ತುಮಕೂರು: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು
Tumakuru News: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು, ನವೆಂಬರ್ 30: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ (suicide) ಶರಣಾಗಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. 11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹಾವು ಕಡಿದು ಎಂಬಿಬಿಎಸ್ ವಿದ್ಯಾರ್ಥಿ ಸಾವು
ಹಾವು ಕಡಿದು ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ನಿನ್ನೆ ಸಾಹೇ ಘಟಿಕೋತ್ಸವದಲ್ಲಿ ಪದವಿ ಪಡೆದಿದ್ದ ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಮೃತ ವಿದ್ಯಾರ್ಥಿ.
ಇದನ್ನೂ ಓದಿ: ಬೆಂಗಳೂರು: ಮಾದಕ ವಸ್ತು ಮಾರುತ್ತಿದ್ದ ಓರ್ವ ವಿದೇಶಿ ಪ್ರಜೆ ಸೇರಿದಂತೆ ಮೂವರ ಬಂಧನ
ನಿನ್ನೆ ಪಾರ್ಕಿನಲ್ಲಿ ಹಾವು ಕಡಿದಿರುವ ಶಂಕೆ ವ್ಯಕ್ತವಾಗಿದ್ದು, ಹಾವು ಕಡಿತ ಗಮನಿಸದೇ ಮನೆಗೆ ಬಂದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತನ ಶವ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸವಾರರು ಸಾವು
ಕೋಲಾರ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವಂತಹ ಘಟನೆ ಕೋಲಾರ ತಾಲೂಕಿನ ರಾಮಸಂದ್ರ ಗಡಿ ಭಾಗದಲ್ಲಿ ನಡೆದಿದೆ. ವೇಮಗಲ್ ಮೂಲದ ಪುನೀತ್, ಕೋಲಾರ ಪಟ್ಟಣದ ಜಗನ್ ಮೃತರು. ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
3 ಅಂಗಡಿಗಳಲ್ಲಿನ ಲಕ್ಷಾಂತರ ರೂಪಾಯಿ ಕಳ್ಳತನ
ಉತ್ತರ ಕನ್ನಡ: ಮೂರು ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನವಾಗಿರುವ ಘಟನೆ ಹಳಿಯಾಳ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಜ್ಯೋತಿ ಮೆಡಿಕಲ್, ಎ.ಕೆ. ಪ್ಯಾಷನ್ ಬಟ್ಟೆ ಅಂಗಡಿ ಹಾಗೂ ಸ್ಟಾರ್ ಪಾನ್ ಶಾಪ್ನಲ್ಲಿ ಕಳ್ಳತನವಾಗಿದೆ. ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.