Tumakuru News: 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ: ಅಳಿಯನ ಸ್ನೇಹಿತರಿಂದಲೇ ಹೀನ ಕೃತ್ಯ

ಮೊಮ್ಮಗಳ ವಿವಾಹಕ್ಕೆ ಬಂದಿದ್ದ ಅಳಿಯನ ಸ್ನೇಹಿತರಿಬ್ಬರು ಎಣ್ಣೆ ಪಾರ್ಟಿ ಮಾಡಿದ ಬಳಿಕ 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ.

Tumakuru News: 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ: ಅಳಿಯನ ಸ್ನೇಹಿತರಿಂದಲೇ ಹೀನ ಕೃತ್ಯ
ಸಾಂದರ್ಭಿಕ ಚಿತ್ರ
Follow us
|

Updated on:May 28, 2023 | 11:39 AM

ತುಮಕೂರು: ಅಳಿಯನ ಸ್ನೇಹಿತರಿಂದಲೇ(Friends) 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ(Rape) ನಡೆದಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೊಮ್ಮಗಳ ವಿವಾಹಕ್ಕೆ(Granddaughter’s Wedding) ಬಂದಿದ್ದ ಅಳಿಯನ(son-in-law) ಸ್ನೇಹಿತರಿಬ್ಬರು ಎಣ್ಣೆ ಪಾರ್ಟಿ ಮಾಡಿದ ಬಳಿಕ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಅಸ್ವಸ್ಥಗೊಂಡ ವೃದ್ಧೆಗೆ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನಲ್ಲಿ ಸಾಮೂಹಿಕ ಅತ್ಯಾಚಾರ

ಇನ್ನು ಮತ್ತೊಂದೆಡೆ ರಾಯಚೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮೇ 23 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಏಳನೇ ಮೈಲ್ ಕ್ಯಾಂಪ್ ಬಳಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರುಕ್ಕಮ್ಮ(46) ಕೊಲೆಯಾದ ಮಹಿಳೆ. ಪರಿಚಯಸ್ಥರೇ ಸೇರಿ ಅತ್ಯಾಚಾರ ಎಸಗಿ ಮಹಿಳೆ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣ ಸಂಬಂಧ ಆರೋಪಿ ಮಾಳಪ್ಪನನ್ನು ಬಂಧಿಸಲಾಗಿದೆ.

ಸಾಮೂಹಿಕ ಅತ್ಯಾಚಾರ ಎಸಗಿ ಮಹಿಳೆಯನ್ನು ಕಾಲುವೆ ಬಳಿ ತಳ್ಳಿ, ಗಂಭೀರವಾಗಿ ಗಾಯಗೊಳಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರುಕ್ಕಮ್ಮ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತಳ ಕುಟುಂಬಸ್ಥರು ಘಟನೆ ಬಳಿಕ ಆರೋಪಿ ಮಾಳಪ್ಪ ಸೇರಿ ಮೂವರ ವಿರುದ್ಧ ದೂರು ನೀಡಿದ್ದರು. ಸದ್ಯ ಆರೋಪಿ ಮಾಳಪ್ಪನನ್ನ ಪೊಲೀಸರು ಬಂಧಿಸಿದ್ದಾರೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kalaburagi News: ಸಿಮೆಂಟ್ ಕಂಪನಿ ವಿರುದ್ಧ ನಿರಂತರವಾಗಿ 172 ದಿನಗಳಿಂದ ಧರಣಿ ನಡೆಸುತ್ತಿದ್ದ ರೈತ ಸಾವು

ನಿವೇಶನ ವಿಚಾರಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಿವೇಶನದ ವಿಚಾರಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಗ್ರಾಮದ ಮಹಿಳೆ ಗೀತಾ ಮೇಲೆ ಆರೋಪಿ ಮಲ್ಲೇಶ್ ಹಲ್ಲೆ ನಡೆಸಿದ್ದಾರೆ. ಗ್ರಾಮ ಪಂಚಾಯ್ತಿ ಕಂಪ್ಯೂಟರ್ ಆಪರೇಟರ್ ಮಲ್ಲೇಶ್ ಹಾಗೂ ಸ್ನೇಹಿತರಿಂದ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ.

ಗೀತಾ ಬೋರೇಗೌಡ ಮತ್ತು ಮಲ್ಲೇಶ್ ಎಂಬುವವರ ನಡುವೆ ನಿವೇಶನ ವಿಚಾರಕ್ಕೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪರಸ್ಪರ ಪ್ರಕರಣ ದಾಖಲಾಗಿತ್ತು. ಬೋರೇಗೌಡ ಆರು ತಿಂಗಳ ಹಿಂದೆ ನ್ಯಾಯಾಲಯದ ಮೆಟ್ಟಿಲೇರಿದ್ದ. ನ್ಯಾಯಾಲಯ ಬೋರೇಗೌಡರ ಪರ ತೀರ್ಪು ನೀಡಿತ್ತು. ನಿನ್ನೆ ಅಡಿಪಾಯ ತೆಗೆಯುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಮಲ್ಲೇಶ್ ಹಾಗೂ ಅವನ ಸ್ನೇಹಿತರು. ಒತ್ತುವರಿ ಮಾಡಿ ಫೌಂಡೇಶನ್ ತೆಗೆಯುತ್ತಿದ್ದಿಯ ಎಂದು ಜಗಳ ತೆಗೆದು ಏಕಾಏಕಿ ಬೋರೇಗೌಡನ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಅಡ್ಡ ಬಂದ ಗೀತಾಳಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಾಳು ಮಹಿಳೆಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:29 am, Sun, 28 May 23

ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ