ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು: ಡಿಕೆ ಶಿವಕುಮಾರ್

ಬೆಂಗಳೂರು ಮೆಟ್ರೋವನ್ನು ತುಮಕೂರು ಜಿಲ್ಲೆಗೆ ವಿಸ್ತರಣೆ ಮಾಡುವ ಬೇಡಿಕೆಗಳ ನಡುವೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆ ಎರಡನೇ ಬೆಂಗಳೂರು ಆಗಿ ಪರಿವರ್ತನೆ ಆಗುವ ನಂಬಿಕೆ ನಮ್ಮಲ್ಲಿ‌ ಮೂಡುತ್ತಿದೆ. ಬೆಂಗಳೂರಿನ ಜನಸಂಖ್ಯೆಯನ್ನು ನಿಯಂತ್ರಣ ಮಾಡಲು ತುಮಕೂರು ಜಿಲ್ಲೆ ಸೂಕ್ತವಾಗಿದ್ದು, ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು ಎಂದರು.

ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು: ಡಿಕೆ ಶಿವಕುಮಾರ್
ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು ಎಂದ ಡಿಕೆ ಶಿವಕುಮಾರ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on: Jan 29, 2024 | 4:35 PM

ತುಮಕೂರು, ಜ.29: ಈ ಜಿಲ್ಲೆ ಎರಡನೇ ಬೆಂಗಳೂರು (Bengaluru) ಆಗಿ ಪರಿವರ್ತನೆ ಆಗುವ ನಂಬಿಕೆ ನಮ್ಮಲ್ಲಿ‌ ಮೂಡುತ್ತಿದೆ. ಬೆಂಗಳೂರಿನ ಜನ ನಿಯಂತ್ರಣ ಮಾಡಲು ತುಮಕೂರು (Tumkur) ಜಿಲ್ಲೆ ಸೂಕ್ತವಾಗಿದ್ದು, ಬೆಂಗಳೂರಿನ ಮುಂದಿನ 50 ವರ್ಷಗಳ ಅಭಿವೃದ್ಧಿಗಾಗಿ ತುಮಕೂರು ಜಿಲ್ಲೆಯನ್ನು ಈಗಿಂದಲೇ ಅಭಿವೃದ್ಧಿ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಬೆಂಗಳೂರು ಮೆಟ್ರೋವನ್ನು ತುಮಕೂರು ಜಿಲ್ಲೆಗೆ ವಿಸ್ತರಣೆ ಮಾಡುವ ಬೇಡಿಕೆಗಳ ನಡುವೆ ಈ ಹೇಳಿಕೆ ನೀಡಿದ್ದಾರೆ.

ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರ, ಶೈಕ್ಷಣಿಕ ಜಿಲ್ಲೆ ಇರುವುದು ತುಮಕೂರು ಜಿಲ್ಲೆ. ಹೆಚ್​ಎಎಲ್ ಈ ಜಿಲ್ಲೆಗೆ ಬಂದಿದ್ದು, ಕೈಗಾರಿಕಾ ಪ್ರದೇಶ ಇರುವ ಕಾರಣ ಈ ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕಿದೆ ಎಂದರು.

ಇದನ್ನೂ ಓದಿ: ತುಮಕೂರಿಗೆ ನೂತನ ಜಿಲ್ಲಾಡಳಿತ ಭವನ ಸೇರಿದಂತೆ ವಿವಿಧ ಯೋಜನೆಗಳಿಗೆ ಭರಪೂರ ಅನುದಾನ ಕೇಳಿದ ಪರಮೇಶ್ವರ್

ಚುನಾವಣೆ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೆವು. ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಇಂದು ಎಲ್ಲರ ಮನೆಗೂ ಹಣ ಹೋಗುತ್ತಿದೆ. ಅನ್ನಭಾಗ್ಯ ಸಿದ್ದರಾಮಯ್ಯ ಕನಸಿನ ಭಾಗ್ಯ ಎಂದರು.

ಸೋಲಾರ್ ವಿಸ್ತರಣೆಗೆ ಕ್ರಮ: ಡಿಕೆ ಶಿವಕುಮಾರ್

ಈ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಬದಲಾವಣೆ ಆಗಿದೆ‌. ನಾವು ಬರೀ ಗ್ಯಾರಂಟಿಗಳ ಬಗ್ಗೆ ಅಷ್ಟೇ ಯೋಚಿಸುತ್ತಿಲ್ಲ. ಮುಂದಿನ ಭವಿಷ್ಯಕ್ಕೂ ಯೋಚಿಸಲಾಗುತ್ತಿದೆ. ತುಮಕೂರಿಗೆ ಬಂದಾಗ ಪಾವಗಡ ಸೋಲಾರ್ ನೆನಪಾಗುತ್ತದೆ. ಅಲ್ಲಿನ ರೈತರು ಸೋಲಾರ್​ಗೆ ಜಾಗನೀಡಿ ನಮ್ಮ ಜೀವನ ಬದಲಾವಣೆ ಮಾಡಿದ್ದೀರಿ ಅಂತಿದ್ದಾರೆ. ಇನ್ನೂ ಹತ್ತು ಸಾವಿರ ಎಕರೆ ಜಾಗದಲ್ಲಿ ಸೋಲಾರ್ ವಿಸ್ತರಣೆ ಮಾಡಲಾಗುವುದು ಎಂದರು.

ದೇವರು ನಮಗೆ ವರನೂ ಕೊಡಲ್ಲ ಶಾಪವೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಅದನ್ನ ನಾವು ಬಳಸಬೇಕು. ಎತ್ತಿನಹೊಳೆ ಯೋಜನೆ ಜಿಲ್ಲೆಯಲ್ಲಿ ಹಾದು ಹೋಗುತ್ತಿದೆ. ಈ ಸರ್ಕಾರ ಬಂದ ಬಳಿಕ ಮಾತು ಕೊಟ್ಟಹಾಗೆ ನಡೆಯುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ