ತುಮಕೂರು: ಹಫ್ತಾ ಕೊಡದಿದ್ದಕ್ಕೆ ಹಣ್ಣಿನ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ
ತುಮಕೂರಿನ ಸದಾಶಿವನಗರದ ಇಸ್ಮಾಯಿಲ್ ರಸ್ತೆಯಲ್ಲಿ ಹಣ್ಣಿನ ವ್ಯಾಪಾರಿ ಮಾಡುತ್ತಿದ್ದ ಸುಲ್ತಾನ್ ಎಂಬುವವರ ಮೇಲೆ ಹಫ್ತಾ ಕೊಡದಿದ್ದ ಕಾರಣಕ್ಕೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ತುಮಕೂರು: ಹಫ್ತಾ ಕೊಡದಿದ್ದಕ್ಕೆ ಅಂಗಡಿ ಮಾಲೀಕ ಸುಲ್ತಾನ್ ಎಂಬುವವರ ಮೇಲೆ ನಾಲ್ಕೈದು ಕಿಡಿಗೇಡಿಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಸದಾಶಿವನಗರ ಇಸ್ಮಾಯಿಲ್ ರಸ್ತೆಯಲ್ಲಿ ನಡೆದಿದೆ. ಕಳೆದ ಸೋಮವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹಣ್ಣಿನ ಅಂಗಡಿ ಮಾಲೀಕನು ಹಣ ಕೊಡದಿದ್ದಕ್ಕೆ ರಸ್ತೆ ತುಂಬಾ ಅಟ್ಟಾಡಿಸಿ ಹಲ್ಲೆ ಮಾಡಿದ್ದಾರೆ. ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಾಕಿಸ್ತಾನ ಪದ ಬಳಕೆ ವಿಚಾರ, ನಗರಸಭೆ ಮುಂದೆ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಬಾಗಲಕೋಟೆ: ಫೆ.8ರಂದು ನಗರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಾರ್ಡ್ ನಂ.24 ರ ಕಾಂಗ್ರೆಸ್ ನಗರಸಭೆ ಸದಸ್ಯ ಹಾಜಿಸಾಬ್ ದಂಡೀನ್ ಹಾಗೂ ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾದಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ನಮ್ಮ ವಾರ್ಡ್ ಅಭಿವೃದ್ಧಿ ಆಗಿಲ್ಲ ಎಂದು ಕಾಂಗ್ರೆಸ್ ನಗರಸಭೆ ಸದಸ್ಯ ಹಾಜಿಸಾಬ್ ದಂಡಿನ ಅವರು ಸಭೆಯ ಗಮನಕ್ಕೆ ತಂದಿದ್ದರು. ಇದಕ್ಕೆ ಪ್ರತಿಯಾಗಿ ಸಭೆಯಲ್ಲಿ ನಿಮ್ಮ ವಾರ್ಡ್ ಪಾಕಿಸ್ತಾನದಲ್ಲಿದೆಯೇ ಎಂದು ಉಪಾಧ್ಯಕ್ಷ ಬಸವರಾಜ ಅವರಾದಿ ಪ್ರಶ್ನಿಸಿದ್ದರು ಎನ್ನಲಾಗಿದೆ. ಪಾಕಿಸ್ತಾನ ಪದ ಬಳಕೆ ಹಿನ್ನೆಲೆ ಬಿಜೆಪಿ -ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಹೋಗಿತ್ತು.
ಇನ್ನು ಈ ಕೃತ್ಯಕ್ಕೆ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಕೂಡ ಗರಂ ಆಗಿದ್ದರು. ದಂಡಿನ್ ಅವರಿಗೆ ನಿಮ್ಮನ್ನು ಹೊರಗೆ ಹಾಕಬೇಕಾಗುತ್ತದೆ ಎಂದು ಆವಾಜ್ ಕೂಡ ಹಾಕಿದ್ದರು. ಘಟನೆ ಖಂಡಿಸಿ ಇಂದು ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ನಗರಸಭೆ ಮುಂದೆ ಪ್ರತಿಭಟನೆ ನಡೆದಿದ್ದು, ಹಿಟ್ಲರ್ ಶಾಸಕ ವೀರಣ್ಣ ಚರಂತಿಮಠಗೆ ಧಿಕ್ಕಾರ ಎಂದು ಕೂಗುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾದಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ ಒತ್ತಾಯ ಮಾಡಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ