AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವೈದ್ಯರಿಲ್ಲದಿದ್ದಕ್ಕೆ ಮಗು ಸಾವು ಆರೋಪ ಪ್ರಕರಣ; ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಆ್ಯಂಬುಲೆನ್ಸ್​ ಚಾಲಕ ಅಮಾನತು

ಕೊಡಿಗೆನಹಳ್ಳಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣ ಮಗು ಸಾವನ್ನಪ್ಪಿದ ಹಿನ್ನಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರೋಹಿತ್​​ ಹಾಗೂ ಆ್ಯಂಬುಲೆನ್ಸ್​ ಚಾಲಕ ಸೀನಪ್ಪನನ್ನು ಅಮಾನತು ಮಾಡಲಾಗಿದೆ.

ತುಮಕೂರು: ವೈದ್ಯರಿಲ್ಲದಿದ್ದಕ್ಕೆ ಮಗು ಸಾವು ಆರೋಪ ಪ್ರಕರಣ; ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಆ್ಯಂಬುಲೆನ್ಸ್​ ಚಾಲಕ ಅಮಾನತು
ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 04, 2022 | 1:22 PM

Share

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾಕ್ಟರ್​ ಇಲ್ಲದ ಕಾರಣ ಮಗು ಸಾವನ್ನಪ್ಪಿದ್ದು. ಆರೋಗ್ಯಾಧಿಕಾರಿಯಾಗಿರುವ ಡಾ.ರಮೇಶ್ ಬಾಬು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯಾಗಿರುವ ಡಾ.ಮಂಜುನಾಥ್ ಅವರಿಗೆ ಕರ್ತವ್ಯ ಲೋಪದ ಆರೋಪದ ಮೇಲೆ ನೋಟಿಸ್ ನೀಡಲಾಗಿದೆ. ಪ್ರಕರಣದ ಕುರಿತು ವರದಿ ನೀಡುವಂತೆ ಸೂಚಿಸಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರೋಹಿತ್​​ ಹಾಗೂ ಆ್ಯಂಬುಲೆನ್ಸ್​ ಚಾಲಕ ಸೀನಪ್ಪ ಅವರನ್ನು ಅಮಾನತು ಮಾಡಲಾಗಿದೆ.

ಕೊಡಿಗೆನಹಳ್ಳಿ ಗ್ರಾಮದಲ್ಲಿ ಸಂಪ್​ಗೆ ಬಿದ್ದಿದ್ದ ಮಗು ಚಿಕಿತ್ಸೆಗಾಗಿ ಬಂದಾಗ ವೈದ್ಯರಿಲ್ಲದೆ ಕರ್ತವ್ಯ ಲೋಪ ಈ ಬಗ್ಗೆ ವರದಿ ನೀಡುವಂತೆ ಡಿಎಚ್​​ಒ ಡಾ.ಮಂಜುನಾಥ್​ಗೆ ಸೂಚನೆ ನೀಡಲಾಗಿತ್ತು. ವರದಿಯಲ್ಲಿ ಆಸ್ಪತ್ರೆ ವೈದ್ಯ, ಆ್ಯಂಬುಲೆನ್ಸ್ ಚಾಲಕನ ನಿರ್ಲಕ್ಷ್ಯ ಸಾಬೀತಾಗಿದ್ದು, ಇಬ್ಬರನ್ನು ಅಮಾನತು ಮಾಡಲಾಗಿದೆ. ವೈದ್ಯರ ಹಾಗೂ ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ ನಡೆಸಿಲ್ಲ, ಜಿಲ್ಲಾ ಆರೋಗ್ಯಧಿಕಾರಿಯಾಗಿ ಸರಿಯಾಗಿ ಆಸ್ಪತ್ರೆಗಳಿಗೆ ಭೇಟಿ ನೀಡಿಲ್ಲ. 24/7 ಆಸ್ಪತ್ರೆಯಲ್ಲಿ ಇರಬೇಕಾದ ವೈದ್ಯರು, ಕರ್ತವ್ಯ ಲೋಪ ಎಸಗಿದ್ದಾರೆ.

ಇದನ್ನೂ ಓದಿ:ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ: ಏಮ್ಸ್​ ಆಸ್ಪತ್ರೆ ಹೋರಾಟಕ್ಕೆ ಬಲ ತುಂಬಿದ ಶಿವಣ್ಣ

ಇನ್ನು ಪಂಚರತ್ನ ಯಾತ್ರೆ ವೇಳೆ ಮಗು ಶವ ಕಂಡು ಆರೋಗ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದ ಮಾಜಿ ಸಿಎಂ ಕುಮಾರಸ್ವಾಮಿ. ಈ ಪ್ರಕರಣದ ಕುರಿತು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ