ತುಮಕೂರು: ಅಂತ್ಯಕ್ರಿಯೆಗೆ ಸ್ಮಶಾನವಿಲ್ಲವೆಂದು ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸುತ್ತಿರುವ ಗ್ರಾಮಸ್ಥರು
ಅಂತ್ಯಕ್ರಿಯೆಗೆ ಸ್ಮಶಾನವಿಲ್ಲದ್ದರಿಂದ ಬೇಸತ್ತ ಗ್ರಾಮಸ್ಥರು ಶವವನ್ನ ರಸ್ತೆಯಲ್ಲಿಟ್ಟು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ.
ತುಮಕೂರು: ಅಂತ್ಯಕ್ರಿಯೆಗೆ ಸ್ಮಶಾನವಿಲ್ಲದ್ದರಿಂದ ಬೇಸತ್ತ ಗ್ರಾಮಸ್ಥರು ಶವವನ್ನ ರಸ್ತೆಯಲ್ಲಿಟ್ಟು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದಲ್ಲಿ ಭಾನುವಾರ (ಜ.29) ರಾತ್ರಿ ನಡೆದಿದೆ. ಭಾನುವಾರ ಗ್ರಾಮದ ರಂಗಪ್ಪ (54) ವ್ಯಕ್ತಿ ನಿಧರಾಗಿದ್ದರು. ಅವರ ಅಂತ್ಯಕ್ರಿಯೆ ನಡೆಸಲು ಗ್ರಾಮದಲ್ಲಿ ಸ್ಮಶಾನವಾಗಲಿ, ರಂಗಪ್ಪ ಅವರ ಸ್ವಂತ ಸ್ಥಳವಾಗಲಿ ಇಲ್ಲದೆ ಕುಟುಂಬಸ್ಥರು ಪರದಾಡುತ್ತಿದ್ದರು. ಇದರಿಂದ ಬೇಸತ್ತ ಗ್ರಾಮಸ್ಥರು ಸ್ಮಶಾನಕ್ಕೆ ಜಮೀನು ಮಂಜೂರು ಮಾಡುವಂತೆ ಆಗ್ರಹಿಸಿ ಮೃತ ರಂಗಪ್ಪ ಅವರ ಶವವನ್ನು ರಸ್ತೆಯಲ್ಲಿಟ್ಟು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ನೂರಾರು ಮನೆಗಳಿರುವ ಈ ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಅಂತ್ಯಕ್ರಿಯೆ ನಡೆಸಲು ಸೂಕ್ತ ಸ್ಥಳ ಇಲ್ಲದೆ ಪ್ರತಿ ಭಾರಿಯೂ ಗ್ರಾಮಸ್ಥರು ಪರದಾಡುತ್ತಾರಂತೆ. ಇದರಿಂದ ಬೇಸತ್ತಿರುವ ಗ್ರಾಮಸ್ಥರು, ಗ್ರಾಮದಲ್ಲಿ ಮೃತರಾದವರ ಅಂತ್ಯಕ್ರಿಯೆ ನಡೆಸಲು ಸ್ಮಶಾನಕ್ಕೆ ಜಮೀನು ಮಂಜೂರು ಮಾಡುವಂತೆ ರಸ್ತೆಯಲ್ಲಿ ಶವವಿಟ್ಟು ಧರಣಿ ನಡೆಸುವ ಮೂಲಕ ಒತ್ತಾಯಿಸಿದ್ದಾರೆ.
ನಿನ್ನೆಯಿಂದ (ಜ.29) ಶುರುವಾದ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಶಾಸಕ ವೆಂಕಟರಮಣಪ್ಪ ಹಾಗೂ ತಹಶೀಲ್ದಾರ್ ವರದರಾಜು ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಸ್ಮಾಶನಕ್ಕೆ ಜಾಗ ಹುಡುಕುವಲ್ಲಿ ನಿರತರಾಗಿದ್ದಾರೆ. ರೊಪ್ಪ ಗ್ರಾಮದ ಪಕ್ಕದ ಗ್ರಾಮ ಟಿ.ಎನ್ ಪೇಟೆಯಲ್ಲಿ ಸ್ಮಾಶನಕ್ಕೆ ಜಾಗ ಹುಡುಕಲಾಗಿದೆ. ಆದರೆ ಟಿ.ಎನ್ ಪೇಟೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ರೊಪ್ಪದಲ್ಲೇ ಸ್ಮಾಶನಕ್ಕೆ ಅಧಿಕಾರಿಗಳು ಜಾಗ ಹುಡುಕಾಟ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:00 pm, Mon, 30 January 23