ಕರ್ತವ್ಯಲೋಪ: ಆರ್ಡಿಪಿಆರ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್ಗಳು ಅಮಾನತು
ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್'ಗಳನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು: ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ (Rural Development and Panchayat Raj) ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್’ಗಳನ್ನು ಅಮಾನತು (Suspension) ಮಾಡಲಾಗಿದೆ. ತುಮಕೂರಿನ (Tumkur) ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆ ಹಿನ್ನೆಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ವಿಳಂಬ ಧೋರಣೆ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆಯಿಂದ ಸುಮಾರು ₹2.76 ಕೋಟಿ ರೂ. ನಷ್ಟಕ್ಕೆ ನೇರ ಕಾರಣವಾಗಿದ್ದ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ಸೇವೆಯಿಂದ ಅಮಾನತು ಮಾಡಲಾಗಿದೆ.
ಅದೇ ರೀತಿ, ಯಾದಗಿರಿಯ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರ್ಕಾರಕ್ಕೆ ಒಟ್ಟು ₹1.3 ಕೋಟಿ ರೂ. ನಷ್ಟ ಮಾಡಿದ್ದ ಕಾರ್ಯಪಾಲಕ ಇಂಜಿನಿಯರ್ ಬಸವರಾಜ. ಕೆ .ಹಲಚೇರ ಸೇವೆಯಿಂದ ಅಮಾನತು.
ಇದನ್ನೂ ಓದಿ: ತುಮಕೂರಲ್ಲಿ ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದ್ದು, ಕೆಲವೆಡೆ ಅಮಾನತು ಶಿಕ್ಷೆಯೂ ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ್ದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿತ್ತು.
ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ಶಿಕ್ಷಕ ಶಾಂತಮೂರ್ತಿ ರಾಜ್ಯ ಸರ್ಕಾರದ ವಿರುದ್ಧದ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. ಇದನ್ನು ಕಾಂಗ್ರೆಸ್ ಬೆಂಬಲಿಗರು ಟೀಕಿಸಿದರೆ ಇನ್ನಿತರರು ಶಿಕ್ಷಕರ ಬೆನ್ನಿಗೆ ನಿಂತಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:26 pm, Thu, 8 June 23