AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಬಂತು ಹೊಸ ಗೂಡ್ಸ್ ಜೀಪ್; ಶುಭಕೋರಿದ ಆನಂದ್ ಮಹೀಂದ್ರ

ರೈತ ಕೆಂಪೇಗೌಡರಿಂದ ಮಹಿಂದ್ರ ಗೂಡ್ಸ್ ವಾಹನ ಖರೀದಿ ಮಾಡಲಾಗಿದೆ. ಈ ಬಗ್ಗೆ ರೈತ ಕೆಂಪೇಗೌಡರ ಸಂತಸ ಹಂಚಿಕೊಂಡಿದ್ದಾರೆ. ಈ ಕುರಿತು ಸ್ವತಃ ಆನಂದ್ ಮಹೀಂದ್ರ ಟ್ವೀಟ್​ ಮಾಡಿದ್ದಾರೆ.

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಬಂತು ಹೊಸ ಗೂಡ್ಸ್ ಜೀಪ್; ಶುಭಕೋರಿದ ಆನಂದ್ ಮಹೀಂದ್ರ
ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮನ
TV9 Web
| Edited By: |

Updated on:Jan 29, 2022 | 7:42 PM

Share

ತುಮಕೂರು: ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆಯೊಂದು ನಡೆದಿದೆ. ಇದೀಗ ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮಿಸಿದೆ. ಶುಕ್ರವಾರ (ಜನವರಿ 28) ರೈತ ಕೆಂಪೇಗೌಡಗೆ ಕಂಪನಿ ವಾಹನ ಡೆಲಿವರಿ ಮಾಡಿದೆ. ಅಷ್ಟೇ ಅಲ್ಲದೆ, ಈ ಕುರಿತು ಸ್ವತಃ ಆನಂದ್ ಮಹೀಂದ್ರ ಟ್ವೀಟ್​ ಮಾಡಿದ್ದಾರೆ. ರೈತ ಕೆಂಪೇಗೌಡರಿಂದ ಮಹಿಂದ್ರ ಗೂಡ್ಸ್ ವಾಹನ ಖರೀದಿ ಮಾಡಲಾಗಿದೆ. ಈ ಬಗ್ಗೆ ರೈತ ಕೆಂಪೇಗೌಡರ ಸಂತಸ ಹಂಚಿಕೊಂಡಿದ್ದಾರೆ.

9.40 ಲಕ್ಷ ರೂಪಾಯಿಗೆ ಕೆಂಪೇಗೌಡ ವಾಹನ ಖರೀದಿಸಿದ್ದಾರೆ. 2 ಲಕ್ಷ ಮುಂಗಡ ಹಣ ಪಾವತಿಸಿ ಕೆಂಪೇಗೌಡ ವಾಹನ ಖರೀದಿ ಮಾಡಿದ್ದಾರೆ. ಉಳಿದ ಹಣ ಲೋನ್ ಮೂಲಕ ಪಾವತಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಕಾರು ಖರೀದಿಗೆ ಬಂದ ಯುವ ರೈತರಿಗೆ ಅವಮಾನ ಮಾಡಿದ ಘಟನೆ ತುಮಕೂರಿನ ರಾಮನಪಾಳ್ಯದಲ್ಲಿ ನಡೆದಿತ್ತು. ಬೊಲೆರೋ ಗೂಡ್ಸ್ ವಾಹನ ಖರೀದಿಸಲು ಶೋರೂಂಗೆ ಬಂದಿದ್ದ ತಾಲೂಕಿನ ಹೆಬ್ಬೂರು ಹೋಬಳಿಯ ರಾಮನಪಾಳ್ಯ ನಿವಾಸಿ ಯುವರೈತ ಕೆಂಪೇಗೌಡಗೆ ಅವಮಾನ ಮಾಡಲಾಗಿತ್ತು. ಯುವಕನ ವೇಷಭೂಷಣ ನೋಡಿ ಶೋರೂಂನಲ್ಲಿ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿತ್ತು.

ಸಾಹಸಸಿಂಹ ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ‘ದಿಗ್ಗಜರು’ ಸಿನಿಮಾವನ್ನು ನೀವು ನೋಡಿರುತ್ತೀರಿ. ಆ ಸಿನಿಮಾದಲ್ಲಿನ ದೃಶ್ಯದಂಥ ಘಟನೆಯೊಂದು ನಿಜಜೀವನದಲ್ಲಿ ಸಂಭವಿಸಿತ್ತು. ತುಮಕೂರಿನ ರೈತರೊಬ್ಬರಿಗೆ ಅಂಥ ಅನುಭವವಾಗಿತ್ತು.

ಹತ್ತು ರೂಪಾಯಿ ದುಡ್ಡು ಕೊಡುವ ಯೋಗ್ಯತೆ ಇಲ್ಲ ಎಂದು ಸೇಲ್ಸ್ ಏಜೆಂಟ್​ರಿಂದ ಕೆಂಪೇಗೌಡಗೆ ಅವಮಾನ ಆಗಿತ್ತು. ಅವಮಾನಿಸಿದ್ದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ದುಡ್ಡು ತಂದು ವಾಹನ ನೀಡುವಂತೆ ಪಟ್ಟು ಹಿಡಿದಿದ್ದರು. ಆದರೆ ಶೋರೂಂ ಸೇಲ್ಸ್ ಏಜೆಂಟ್ ಮಾತ್ರ ವಾಹನ ನೀಡದೇ, ಎರಡು ಮೂರು ದಿನದಲ್ಲಿ ವಾಹನ ನೀಡುತ್ತೇವೆ ಎಂದು ಹೇಳಿದ್ದರು.

ಕಾರ್ ಶೋರೂಮ್​ನಲ್ಲಿ ಹೇಳಿದ್ದೇನು?

ನಮ್ಮನ್ನು ನೋಡಿ ಕೇವಲವಾಗಿ ಮಾತನಾಡಿದರು. 10 ರೂಪಾಯಿ ತರಲು ಯೋಗ್ಯತೆ ಇಲ್ಲ ಎಂದು ಅವಮಾನಿಸಿದರು. ಆಗ ನಾವು ಅರ್ಧಗಂಟೆಯಲ್ಲಿ 10 ಲಕ್ಷ ಹೊಂದಿಸಿ ತಂದು ಕೊಟ್ಟಿದ್ದೀವಿ. ಕಳೆದ ಜನವರಿ 4 ರಂದು ಶೋರೂಮ್​​ಗೆ ಹೋಗಿ ಗೂಡ್ಸ್ ವಾಹನ ತರಲು ಹೇಳಿಬರಲಾಗಿತ್ತು. ಅದರಂತೆ‌ ಮೊನ್ನೆ ಎರಡು ಲಕ್ಷ ಹಣ ಕಟ್ಟಿ ವಾಹನ ತರಲು ಶೋರೂಮ್​ಗೆ ಹೋಗಿದ್ವಿ. ಎರಡು ಲಕ್ಷ ಹಣ ಕಟ್ತೀವಿ. ವಾಹನ ಕೊಡಿ ಎಂದು ಕೇಳಿದ್ದೀವಿ. ಆಗ ಶೋರೂಮ್ ಸಿಬ್ಬಂದಿ ಏಳು ಜನರು ಕೂಡ ‘ನೀವು ತಮಾಷೆ ಮಾಡಲು ಬಂದಿದ್ದೀರಾ. ವಾಹನ ತಗೊಂಡು ಹೋಗೊದಕ್ಕೆ ಬಂದಿಲ್ಲ. ನಿಮ್ಮ ಯೋಗ್ಯತೆಗೆ 10 ರೂಪಾಯಿ ಇಲ್ಲ, ಸುಮ್ಮನೇ ಬಂದಿದ್ದೀರಾ’ ಎಂದು ಅವಮಾನ ಮಾಡಿದ್ದರು ಎಂದು ಹೇಳಲಾಗಿತ್ತು.

ನಾವು 25 ನಿಮಿಷ ಸಮಯ ಕೇಳಿದ್ದೀವಿ. ಆಗಲೂ ಅವರು ಕಿಚಾಯಿಸಿದ್ದಾರೆ. ನಾವು ಹೇಳಿದ ಸಮಯಕ್ಕೆ ಹಣ ತಂದು ಕೊಟ್ಟಿದ್ದೀವಿ. ಆದರೆ ಅವರು ವಾಹನ ನೀಡಲಿಲ್ಲ. ನಾವು ರೈತರು ಅಂತಾ ಅವಮಾನ ಮಾಡಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ. ಬೊಲೆರೋ ವಾಹನ ತರಲು ಹೋಗಿದ್ದ ಕೆಂಪೇಗೌಡ ಹಾಗೂ ಮಾವ ರಾಮಾಂಜನೇಯ ಈ ಬಗ್ಗೆ ಟಿವಿ9ಗೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ತುಮಕೂರಿನಲ್ಲಿ ಜೀಪ್ ಖರೀದಿಗೆ ಬಂದ ರೈತರಿಗೆ ಅವಮಾನ: ಗ್ರಾಹಕರ ಘನತೆ ನಮ್ಮ ಹೊಣೆ ಎಂದ ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರ

ಇದನ್ನೂ ಓದಿ: ತುಮಕೂರು: ಕಾರ್ ಖರೀದಿಗೆ ಬಂದ ರೈತನಿಗೆ ಅವಮಾನ; 10 ಲಕ್ಷ ರೂ. ತಂದು ಕಾರ್ ನೀಡುವಂತೆ ಪಟ್ಟು ಹಿಡಿದ ರೈತ

Published On - 6:18 pm, Sat, 29 January 22

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ