ಆಗಮಿಸಿತ್ತು. ಈ ತಂಡದಲ್ಲಿದ್ದ ಇಬ್ಬರು ಬಸ್ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1200 ಹೆಚ್ಚುವರಿ ಬಸ್; ಇಲ್ಲಿದೆ ವಿವರ

ಚಿಕ್ಕಬಳ್ಳಾಪುರ ಡಿಪೋಗೆ ಸೇರಿದ ಕೆಎಸ್​ಆರ್​ಟಿಸಿ ಬಸ್​ ಚಾಲಕ ಗೋವಿಂದರಾಜು ಅವರು ಬಸ್ ಅನ್ನು ರಿವರ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಸದ್ಯ, ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರ ಸಂಬಂಧಿಕರು ಹಾಗೂ ಸ್ನೇಹಿತರ ಆಕ್ರೋಶ

ಅಪಘಾತದಲ್ಲಿ ಮೃತಪಟ್ಟ ಇಬ್ಬರು ಮಹಿಳೆಯರ ಕುಟುಂಬಸ್ಥರು ಹಾಗೂ ಸ್ನೇಹಿತರು ಆಕ್ರೋಶ ಹೊರಹಾಕಿದ್ದಾರೆ. ನಾವಿಬ್ಬರು ಮೊದಲು ಬಸ್ ಹತ್ತಲು ಹೋದೆವು. ಈ ವೇಳೆ ಚಾಲಕ ಏಕಾಏಕಿ ಹಿಂದೆ ಬಂದು ಡಿಕ್ಕಿ ಹೊಡೆದ. ನಾವು ಎಷ್ಟೇ ಕೂಗಿಕೊಂಡು ಹೇಳಿದರೂ ಚಾಲಕ ಕೇಳಿಸಿಕೊಳ್ಳಲಿಲ್ಲ. ನಾವು ಸಂಬಂಧಿದಿಕರಿಗೆ ಏನ್ ಹೇಳಬೇಕು? ಪಂಕಜಮ್ಮನೇ ರಾತ್ರಿ ನಮ್ಮನ್ನ ಗೊರವನಹಳ್ಳಿಗೆ ಹೋಗಿ ಬರೋಣ ಅಂತಾ ಹೊರಡಿಸಿದರು ಎಂದರು.

ಬೆಳಿಗ್ಗೆ 5.30 ಕ್ಕೆ ಹೊರಟಿವಿ ಮಂಡ್ಯ ಮದ್ದೂರು ಮೂಲಕ ಬೆಳಿಗ್ಗೆ 9.15 ಕ್ಕೆ ತುಮಕೂರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದೆವು. ಕಾಪಿ ತಿಂಡಿ ತಿನ್ನಲು ಹೋಗಬೇಕಿತ್ತು. ಬಸ್ ಸಿಗಲ್ಲ ಅಂತಾ ನಿಂತು ಬಸ್ ನೋಡಿ ಹತ್ತಲು ಹೋದಾಗ ಈ ಘಟನೆ ನಡೆದಿದೆ. ಬಸ್ ಚಾಲಕನ ಅಜಾರೂಗಕತೆಯಿಂದ ಅಪಘಾತ ಆಗಿದೆ ಎಂದರು. ತುಮಕೂರಿನ ಜಿಲ್ಲಾಸ್ಪತ್ರೆ ಶವಗಾರ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Fri, 15 September 23

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ