ತುಮಕೂರು: ಪೇಪರ್ ಗೋದಾಮಿನಲ್ಲಿ ಅಗ್ನಿ ಅವಘಡ, ನಾಲ್ವರಿಗೆ ಗಾಯ

ತುಮಕೂರು ತಾಲೂಕಿನ ವಸಂತನರಸಾಪುರ(Vasanthanarasapura) ಕೈಗಾರಿಕಾ ಪ್ರದೇಶದಲ್ಲಿನ ಪೇಪರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನಾಲ್ವರಿಗೆ ಗಾಯವಾದ ಘಟನೆ ನಡೆದಿದೆ. ಕೆಲಸದ ಸಮಯದಲ್ಲಿಯೇ ಈ ದುರ್ಘಟನೆ ನಡೆದಿದ್ದು, ನಿಖರ ಕಾರಣ ತಿಳಿದುಬಂದಿಲ್ಲ, ಈ ಕುರಿತು ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಪೇಪರ್ ಗೋದಾಮಿನಲ್ಲಿ ಅಗ್ನಿ ಅವಘಡ, ನಾಲ್ವರಿಗೆ ಗಾಯ
ಪೇಪರ್ ಗೋದಾಮಿನಲ್ಲಿ ಅಗ್ನಿ ಅವಘಡ,
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 05, 2024 | 9:14 PM

ತುಮಕೂರು, ಮಾ.05: ಇತ್ತೀಚೆಗೆ ಅಗ್ನಿ ಅವಘಡಗಳು ತುಸು ಹೆಚ್ಚುತ್ತಿದೆ. ಅದರಂತೆ ಇದೀಗ ಪೇಪರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನಾಲ್ವರಿಗೆ ಗಾಯವಾದ ಘಟನೆ ತುಮಕೂರು ತಾಲೂಕಿನ ವಸಂತನರಸಾಪುರ (Vasanthanarasapura) ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ಜೋದಾನಿ ಪ್ರೈ. ಲಿಮಿಟೆಡ್ ಸಂಸ್ಥೆಗೆ ಸೇರಿದ ಪೇಪರ್ ಗೋದಾಮು  ಇದಾಗಿದ್ದು, ಕೆಲಸದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್​ಪಿ ನಿವಾಸದ ಹೊರ ಭಾಗದಲ್ಲಿ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ

ಯಾದಗಿರಿ: ನಗರದ ಚಿತ್ತಾಪುರ ರಸ್ತೆಯಲ್ಲಿರುವ ಎಸ್​ಪಿ ನಿವಾಸದ ಹೊರ ಭಾಗದಲ್ಲಿ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ. ಬೇಸಿಗೆಕಾಲ ಆಗಿರುವುದರಿಂದ ಸ್ವಲ್ಪ ಬೆಂಕಿ ತಗುಲಿದರೂ ದೊಡ್ಡ ಮಟ್ಟದಲ್ಲಿ ಅದು ಹರಡುತ್ತದೆ. ಇದೀಗ ಒಣಗಿರುವ ಹುಲ್ಲಿಗೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ.  ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸರ ಸಹಕಾರದೊಂದಿಗೆ ಬೆಂಕಿ ನಂದಿಸಲಾಗಿದೆ. ಈ ಘಟನೆ ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಚಾಮರಾಜನಗರ ವ್ಯಾಪ್ತಿಯಲ್ಲಿ ಕಾಡಿಗೆ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವುದು ಮೇಲ್ನೊಟಕ್ಕೆ ಪತ್ತೆ

ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ

ಮಂಡ್ಯ: ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರವೇಶದಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಬೆಲ್ಟ್​ ಕಾರ್ಖಾನೆಗೆ ಬೆಂಕಿ ಬಿದ್ದಿತ್ತು. ಶಾರ್ಟ್ ಸರ್ಕ್ಯೂಟ್​​ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ ಬೆಲ್ಟ್ ಫ್ಯಾಕ್ಟರಿ ಹೊತ್ತಿ ಉರಿದಿತ್ತು. ಬೆಂಕಿ ಕೆನ್ನಾಲಿಗೆಗೆ ಇಡೀ ಕಾರ್ಖಾನೆ ಸುಟ್ಟು ಕರಕಲಾಗಿದೆ. ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿರುವ ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿತ್ತು. ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದ್ದರು. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 pm, Tue, 5 March 24

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್