ತುಮಕೂರು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 10, 2023 | 2:45 PM

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಾರ ಪೂರ್ತಿ ಶಾಲೆಗೆ ಹೋಗಿ, ಭಾನುವಾರ ಬಂತೆಂದರೆ ಸಾಕು ಸ್ನೇಹಿತರೊಟ್ಟಿಗೆ ಕೆರೆ, ಹಳ್ಳ ಇನ್ನು ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದರಂತೆ ಇಂದು(ಸೆ.10) ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ತುಮಕೂರು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಪ್ರಾತಿನಿಧಿಕ ಚಿತ್ರ
Follow us on

ತುಮಕೂರು, ಸೆ.10: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಧಾರುಣ ಘಟನೆ ತುಮಕೂರು (Tumakur) ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಮ್ಮನಹಳ್ಳಿ ಬಳಿ ನಡೆದಿದೆ. ರಾಕೇಶ್(14), ಹಾಗೂ ಧನುಷ್(15) ಮೃತರು. ಹೌದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಾರ ಪೂರ್ತಿ ಶಾಲೆಗೆ ಹೋಗಿ, ಭಾನುವಾರ ಬಂತೆಂದರೆ ಸಾಕು ಸ್ನೇಹಿತರೊಟ್ಟಿಗೆ ಕೆರೆ, ಹಳ್ಳ ಇನ್ನು ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದರಂತೆ ಇಂದು(ಸೆ.10) ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ದೇಹಗಳ ಮರಣೋತ್ತರ ಪರೀಕ್ಷೆ

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಈಗಾಗಲೇ ಮೃತದೇಹಗಳನ್ನು ಕೆರೆಯಿಂದ ಹೊರತೆಗೆದು ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಇದಾದ ನಂತರ‌ ಪೊಲೀಸರು ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರ ಮಾಡಲಿದ್ದಾರೆ. ಜೊತೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಪಿಜ್ಜಾ ಹಿಡಿದು ಮಧ್ಯರಾತ್ರಿ ಗೆಳತಿ ಮನೆಯ ಟೆರೇಸ್​ಗೆ ಡೇಟ್​ಗೆ ಹೋದ ಯುವಕ, ಹುಡುಗಿ ತಂದೆಯಿಂದ ಬಚಾವಾಗಲು ಹೋಗಿ ಸಾವು

ವಿದ್ಯುತ್ ಸ್ಪರ್ಶಿಸಿ ಲೈನ್​ಮ್ಯಾನ್ ಸಾವು‌

ಕೊಡಗು: ವಿರಾಜಪೇಟೆ ತಾಲೂಕಿನ ಕುಟ್ಟಂದಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಚೆಸ್ಕಾಂ ಲೈನ್​ಮ್ಯಾನ್ ಬಸವರಾಜ್ ತೆಗ್ಗಿ(26) ಎಂಬುವವರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಚೆಸ್ಕಾಂ ಸಿಬ್ಬಂದಿ ಬಸವರಾಜ್ ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಗ್ರಾಮದ ನಿವಾಸಿಯಾಗಿದ್ದು, ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ನಡೆದಿದೆ. ಇನ್ನು ಬಸವರಾಜ್ ಅವರು ಕಳೆದ 5 ವರ್ಷಗಳಿಂದ ವಿರಾಜಪೇಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಕುರಿತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ