ತುಮಕೂರು: ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಬಲಿ ಪಡೆದ ಕೇಬಲ್ ವೈರ್

ತುಮಕೂರು(Tumakuru) ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಯಮನ ರೂಪದಲ್ಲಿ ಬಂದ ಕೇಬಲ್ ವೈರ್ , ನರ್ಸ್​ವೊಬ್ಬರನ್ನ ಬಲಿ ಪಡೆದಿದೆ. ಬೈಕ್​ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ತುಮಕೂರು: ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಬಲಿ ಪಡೆದ ಕೇಬಲ್ ವೈರ್
ಮೃತ ನರ್ಸ್​
ಮಹೇಶ್ ಇ, ಭೂಮನಹಳ್ಳಿ Edited By: ಕಿರಣ್ ಹನುಮಂತ್​ ಮಾದಾರ್

Updated on: Mar 22, 2024 | 9:08 PM

ತುಮಕೂರು, ಮಾ.22: ಸಾವು ಯಾವ ರೂಪದಲ್ಲಿ ಬರುತ್ತದೆಯೋ ಹೇಳಲು ಅಸಾಧ್ಯ. ಅದರಂತೆ ತುಮಕೂರು(Tumakuru)
ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಯಮನ ರೂಪದಲ್ಲಿ ಬಂದ ಕೇಬಲ್ ವೈರ್ , ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟೆ ಮೂಲದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್​ವೊಬ್ಬರನ್ನ ಬಲಿ ಪಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36), ಮೃತ ದುರ್ದೈವಿ.

ಘಟನೆ ವಿವರ

ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್​ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಸವಾರ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಲಕ್ಷ್ಮೀ ಬಾಯಿ ಅವರ ಮೃತದೇಹವನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಆ ಜೋಡಿ ಮದುವೆಯಾಗಿ ಹತ್ತು ವರುಷವಾಗಿತ್ತು, ಆದರೆ ಹರುಷವಿರಲಿಲ್ಲ, ಕೊನೆಗೂ ಪತಿ ನಿಗೂಢ ಸಾವು

ವಿಜಯಪುರದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ

ವಿಜಯಪುರ: ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದ ಇಬ್ರಾಹಿಂಪೂರ ಬಳಿಯ ರೆಲ್ವೆ ಹಳಿಯಲ್ಲಿ ನಡೆದಿದೆ. ರೈಲಿನ ಡಿಕ್ಕಿಯಿಂದ  ಯುವಕನ ದೇಹ ಎರಡು ತುಂಡಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಹೆಸರು ವಿಳಾಸ ಪತ್ತೆಯಾಗಿಲ್ಲ, ಸ್ಥಳಕ್ಕೆ ರೆಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಂಡಾಗಿದ್ದ ಮೃತದೇಹವನ್ನ ಪ್ಲಾಸ್ಟಿಕ್ ಚೀಲಗಳಲ್ಲಿ ಹಾಕಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಕುರಿತು ರೆಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us