Tumkur Politics: ಭಾರತಮಾತೆ ಫೋಟೊಗೆ ಬೆಂಕಿ ಹಚ್ಚಿದವರಿಗೆ ಬಿಜೆಪಿಯಲ್ಲಿ ಸ್ಥಾನಮಾನ: ಮಸಾಲೆ ಜಯರಾಂ ಗಂಭೀರ ಅರೋಪ

ಪರಿವರ್ತನಾ ಯಾತ್ರೆ ವೇಳೆ ಕಲ್ಲು ತೂರಾಟ ನಡೆಸಿದ್ದವರು ಹಾಗೂ ಭಾರತ ಮಾತೆ ಫೋಟೊಗೆ ಬೆಂಕಿ ಹಾಕಿದ್ದವರಿಗೆ ಜಿಲ್ಲಾ ಸಮಿತಿಯಲ್ಲಿ ಸ್ಥಾನಮಾನ ನೀಡಲಾಗಿದೆ ಎಂದು ಮಸಾಲಾ ಜಯರಾಂ ಹೇಳಿದ್ದಾರೆ.

Tumkur Politics: ಭಾರತಮಾತೆ ಫೋಟೊಗೆ ಬೆಂಕಿ ಹಚ್ಚಿದವರಿಗೆ ಬಿಜೆಪಿಯಲ್ಲಿ ಸ್ಥಾನಮಾನ: ಮಸಾಲೆ ಜಯರಾಂ ಗಂಭೀರ ಅರೋಪ
ತುರುವೇಕೆರೆ ಶಾಸಕ ಮಸಾಲೆ ಜಯರಾಂ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 14, 2021 | 3:41 PM

ತುಮಕೂರು: ಬಿಜೆಪಿ ಜಿಲ್ಲಾ ಘಟಕದಲ್ಲಿ ಆಂತರಿಕ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲಾ ಸಮಿತಿ ರಚನೆ ಕುರಿತು ಹಲವು ಬಾರಿ ತಮ್ಮ ಅಸಮಾಧಾನ ಹೊರಹಾಕಿರುವ ತುರುವೇಕೆರೆ ಶಾಸಕ ಮಸಾಲೆ ಜಯರಾಂ ಮತ್ತೊಮ್ಮೆ ಬಿಜೆಪಿ ರಾಜ್ಯ ಘಟಕದ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ತಮ್ಮ ವಿರುದ್ಧ ಕೆಲಸ ಮಾಡಿದವರಿಗೆ ಪಕ್ಷದ ಜಿಲ್ಲಾ ಸಮಿತಿಯಲ್ಲಿ ಪ್ರಮುಖ ಸ್ಥಾನಮಾನ ನೀಡಿರುವ ಬಗ್ಗೆ ಪ್ರಬಲವಾಗಿ ಆಕ್ಷೇಪಿಸಿದ್ದಾರೆ.

ಹಲವು ಬಾರಿ ನನ್ನ ವಿರುದ್ಧ ಕೆಲಸ ಮಾಡಿದವರನ್ನು ಸಂಘಟನೆಗೆ ಸೇರ್ಪಡೆ ಮಾಡಲಾಗಿದೆ. ಪಕ್ಷದ ಬಾವುಟ ಹಿಡಿಯದವರಿಗೆ ಸ್ಥಾನಮಾನ ನೀಡಲಾಗಿದೆ. ಹಳೆಯ ಬಿಜೆಪಿ ಕಾರ್ಯಕರ್ತರಿಗೆ ಮಹತ್ವ ಸಿಗುತ್ತಿಲ್ಲ. ಈ ವಿಷಯವನ್ನು ಎಲ್ಲರ ಗಮನಕ್ಕೆ ತಂದಿದ್ದರೂ ಯಾರೊಬ್ಬರೂ ಗಮನ ಹರಿಸುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪರಿವರ್ತನಾ ಯಾತ್ರೆ ವೇಳೆ ಕಲ್ಲು ತೂರಾಟ ನಡೆಸಿದ್ದವರು ಹಾಗೂ ಭಾರತ ಮಾತೆ ಫೋಟೊಗೆ ಬೆಂಕಿ ಹಾಕಿದ್ದವರಿಗೆ ಜಿಲ್ಲಾ ಸಮಿತಿಯಲ್ಲಿ ಸ್ಥಾನಮಾನ ನೀಡಲಾಗಿದೆ. ಪಕ್ಷ ವಿರೋಧಿಗಳಿಗೆ ಸ್ಥಾನಮಾನ ನೀಡಿದರೆ ಬೇಸರವಾಗುತ್ತೆ ಎಂದು ಅವರು ಹೇಳಿದ್ದಾರೆ. ಈಚಿನ ದಿನಗಳಲ್ಲಿ ಹಲವು ಬಾರಿ ತಮ್ಮ ಅಸಮಾಧಾನವನ್ನು ಮಸಾಲೆ ಜಯರಾಂ ಹೊರಹಾಕಿದ್ದಾರೆ. ತಮ್ಮ ಹೇಳಿಕೆಗಳ ಹಿಂದೆ ಸಚಿವನಾಗುವ ಆಕಾಂಕ್ಷೆಯಿದೆ ಎಂಬ ಮಾತುಗಳಿಗೆ ಪ್ರತಿಕ್ರಿಯಿಸಿರುವ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಬೇರೆ ರೀತಿ ರಾಜಕಾರಣ ನಡೀತಿದೆ ಎಂದು ಹೇಳಿರುವ ಅವರು, ಚುನಾವಣೆ ವೇಳೆ ನನ್ನ ವಿರುದ್ಧ ಕೆಲಸ ಮಾಡಿದವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ಶಾಸಕರಾದ ನಮ್ಮನ್ನು ಗಣನೆಗೆ ತೆಗೆದುಕೊಳ್ಳದೆ ವಿರೋಧಿಗಳ ಬೆಂಬಲಿಗರನ್ನು ಬೋರ್ಡ್ ಮೆಂಬರ್ ಮಾಡಿದ್ದಾರೆ. ನಮ್ಮನ್ನು ಕಡೆಗಣಿಸಲಾಗಿದೆ. ಎಂಟು ಹತ್ತು ತಿಂಗಳಿನಿಂದ ಇದೇ ರೀತಿ ಆಗುತ್ತಿದೆ. ಇಂಥ ಕಾರಣಗಳಿಂದಾಗಿಯೇ ಮಾಜಿ ಶಾಸಕ ಸುರೇಶ್ ಗೌಡ ರಾಜೀನಾಮೆ ಕೊಟ್ಟರು. ಇಂಥ ಹಲವು ವಿಷಯಗಳನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು.

ನನ್ನ ವಿರುದ್ಧ ಮತ ಹಾಕಿದವರನ್ನೇ ನನ್ನ ಮೇಲೆ ಕೂರಿಸಿದ್ದಾರೆ. ನಾನು ಕೆಳಗೆ‌ ಕುಳಿತು ಅವರು ಮೇಲೆ ಕುಳಿತರೆ ನನಗೆ ಹೇಗೆ ಅನ್ನಿಸಬೇಕು? ಯಡಿಯೂರಪ್ಪ ಯಾತ್ರೆಗೆ ಕಲ್ಲು ಹೊಡೆದವರು ಇಂದು ಸೆಂಟ್ರಲ್ ಬೋರ್ಡ್​ಗಳಿಗೆ ಮೆಂಬರ್ ಆಗಿದ್ದಾರೆ. ರಾಜಕಾರಣ ಬೇಡ ಅಂತಾದರೆ ನಾನು ಮನೆಯಲ್ಲಿ ಇರುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: Health Tips: ಆಹಾರದಲ್ಲಿನ ಈ ಕೆಲವು ಮಸಾಲೆ ಪದಾರ್ಥಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ

ಇದನ್ನೂ ಓದಿ: ಬಿಜೆಪಿಗೆ ಹೋಗುವಂತೆ ನಮಗೆ ಸಿದ್ದರಾಮಯ್ಯ ಹೇಳಿರಲಿಲ್ಲ; ಕುಮಾರಸ್ವಾಮಿಗೆ ಎಸ್.ಟಿ. ಸೋಮಶೇಖರ್ ತಿರುಗೇಟು

Published On - 3:37 pm, Thu, 14 October 21

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು