AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಮೃತಪಟ್ಟು ವರ್ಷವಾದರೂ ಕಡತಗಳಿಗೆ ಸಹಿ ಹಾಕ್ತಿರುವ ಎಂಜಿನಿಯರ್!

ಮೃತಪಟ್ಟವರ ದಾಖಲೆಗಳನ್ನು ಬಳಸಿಕೊಂಡು ಅವ್ಯವಹಾರ ಎಸಗುವುದು, ಮೃತಪಟ್ಟವರ ಹೆಸರಿನಲ್ಲಿ ಇನ್ಯಾರೋ ಪಿಂಚಣಿ ಪಡೆಯುವುದು... ಇಂಥ ಅನೇಕ ಕೃತ್ಯಗಳ ಬಗ್ಗೆ ಆಗಾಗ್ಗೆ ವರದಿಯಾಗುತ್ತಿರುವುದನ್ನು ಗಮನಿಸಿರುತ್ತೇವೆ. ಆದರೆ, ತುಮಕೂರಿನಲ್ಲಿ ವಿಲಕ್ಷಣ ವಿದ್ಯಮಾನ ನಡೆದಿರುವ ಆರೋಪ ಕೇಳಿಬಂದಿದೆ. ಮೃತ ಎಂಜಿನಿಯರ್ ಹೆಸರಿನಲ್ಲಿ ಸರ್ಕಾರಿ ಕಡತಗಳಿಗೆ ಸಹಿ ಹಾಕಲಾಗುತ್ತಿರುವ ಬಗ್ಗೆ ದೂರು ಕೇಳಿಬಂದಿದೆ.

ತುಮಕೂರು: ಮೃತಪಟ್ಟು ವರ್ಷವಾದರೂ ಕಡತಗಳಿಗೆ ಸಹಿ ಹಾಕ್ತಿರುವ ಎಂಜಿನಿಯರ್!
ಸಿರಾದ ಸರ್ವ ಸದಸ್ಯರ ಸಾಮಾನ್ಯ ಸಭೆ
ಮಹೇಶ್ ಇ, ಭೂಮನಹಳ್ಳಿ
| Updated By: Ganapathi Sharma|

Updated on: Jul 12, 2024 | 9:53 AM

Share

ತುಮಕೂರು, ಜುಲೈ 12: ಎಂಜಿಯರೊಬ್ಬರು ಮೃತಪಟ್ಟು ಒಂದು ವರ್ಷವಾದರೂ ಅವರ ಹೆಸರಿನಲ್ಲಿ ಸರ್ಕಾರಿ ಕಡತಗಳಿಗೆ ಸಹಿ ಹಾಕಲಾಗುತ್ತಿದೆ. ಮೃತ ಎಂಜಿನಿಯರ್‌ನ ನಕಲಿ ಸಹಿ, ಸರ್ಕಾರದ ಅನುದಾನ ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ತುಮಕೂರಿನಲ್ಲಿ ಕೇಳಿಬಂದಿದೆ. ಈ ಬಗ್ಗೆ ತುಮಕೂರು ಜಿಲ್ಲೆ ಸಿರಾದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಗಂಭೀರ ಆರೋಪ ಮಾಡಲಾಗಿದೆ. ಜತೆಗೆ, ಭ್ರಷ್ಟಾಚಾರ ಕಡಿವಾಣಕ್ಕೆ ಸಿರಾ ನಗರಸಭೆ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ಎಂಜಿನಿಯರ್ ಸೇತುರಾಂ ಸಿಂಗ್ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದರೆ, ಸೇತುರಾಂ ಸಿಂಗ್ ಹೆಸರಲ್ಲಿ ಹಳೆಯ ಕಡತಗಳಿಗೆ ನಕಲಿ ಸಹಿ ಹಾಕಿ ಅನುದಾನ ದುರ್ಬಳಕೆಯಾಗಿದೆ. ಸಹಿ ದುರ್ಬಳಕೆ ತಡೆಗೆ ಆಗ್ರಹಿಸಿ ಮೃತ ಎಂಜಿನಿಯರ್ ಪತ್ನಿ ನಗರಸಭೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಕ್ರಮ ಕೈಗೊಳ್ಳುವಂತೆ ನಗರಸಭೆ ಸದಸ್ಯರಾದ ಅಜಯ್ ಕುಮಾರ್, ಲಕ್ಷ್ಮಿಕಾಂತ್, ಕೃಷ್ಣಪ್ಪ ಸೇರಿ ಹಲವು ಸದಸ್ಯರು ಒತ್ತಾಯಿಸಿದ್ದಾರೆ.

ದೆಹಲಿ ವಿಶೇಷ ಪ್ರತಿ‌ನಿಧಿ ಶಾಸಕ ಟಿಬಿ ಜಯಚಂದ್ರ, ಎಂಎಲ್‌ಸಿ ಚಿದಾನಂದ್ ಸಮ್ಮುಖದಲ್ಲೇ ನಗರಸಭೆ ಸದಸ್ಯರು ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ವಿಧಾನ ಪರಿಷತ್ ಸದಸ್ಯ ಚಿದಾನಂದ್ ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಸಿರಾ ನಗರಸಭೆ ಅಧ್ಯಕ್ಷೆ ಪೂಜಾ ನೇತೃತ್ವದಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆದಿದೆ.

ಗಾಂಜಾ ಸಾಗಣೆ ಇಬ್ಬರ ಬಂಧನ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಬಾಲಾಜಿ ಲೇಔಟ್​​ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆಟೋದಲ್ಲಿ ನಿಂತಿದ್ದವರನ್ನು ಗಮನಿಸಿ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ 800 ಗ್ರಾಂ ಗಾಂಜಾ ಪತ್ತೆಯಾಗಿದೆ. ಗೌಸ್ ಹಾಗೂ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಆಟೋ‌ ಹಾಗೂ 800 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ವರದಕ್ಷಿಣೆ ಕಿರುಕುಳ ಆರೋಪ ಪ್ರಾಂಶುಪಾಲ ನಾಪತ್ತೆ

ವರದಕ್ಷಿಣೆ ಕಿರುಕುಳ ಆರೋಪದ ಬೆನ್ನಲ್ಲೇ ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಕುಮಾರಸ್ವಾಮಿ ಕುಟುಂಬ ನಾಪತ್ತೆಯಾಗಿದೆ. ಕುಮಾರಸ್ವಾಮಿ ಪುತ್ರ ನಿಖಿಲ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ದಾಖಲಾಗಿತ್ತು. ಪ್ರಾಂಶುಪಾಲ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ವಿರುದ್ಧ ಅವರ ಸೊಸೆ ಪುಷ್ಪಾ ದೂರು ನೀಡಿದ್ದರು.

ಇದನ್ನೂ ಓದಿ: ತುಮಕೂರು ಹೆಚ್​ಪಿ ಪೆಟ್ರೋಲ್ ಬಂಕ್​ನಲ್ಲಿ ವಂಚನೆ, ₹ 110ಕ್ಕೆ ಕೇವಲ 300ಮಿಲೀ ಪೆಟ್ರೋಲ್!

ತಿಪಟೂರು ನಗರದ ಚಂದ್ರಶೇಖರ್ ಪುತ್ರಿ ಪುಷ್ಪ ಜೊತೆ ಸುಮಾರು 40 ಲಕ್ಷ ರೂಪಾಯಿ ಖರ್ಚು ಮಾಡಿ ಮದುವೆ ಮಾಡಲಾಗಿತ್ತು. ಮದುವೆಯಾದ ದಿನದಿಂದಲೂ ವರದಕ್ಷಿಣೆಗಾಗಿ ಪ್ರಾಂಶುಪಾಲ‌ ಕುಟುಂಬ ಪೀಡಿಸುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕಿರಕುಳ ತಾಳಲಾರದೆ ತಿಪಟೂರು ನಗರ ಪೊಲೀಸ್ ಠಾಣೆಗೆ ಪುಷ್ಪಾ ದೂರು ದಾಖಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ