ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೌಢ್ಯಕ್ಕೆ 1 ತಿಂಗಳ ಮಗು ಬಲಿ ಪ್ರಕರಣ: ಕುಟುಂಬದವರ ವಿರುದ್ಧ ಎಫ್​ಐಆರ್ ​ದಾಖಲು

ಕಾಡುಗೊಲ್ಲ ಸಮುದಾಯದ ಮೌಢ್ಯಕ್ಕೆ ಒಂದು ತಿಂಗಳ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಂತಿ ವಸಂತಾ ಪತಿ ಸಿದ್ದೇಶ್, ಮಾವ ಚಿಕ್ಕಹುಲಿಯಪ್ಪ, ಸಿದ್ದೇಶ್ ಕುಟುಂಬ ಹಾಗೂ ಸಮುದಾಯದ ಮುಖಂಡರ ವಿರುದ್ಧ ಕೋರಾ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೌಢ್ಯಕ್ಕೆ 1 ತಿಂಗಳ ಮಗು ಬಲಿ ಪ್ರಕರಣ: ಕುಟುಂಬದವರ ವಿರುದ್ಧ ಎಫ್​ಐಆರ್ ​ದಾಖಲು
ಬಾಣಂತಿ ವಸಂತಾ
ಮಹೇಶ್ ಇ, ಭೂಮನಹಳ್ಳಿ Edited By: ವಿವೇಕ ಬಿರಾದಾರ

Updated on: Jul 28, 2023 | 10:41 AM

ತುಮಕೂರು: ಕಾಡುಗೊಲ್ಲ (Kadugolla) ಸಮುದಾಯದ ಮೌಢ್ಯಕ್ಕೆ ಒಂದು ತಿಂಗಳ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಂತಿ ವಸಂತಾ ಪತಿ ಸಿದ್ದೇಶ್, ಮಾವ ಚಿಕ್ಕಹುಲಿಯಪ್ಪ, ಸಿದ್ದೇಶ್ ಕುಟುಂಬ ಹಾಗೂ ಸಮುದಾಯದ ಮುಖಂಡರ ವಿರುದ್ಧ ಕೋರಾ ಠಾಣೆಯಲ್ಲಿ ಎಫ್​ಐಆರ್​​ (FIR) ದಾಖಲಾಗಿದೆ. ಇನ್ನು ಹಿರಿಯ ಸಿವಿಲ್​ ನ್ಯಾಯ್ಯಾಧೀಶರಾದ ನೂರುನ್ನಿಸ್ ನಿನ್ನೆ (ಜು.27) ರಂದು ಗ್ರಾಮಕ್ಕೆ ಭೇಟಿ ನೀಡಿ ಬಾಣಂತಿ ವಸಂತಾ ಆರೋಗ್ಯ ವಿಚಾರಿಸಿದರು. ಈ ವೇಳೆ ಅವರು ಗ್ರಾಮಸ್ಥರು ಹಾಗೂ ಸ್ಥಳೀಯ ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮೌಢ್ಯಕ್ಕೆ 1 ತಿಂಗಳ ಹಸುಗೂಸು ಬಲಿ

ಜಿಲ್ಲೆಯ ತುಮಕೂರು ತಾಲೂಕಿನ ಮಲ್ಲೇನಹಳ್ಳಿ ವ್ಯಾಪ್ತಿಯ ಗೊಲ್ಲರಹಟ್ಟಿಯಲ್ಲಿ ಮೌಢ್ಯ ಇನ್ನೂ ಜೀವಂತವಾಗಿದೆ. ವಸಂತಾ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವಳಿ‌ ಶಿಶುವಿಗೆ ಜನ್ಮ ನೀಡಿದ್ದರು. ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ಹೆಣ್ಣು ಮಗು ಆರೋಗ್ಯವಾಗಿತ್ತು. ಹೆರಿಗೆ ಮುಗಿಸಿ ವಾಪಸ್ ಗ್ರಾಮಕ್ಕೆ ಬಂದ ವಸಂತಾರಿಗೆ ಕಾಡುಗೊಲ್ಲ ಸಮುದಾಯದ ಮುಖಂಡರು ನಮ್ಮ ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಸೂತಕ ಆಗಲ್ಲ ಹೀಗಾಗಿ ನಾವು ಗ್ರಾಮದೊಳಗೆ ಬಿಟ್ಟುಕೊಳ್ಳುವುದಿಲ್ಲ, ಸೂತಕದ ಬಾಣಂತಿ ಊರ ಒಳಗೆ ಬಂದರೇ ಕೇಡು, ಎಂದು ಊರಾಚೆಯ ಜಮೀನಿನಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಸಿಲಿನಲ್ಲಿ ಏಕಾಂಗಿಯಾಗಿ ವಾಸ ಮಾಡುವಂತೆ ಆದೇಶ ನೀಡಿದ್ದರು.

ಇದನ್ನೂ ಓದಿ: ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು

ಗುಡಿಸಿಲಿನಲ್ಲಿ, ಮಳೆ-ಚಳಿಯಲ್ಲಿ ಏಕಾಂಗಿಯಾಗಿ ವಾಸವಿದ್ದಳು. ಚಳಿಯಿಂದ ಮಗುವಿಗೆ ವಿಪರೀತ ಶಿತವಾಗಿ ಪ್ರಾಣ ಬಿಟ್ಟಿತ್ತು. ಈ ಸುದ್ದಿ ಟಿವಿ9ನಲ್ಲಿ ಬಿತ್ತರಿಸುತ್ತಿದ್ದಂತೆ ಎಚ್ಚತ್ತ ಆರೋಗ್ಯ ಇಲಾಖೆ ಅಧಿಕಾರಿಗಳು ಮಲ್ಲೇನಹಳ್ಳಿ ಗೊಲ್ಲರಹಟ್ಟಿಗೆ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿದೆ. ಆರ್ ಸಿಎಚ್ ಮೋಹನ್, ಟಿಎಚ್ಓ ಲಕ್ಷ್ಮೀಕಾಂತ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿ ವಸಂತರನ್ನು ಮನೆಗೆ ಸೇರಿಸಿದ್ದಾರೆ. ಅಲ್ಲದೇ ಪ್ರತಿದಿನ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:41 am, Fri, 28 July 23

ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Loading...
Unable to load recommendations.
Follow Us