ತುಮಕೂರು: ಪತಿಯಿಂದಲೇ ಪತ್ನಿಯ ಭೀಕರ ಕೊಲೆ, ದೇಹದ ಅಂಗಾಂಗ ಕತ್ತರಿಸಿ ವಿಕೃತಿ

ಕ್ಷುಲ್ಲಕ ಕಾರಣಕ್ಕೆ ನಡೆದ ಪತಿ ಪತ್ನಿ ಜಗಳ ಭೀಕರ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಆರೋಪಿಯು ಪತ್ನಿಯ ಕತ್ತು, ದೇಹದ ಇತರ ಅಂಗಾಂಗ ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಸದ್ಯ ಆರೋಪಿಯ ಬಂಧನವಾಗಿದ್ದು, ತನಿಖೆ ನಡೆಯುತ್ತಿದೆ.

ತುಮಕೂರು: ಪತಿಯಿಂದಲೇ ಪತ್ನಿಯ ಭೀಕರ ಕೊಲೆ, ದೇಹದ ಅಂಗಾಂಗ ಕತ್ತರಿಸಿ ವಿಕೃತಿ
ಘಟನಾ ಸ್ಥಳದ ಬಳಿ ಜನ ಜಮಾಯಿಸಿರುವುದು
Follow us
ಮಹೇಶ್ ಇ, ಭೂಮನಹಳ್ಳಿ
| Updated By: Ganapathi Sharma

Updated on: May 28, 2024 | 9:46 AM

ತುಮಕೂರು, ಮೇ 28: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಭೀಕರವಾಗಿ ಕೊಲೆ (Murder) ಮಾಡಿದ ಹೇಯ ಕೃತ್ಯ ತುಮಕೂರಿನ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ (Huliyurdurga) ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ (32), ಮೃತ ದುರ್ದೈವಿ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬಾತನೇ ಕೃತ್ಯ ಎಸಗಿದ್ದಾನೆ. ಆರೋಪಿಯು ಪತ್ನಿಯ ಕತ್ತು ಹಾಗೂ ದೇಹದ ಇತರ ಅಂಗಾಂಗಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ.

ಆರೋಪಿ ಶಿವರಾಮ್ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ ಎಂಬವರನ್ನು ಮದುವೆಯಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮರದ ಮಿಲ್ಲೊಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ. ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಸೋಮವಾರ ರಾತ್ರಿ ಕೂಡ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು. ಇದೇ ವೇಳೆ ಶಿವರಾಮ್ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದಾನೆ.

ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಿವರಾಮ್​​ನನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಒಂದೇ ವಾರದಲ್ಲಿ ಎರಡೆರೆಡು ಕೊಲೆ: ಬೆಂಗಳೂರಿನ ನಟೋರಿಯಸ್ ಕೊಲೆಗಾರನ ಹಿನ್ನೆಲೆ ಭಯಾನಕ

ಪತ್ನಿಯ ಕೊಂದು ಪತಿ ಆತ್ಮಹತ್ಯೆ

ಮದ್ಯಪಾನ ಮಾಡಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪುಲಗಡ್ಡಿ‌‌ಯಲ್ಲಿ ನಡೆದಿದೆ. ತಡರಾತ್ರಿ ಯಲ್ಲವ್ವ ನಂದಿಯನ್ನು ಹತ್ಯೆ ಮಾಡಿದ ಅಣ್ಣಪ್ಪ ನಂದಿ ನೇಣಿಗೆ ಶರಣಾಗಿದ್ದಾನೆ. ನಿನ್ನೆ ಸಂಜೆ ಎಮ್ಮೆ‌ ಮಾರಿ ಆ ಹಣದಿಂದ ಕಂಠಪೂರ್ತಿ ಕುಡಿದು ಬಂದಿದ್ದ ಅಣ್ಣಪ್ಪ. ಇದನ್ನ‌ ಪ್ರಶ್ನಿಸಿದ್ದಕ್ಕೆ ಯಲ್ಲವ್ವ ಹತ್ಯೆಗೈದು ಅಣ್ಣಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್