ತುಮಕೂರು: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

Tumakur News: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಪತಿ, ಪತ್ನಿ, ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ಎಸ್‌ಪಿ ಅಶೋಕ್ ವೆಂಕಟ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು
ಆತ್ಮಹತ್ಯೆ ಮಾಡಿಕೊಂಡ ಮನೆ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 26, 2023 | 10:36 PM

ತುಮಕೂರು, ನವೆಂಬರ್​​​​ 26: ಒಂದೇ ಕುಟುಂಬದ ಐವರು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಮೃತರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್‌ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದರು. ಸದ್ಯ ಸ್ಥಳಕ್ಕೆ ಎಸ್‌ಪಿ ಅಶೋಕ್ ವೆಂಕಟ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾಧಿಕಾರಿ ಹೇಳಿದ್ದಿಷ್ಟು 

ಜಿಲ್ಲಾಧಿಕಾರಿ ಶ್ರೀನಿವಾಸ್ ಪ್ರತಿಕ್ರಿಯಿಸಿದ್ದು, ಇವರು ಶಿರಾ ತಾಲ್ಲೂಕಿನ ಒಂದೇ ಕುಟುಂಬದವರು. ಕಳೆದ ಒಂದು ವರ್ಷದಿಂದ ತುಮಕೂರಿನಲ್ಲಿ ಇವರು ವಾಸಿಸುತ್ತಿದ್ದರು. ಐವರು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ನೇಣಿಗೆ ಶರಣಾಗಿದ್ದರೆ, ಮೂವರ ಕುತ್ತಿಗೆ ಫೈಬರ್‌ನಲ್ಲಿ ಬಿಗಿದ ಸ್ಥಿತಿಯಲ್ಲಿದೆ. ಸಾವಿಗೆ ಕಾರಣ ತಿಳಿಯಲು ಒಂದು ಡೆತ್ ನೋಟ್ ಸಿಕ್ಕಿದೆ. ಸಾಲ ಮಾಡಿಕೊಂಡಿರುವ ಹಾಗಿದೆ. ತಂದೆಯೇ ಮೊದಲು ಮಕ್ಕಳ ಕುತ್ತಿಗೆ ಬಿಗಿದು ನಂತರ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪರಿಹಾರ ಕೊಡಿಸಲು ಸಿಎಂ ರಿಲೀಫ್ ಫಂಡ್‌ಗೆ ಸರ್ಕಾರಕ್ಕೆ ಬರೆಯುತ್ತೇವೆ. ಕಬಾಬ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಡೆತ್ ನೋಟ್​ನಲ್ಲಿ ಏನಿದೆ?

ಸಾವಿಗೂ ಮುನ್ನ ಮೃತ ವ್ಯಕ್ತಿ ಗರೀಬ್ ಸಾಬ್ ದೊಡ್ಡಮ್ಮನಿಗೆ ಡೆತ್ ನೋಟ್ ಬರೆದಿದ್ದಾರೆ. ದೊಡ್ಡಮ್ಮನಿಗೆ ನಮಸ್ಕಾರಗಳು. ನಮಗೆ ಸಾಲ ಹೆಚ್ಚಾಗಿದೆ. ವ್ಯಾಪಾರದಲ್ಲಿ ಲಾಭ ಇಲ್ಲ. ಕೆಲಸಕ್ಕೆ ಹೋದರೆ ಹಣ ಬರ್ತಿಲ್ಲ. ಹೀಗಾಗಿ ಸಂಸಾರ ಮಾಡೋದು ಕಷ್ಟವಾಗಿದೆ. ಊಟ ಮಾಡೋಕು ಕಷ್ಟ ಆಗಿದೆ. ಊರಲ್ಲಿದ್ದಾಗ ಹೆಂಡತಿ ಅಣ್ಣ ಸಾದಿಕ್, ಹೆಂಡತಿಯ ತಂಗಿ ಯಾಸಿನ್ ನಮ್ಮ ಮೇಲೆ ವಿಷ ಕಾರಿದ್ದರು. ಅದಕ್ಕೆ ನಾವು ಇಲ್ಲಿಗೆ ಬಂದಿದ್ದೇವೆ.

ಇದನ್ನೂ ಓದಿ: ಮೆಣಸಿನಕಾಯಿ ಕಳ್ಳತನ: ಕಂಬಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿತ

ಇಲ್ಲಿ ಸಾಲ ಕಟ್ಟೋದು ಹೆಚ್ಚಾಗಿದೆ. ಬಾಡಿಗೆ ಮನೆಗೆ ನಲವತ್ತೈದು ಸಾವಿರ ಅಡ್ವಾನ್ಸ್ ಕೊಟ್ಟಿದ್ದೀವಿ. ಮೂರು ತಿಂಗಳ ಬಾಡಿಗೆ ಕೊಡೋದು ಬಾಕಿಯಿದೆ. ಉಳಿದ ಹಣವನ್ನ ನಮ್ಮ ದೊಡ್ಡಮ್ಮನಿಗೆ ವಾಪಾಸ್ ಕೊಡಿ. ಮನೆ ವಸ್ತುಗಳನ್ನ ನೀವು ತಗೋಳಿ. ಹದಿನೈದು ಸಾವಿರಾನ ಜರಿನ ಆಂಟಿಗೆ ಕೊಡಿ. ನಮ್ಮ ಬೈಕ್​ನ ನಮ್ಮ ಹಿರಿಯಣ್ಣ ಅಜಾಜ್​ಗೆ ಕೊಡಿ. ಅತ್ತಿಗೆ ಪರ್ವೀನ್ ಮತ್ತು ಅಣ್ಣನಿಗೆ ಫೋನ್ ಕೊಡಿ. ದೊಡ್ಡಮ್ಮ ಬೇಕಾದ ವಸ್ತುಗಳನ್ನ ಇಟ್ಟುಕೊಳ್ಳಬಹುದು ಅಥವಾ ಮಾರಿಕೊಳ್ಳಬಹುದು. ತುಂಬಾ ವಿಷಯ ಇದೆ, ಆದರೆ ಇದ್ರಲ್ಲಿ ಬರೆಯೋಕಾಗಲ್ಲ. ಈ ಪತ್ರವನ್ನ ಪೊಲೀಸರಿಗೆ ತೋರಿಸಿ. ಮತ್ತರ್ ಮಾಮನಿಗೆ ಕೊನೆಯ ನಮಸ್ಕಾರಗಳು.

ನಮ್ಮ ಸಾವಿಗೆ ಐದು ಜನರೇ ಕಾರಣ

ನಮ್ಮ ಸಾವಿಗೆ ಐದು ಜನರೇ ಕಾರಣ. ನಮ್ಮ ಮನೆಯ ಕೆಳಗಿನ ಖಲಂದರ್, ಅವನ ಮಗಳು ಸಾನಿಯಾ, ಅವನ ಹಿರಿಯ ಮಗ, ಮಹಡಿ ಮನೆಯ ಶಬಾನಾ, ಮತ್ತು ಅವಳ ಮಗಳು ಸಾನಿಯಾ ಈ ಎಲ್ಲರೂ ನಮ್ಮ ಸಾವಿಗೆ ಕಾರಣ. ನಮ್ಮ ಸಾವಿಗೆ ಗೃಹಮಂತ್ರಿ ಸರ್ ಕಾನೂನು ರೀತಿ ಶಿಕ್ಷೆ ಕೊಡಬೇಕು ಎಂದು ಬೇಡಿಕೊಳ್ತೀನಿ. ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ. ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕೈ ಮುಗಿದು ಕೇಳ್ಕೊತ್ತೀವಿ. ನಮ್ಮ ದೇಹವನ್ನ ಪೋಸ್ಟ್ ಮಾರ್ಟಮ್ ಮಾಡಬಾರದು. ಇನ್ನೂ ವಿಷಯ ಫೋನ್​ನಲ್ಲಿದೆ. ಇಂತಿ ನಿಮ್ಮ ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:01 pm, Sun, 26 November 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ