ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾಕ್ಟರ್ ಇಲ್ಲದ ಕಾರಣ ಮಗು ಸಾವನ್ನಪ್ಪಿದ್ದು. ಆರೋಗ್ಯಾಧಿಕಾರಿಯಾಗಿರುವ ಡಾ.ರಮೇಶ್ ಬಾಬು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯಾಗಿರುವ ಡಾ.ಮಂಜುನಾಥ್ ಅವರಿಗೆ ಕರ್ತವ್ಯ ಲೋಪದ ಆರೋಪದ ಮೇಲೆ ನೋಟಿಸ್ ನೀಡಲಾಗಿದೆ. ಪ್ರಕರಣದ ಕುರಿತು ವರದಿ ನೀಡುವಂತೆ ಸೂಚಿಸಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರೋಹಿತ್ ಹಾಗೂ ಆ್ಯಂಬುಲೆನ್ಸ್ ಚಾಲಕ ಸೀನಪ್ಪ ಅವರನ್ನು ಅಮಾನತು ಮಾಡಲಾಗಿದೆ.
ಕೊಡಿಗೆನಹಳ್ಳಿ ಗ್ರಾಮದಲ್ಲಿ ಸಂಪ್ಗೆ ಬಿದ್ದಿದ್ದ ಮಗು ಚಿಕಿತ್ಸೆಗಾಗಿ ಬಂದಾಗ ವೈದ್ಯರಿಲ್ಲದೆ ಕರ್ತವ್ಯ ಲೋಪ ಈ ಬಗ್ಗೆ ವರದಿ ನೀಡುವಂತೆ ಡಿಎಚ್ಒ ಡಾ.ಮಂಜುನಾಥ್ಗೆ ಸೂಚನೆ ನೀಡಲಾಗಿತ್ತು. ವರದಿಯಲ್ಲಿ ಆಸ್ಪತ್ರೆ ವೈದ್ಯ, ಆ್ಯಂಬುಲೆನ್ಸ್ ಚಾಲಕನ ನಿರ್ಲಕ್ಷ್ಯ ಸಾಬೀತಾಗಿದ್ದು, ಇಬ್ಬರನ್ನು ಅಮಾನತು ಮಾಡಲಾಗಿದೆ. ವೈದ್ಯರ ಹಾಗೂ ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ ನಡೆಸಿಲ್ಲ, ಜಿಲ್ಲಾ ಆರೋಗ್ಯಧಿಕಾರಿಯಾಗಿ ಸರಿಯಾಗಿ ಆಸ್ಪತ್ರೆಗಳಿಗೆ ಭೇಟಿ ನೀಡಿಲ್ಲ. 24/7 ಆಸ್ಪತ್ರೆಯಲ್ಲಿ ಇರಬೇಕಾದ ವೈದ್ಯರು, ಕರ್ತವ್ಯ ಲೋಪ ಎಸಗಿದ್ದಾರೆ.
ಇದನ್ನೂ ಓದಿ:ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ: ಏಮ್ಸ್ ಆಸ್ಪತ್ರೆ ಹೋರಾಟಕ್ಕೆ ಬಲ ತುಂಬಿದ ಶಿವಣ್ಣ
ಇನ್ನು ಪಂಚರತ್ನ ಯಾತ್ರೆ ವೇಳೆ ಮಗು ಶವ ಕಂಡು ಆರೋಗ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದ ಮಾಜಿ ಸಿಎಂ ಕುಮಾರಸ್ವಾಮಿ. ಈ ಪ್ರಕರಣದ ಕುರಿತು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ