Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ದುರ್ಮರಣ

ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ನಿತೇಶ್(14), ಪ್ರಜ್ವಲ್(13) ಮೃತ ದುರ್ದೈವಿಗಳು.

ತುಮಕೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ದುರ್ಮರಣ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 20, 2023 | 11:21 AM

ತುಮಕೂರು: ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ನಿತೇಶ್(14), ಪ್ರಜ್ವಲ್(13) ಮೃತ ದುರ್ದೈವಿಗಳು. ಮನೆ ಮೇಲೆ ಆಟವಾಡುತ್ತಿದ್ದಾಗ ತಂತಿ ತಗುಲಿ ಈ ದುರಂತ ಸಂಭವಿಸಿದ್ದು, ಕೆಇಬಿ(KEB) ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್​ ಉಳಿಸಿಕೊಂಡಿದ್ದ ಜೀವ ಇಂದು‌ ಕೊನೆ ಉಸಿರು

ದಾವಣಗೆರೆ: ಚನ್ನಗಿರಿ‌‌ ಪಟ್ಟಣದ ಕಣದಸಾಲು ಬಡಾವಣೆ ನಿವಾಸಿ ಕುಮಾರ್ ಮತ್ತು ಮಂಜುಳಾ ದಂಪತಿಗಳ ಪುತ್ರಿ ಕೆ.ಪ್ರೀತಿ (18) ನಿಧನ ಹೊಂದಿದ್ದಾರೆ. ಪ್ರೀತಿ 2017ರಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದಳು. ಇದನ್ನ ಗಮನಿಸಿದ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್ ಬರೋಬ್ಬರಿ 12.50 ಲಕ್ಷ ರೂಪಾಯಿ ಖರ್ಚು ಮಾಡಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಚಿಕಿತ್ಸೆ ಪಡೆದ ಕಳೆದ ಆರು ವರ್ಷಗಳಿಂದ ಆರೋಗ್ಯವಾಗಿದ್ದ ಪ್ರೀತಿ. ಪುನೀತ್ ನಿಧನದ ಬಳಿಕ ತೀವ್ರ ಬೇಸರವಾಗಿದ್ದಳು. ನಿತ್ಯ ಪುನೀತ್ ಪೋಟೋಗೆ ಪೂಜೆ ಸಲ್ಲಿಸುತ್ತಿದ್ದ ಪ್ರೀತಿ ಕಳೆದ ಎರಡು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಕೊನೆಯುಸಿರೆಳೆದಿದ್ದಾಳೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ