ತುಮಕೂರು: ಕುಣಿಗಲ್ ಬೈಪಾಸ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರ ಸಾವು
ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ಯಾಂಟರ್ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ರಾಮನಗರ ಜಿಲ್ಲೆಯವರು ಎಂದು ತಿಳಿದುಬಂದಿದೆ. ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತುಮಕೂರು, ಜೂನ್ 29: ತುಮಕೂರು (Tumakuru) ಜಿಲ್ಲೆಯ ಕುಣಿಗಲ್ ಬೈಪಾಸ್ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕ್ಯಾಂಟರ್ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16), ಭಾನು ಕಿರಣ್ ಗೌಡ (14) ಮೃತ ದುರ್ದೈವಿಗಳು . ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ನವರು ಎಂದು ತಿಳಿದುಬಂದಿದೆ. ಯುಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಣಿಗಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತ ಸಿಬೇಗೌಡ ಅವರು ಕುಟುಂಬ ಸಮೇತ ಮಾಗಡಿ ಪಟ್ಟಣದಲ್ಲಿ ವಾಸವಾಗಿದ್ದರು. ಸಿಬೇಗೌಡ ಅವರಿಗೆ ಇಬ್ಬರು ಹೆಣ್ಣು ಮಕ್ಕಳು, ಹಾಗೂ ಒಬ್ಬ ಗಂಡು ಮಗ ಇದ್ದನು. ಹಿರಿಯ ಮಗಳಿಗೆ ಮದುವೆ ಮಾಡಲಾಗಿದೆ. ಭಾನುಕಿರಣ್ ಗೌಡ ಕುಣಿಗಲ್ ಬಳಿಯಿರುವ ಅರವಿಂದ್ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದನು. ಭಾನುವಾರ (ಜೂ.29) ಅರವಿಂದ್ನನ್ನು ಶಾಲೆಯ ವಸತಿ ನಿಲಯಕ್ಕೆ ಬಿಟ್ಟು ಬರಲು ಸಿದ್ದೇಗೌಡ ಅವರು ಒಂದೇ ಕಾರಿನಲ್ಲಿ ಕುಟುಂಬ ಸಮೇತ ಬಂದಿದ್ದರು.
ಇದನ್ನೂ ಓದಿ: ಅಯ್ಯೋ ವಿಧಿಯೇ..ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ಜೀವ ಕಳೆದುಕೊಂಡ ವಿದ್ಯಾರ್ಥಿನಿ
ಕುಣಿಗಲ್ ಬೈಪಾಸ್ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಕಾರನ್ನು ಯುಟರ್ನ್ ತೆಗೆದುಕೊಳ್ಳುವಾಗ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾತ್ರಿ 8:30 ಸುಮಾರಿಗೆ ಘಟನೆ ನಡೆದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:42 pm, Sun, 29 June 25







