ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೊ ಕೇಸ್​ನಡಿ ಕುಣಿಗಲ್ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ, ಆಪ್ತ ಸಹಾಯಕ ಅರೆಸ್ಟ್​

ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲಮಂಜುನಾಥ ಸ್ವಾಮೀಜಿ ಅವರ ಆಪ್ತ ಸಹಾಯಕ ಅಭಿಲಾಷ್​ ದಾಖಲಿಸಿದ್ದ ಬೆದರಿಕೆ ಪ್ರಕರಣ ತನಿಖೆ ವೇಳೆ ಸ್ವಾಮೀಜಿಯ ಮತ್ತೊಂದು ಕೃತ್ಯ ಬಯಲಾಗಿದೆ. ಮಠದಲ್ಲೇ ಅಪ್ರಾಪ್ತ ಬಾಲಕಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎನ್ನಲಾಗಿದ್ದು ತಡರಾತ್ರಿ ಪೊಲೀಸರು ಸ್ವಾಮೀಜಿ ಹಾಗೂ ಆಪ್ತ ಸಹಾಯಕನನ್ನು ಬಂಧಿಸಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೊ ಕೇಸ್​ನಡಿ ಕುಣಿಗಲ್ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ, ಆಪ್ತ ಸಹಾಯಕ ಅರೆಸ್ಟ್​
ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲಮಂಜುನಾಥ ಸ್ವಾಮೀಜಿ
Edited By:

Updated on: Mar 08, 2024 | 9:06 AM

ತುಮಕೂರು, ಮಾರ್ಚ್​.08: ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ (Vidya Chowdeshwari Mutt) ಪೀಠಾಧ್ಯಕ್ಷ ಬಾಲಮಂಜುನಾಥ ಸ್ವಾಮೀಜಿ ಅವರನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಪೋಕ್ಸೊ ಕೇಸ್​ನಡಿ ಸ್ವಾಮೀಜಿ ಹಾಗೂ ಆಪ್ತ ಸಹಾಯಕ ಅಭಿಲಾಷ್​ನನ್ನು ಬಂಧಿಸಲಾಗಿದೆ. ಪೊಲೀಸರ ಪರಿಶೀಲನೆ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲಾಗಿದ್ದು ತುಮಕೂರು ಎಸ್​ಪಿ ಅಶೋಕ್ ಕೆ.ವಿ. ನೇತೃತ್ವದಲ್ಲಿ ಬಾಲಮಂಜುನಾಥ ಸ್ವಾಮೀಜಿ, ಅಭಿಲಾಷ್ ವಿರುದ್ಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಚರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ನನ್ನ ಬೆತ್ತಲೆ ವಿಡಿಯೋ ಮಾಡಿಕೊಂಡು, ನನ್ನನ್ನು ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆಂದು ಕಳೆದ ಫೆಬ್ರವರಿ 10 ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ದೂರು ದಾಖಲಿಸಿದ್ದರು. ಇದೇ ಘಟನೆ ಸಂಬಂಧ ಸ್ವಾಮೀಜಿಯ ಆಪ್ತ ಸಹಾಯಕ ಅಭಿಲಾಷ್ ಎಂಬಾತ ಎಫ್ಐಆರ್ ದಾಖಲಿಸಿದ್ದ. ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್ ಮಾಡಲಾಗಿದೆ ಎಂದು ಸ್ವಾಮೀಜಿಯ ಸೇವಕ ಅಭಿಷೇಕ್ ಆ್ಯಂಡ್ ಟೀಂ ಒಟ್ಟು 6 ಜನರ ಮೇಲೆ ದೂರು ನೀಡಿದ್ದರು. ಈ ಪ್ರಕರಣ ಬೆನ್ನಲ್ಲೇ ಸ್ವಾಮೀಜಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಹುಕ್ಕೇರಿ: ರಸ್ತೆ ಅಪಘಾತದಲ್ಲಿ ಮರಿ ಮಂಗ ಸಾವು, ತಾಯಿಯ ಆಕ್ರಂದನ: ಸ್ಥಳೀಯರಿಂದ ಆರೈಕೆ

ಮಠದಲ್ಲೇ ಅಪ್ರಾಪ್ತ ಬಾಲಕಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಅಭಿಷೇಕ್ ಕೊಟ್ಟ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪರಿಶೀಲನೆ ನಡೆಸಿದ ಪೊಲೀಸರು ಪರಿಶೀಲನೆ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲು ಮಾಡಿದ್ದಾರೆ. ಸದ್ಯ ಬಾಲಮಂಜುನಾಥ್ ಸ್ವಾಮೀಜಿ ಹಾಗೂ ಆತನ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ತಡರಾತ್ರಿ ಇಬ್ಬರನ್ನೂ ಬಂಧಿಸಲಾಗಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:54 am, Fri, 8 March 24