ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶ; ತುಮಕೂರಿನಲ್ಲಿ ಬಾಲಕ ಸಾವು

ಮೂವರು ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸಲು ಹೋದಾಗ ಮೂವರಿಗೂ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಚಂದನ್ (16) ಸಾವನ್ನಪ್ಪಿದ್ದು, ಶಶಂಕ್ (16), ಪವನ್ (22) ಗೆ ಗಾಯವಾಗಿದೆ. ಸದ್ಯ ಇವರು ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶ; ತುಮಕೂರಿನಲ್ಲಿ ಬಾಲಕ ಸಾವು
ಬಾಲಕ ಚಂದನ್
Follow us
TV9 Web
| Updated By: sandhya thejappa

Updated on:Aug 15, 2021 | 2:27 PM

ತುಮಕೂರು: ಇಂದು (ಆಗಸ್ಟ್ 15) ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದಲ್ಲಿ ಸಂಭವಿಸಿದೆ. ಇಡೀ ದೇಶವೇ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರದಲ್ಲಿದೆ. ಆದರೆ ಜಿಲ್ಲೆಯ ಕರೀಕೆರೆ ಗ್ರಾಮದಲ್ಲಿ ನಡೆಯ ಬಾರದ ದುರ್ಘಟನೆ ನಡೆದುಹೋಗಿದೆ. ಧ್ವಜಾರೋಹಣಕ್ಕೆ ಕಂಬ ನಿಲ್ಲಿಸುವ ವೇಳೆ ಅವಘಡ ಸಂಭವಿಸಿದ್ದು, 16 ವರ್ಷದ ಬಾಲಕ ಚಂದನ್ ಕೊನೆಯುಸಿರೆಳೆದಿದ್ದಾನೆ.

ಮೂವರು ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸಲು ಹೋದಾಗ ಮೂವರಿಗೂ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಚಂದನ್ (16) ಸಾವನ್ನಪ್ಪಿದ್ದು, ಶಶಂಕ್ (16), ಪವನ್ (22) ಗೆ ಗಾಯವಾಗಿದೆ. ಸದ್ಯ ಇವರು ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂವರು ಕರಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು. ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಶಾಲೆಗೆ ಧ್ವಜಸ್ತಂಭ ನಿಲ್ಲಿಸಲು ತೆರಳಿದ್ದರು. ಶಿಕ್ಷಕರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಅಂತ ಪೋಷಕರ ಆರೋಪಿಸಿದ್ದಾರೆ. ತುಮಕೂರಿನ ಖಾಸಗಿ ಆಸ್ಪತ್ರೆಗೆ ಡಿಡಿಪಿಐ ನಂಜಪ್ಪ ಭೇಟಿ ನೀಡಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಬಿ.ಸಿ.ನಾಗೇಶ್ ಸಂತಾಪ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ನೋಡಲು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಅವಘಡ ಘಟನೆಯಿಂದ ಆಘಾತವಾಗಿದೆ. ಇದು ದುರಾದೃಷ್ಟಕರ ಘಟನೆ. ಮೃತರ ಕುಟುಂಬಕ್ಕೆ ಸಂತಾಪ ತಿಳಿಸಲು ಬಯಸುತ್ತೇನೆ. ಶಬ್ಧಗಳಿಂದ ದುಃಖ ಶಮನ ಮಾಡಲು ಸಾಧ್ಯವಿಲ್ಲ. ಗಾಯಾಳುಗಳ ಚಿಕಿತ್ಸೆಗೆ ಅವಶ್ಯಕ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ಹದಿನಾರು ವರ್ಷದ ಬಾಲಕ ಮೃತ ಪಟ್ಟಿದ್ದು ನನ್ನ ಮನಸಿಗೆ ನೋವು ತಂದಿದೆ. ಅವರ ಕುಟುಂಬದ ಜೊತೆ ನಾನು ಇರುತ್ತೇನೆ. ವರದಿ ತರೆಸಿಕೊಂಡು ಕ್ರಮ ಕೈಗೊಳ್ಳಲಾಗುವುದು. ಮುಂದೆ ಈ ರೀತಿ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಶಾಲೆಯಲ್ಲಿ ವಿದ್ಯುತ್ ಲೈನ್ ಹಾದು ಹೋಗದಂತೆ ನಿಗಾ ವಹಿಸಲಾಗುತ್ತದೆ ಎಂದು ಸಚಿವ ನಾಗೇಶ್ ಹೇಳಿದರು.

ಇದನ್ನೂ ಓದಿ

ಸ್ವಸಹಾಯ ಸಂಘಗಳಿಗೆ ಇ-ಕಾಮರ್ಸ್ ಮಾರುಕಟ್ಟೆ ಸೌಲಭ್ಯ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಪ್ರಧಾನಿ ಮೋದಿ ಘೋಷಣೆ

75ನೇ ಸ್ವಾತಂತ್ರ್ಯ ದಿನಾಚರಣೆಗೆ ಹೊಸ ಹಾಡು; ದೇಶಭಕ್ತಿಯ ಗಾನಸುಧೆಯನ್ನು ಸವಿಯಿರಿ

(Tumkur boy death in short Circuit and two boys are being treated at hospital)

Published On - 11:26 am, Sun, 15 August 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ