AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ; ಇಬ್ಬರು ಮಹಿಳಾ ಸಿಬ್ಬಂದಿ ಪೈಕಿ ಓರ್ವರ ಸ್ಥಿತಿ ಗಂಭೀರ

ರಾಜ್ಯದಲ್ಲಿ ಕಳೆದ 5 ದಿನಗಳಿಂದ SIR ಪ್ರಕ್ರಿಯೆ ನಡೆಯುತ್ತಿದೆ. ಸಾಲು ಸಾಲು ಲೋಪ ಆರೋಪಗಳ ಮಧ್ಯೆ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಇಬ್ಬರು ವಿಎಒ ಸಿಬ್ಬಂದಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು: SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ; ಇಬ್ಬರು ಮಹಿಳಾ ಸಿಬ್ಬಂದಿ ಪೈಕಿ ಓರ್ವರ ಸ್ಥಿತಿ ಗಂಭೀರ
ವಿಎಒ ಭುವನಾ, ವಿಎಇ ಸಹನಾImage Credit source: tv9 kannada
Jagadisha B
| Edited By: |

Updated on: Jul 04, 2026 | 4:28 PM

Share

ಮುಖ್ಯಾಂಶಗಳು

  • SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ
  • ಇಬ್ಬರು ಮಹಿಳಾ ಸಿಬ್ಬಂದಿಗೆ ಗಂಭೀರ ಗಾಯ
  • ಓರ್ವ ಸಿಬ್ಬಂದಿ ಸಾವು ಬದುಕಿನ ಮಧ್ಯೆ ಹೋರಾಟ

ತುಮಕೂರು, ಜುಲೈ 04: ರಾಜ್ಯಾದ್ಯಂತ ಎಸ್​ಐಆರ್ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಕೆಲವೆಡೆ ಎಸ್​ಐಆರ್ ನಡೆಸುವ ಬಿಎಲ್​ಒಗಳು ನಿಯಮಗಳನ್ನ ಗಾಳಿಗೆ ತೂರಿರುವುದು, ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಈ ಮಧ್ಯೆ SIR ಕಾರ್ಯಕ್ಕಾಗಿ ತೆರಳುತ್ತಿದ್ದ ಇಬ್ಬರು ಸಿಬ್ಬಂದಿ ಅಪಘಾತದಲ್ಲಿ (Accident) ಗಂಭೀರ ಗಾಯಗೊಂಡಿರುವಂತಹ ಘಟನೆ ತುಮಕೂರಿನಲ್ಲಿ ನಡೆದಿದೆ. ಡಿಸಿ ಒತ್ತಡ ಹಾಕಿದ್ದಕ್ಕೆ, ಬೇಗನೆ ತೆರಳುತ್ತಿದ್ದಾಗ ಹೀಗಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ನಡೆದಿದ್ದೇನು?

SIR ಕರ್ತವ್ಯಕ್ಕೆ ತೆರಳುತ್ತಿದ್ದ ವಿಎಒ ಭುವನಾ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ತುಮಕೂರು ತಾಲೂಕಿನ ಗೂಳೂರು ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಸದ್ಯ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯವಾಗಿದ್ದು, ಭುವನಾ ಪ್ರಜ್ಞಾಶೂನ್ಯರಾಗಿದ್ದಾರೆ.

ಭುವನಾ ಅಪಘಾತದ ಬಗ್ಗೆ ಮಾಹಿತಿ ನೀಡಿದ ಡಿಸಿ ಶುಭಕಲ್ಯಾಣ್

ಗಾಯಾಳು ಭುವನಾ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿ ಶುಭಕಲ್ಯಾಣ್, 2016ರಿಂದ ಭುವನಾ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದ್ದು, ಭುವನಾಗೆ ಅಪಘಾತದಲ್ಲಿ ಗಾಯವಾಗಿದೆ. ಘಟನೆಯಿಂದ ವೈಯಕ್ತಿಕ ಹಾಗೂ ಇಲಾಖೆ ಸಿಬ್ಬಂದಿಗೆ ನೋವಾಗಿದೆ ಎಂದರು.

ಇದನ್ನೂ ಓದಿ: ನೆಲಮಂಗಲದಲ್ಲಿ ಬಿಎಲ್‌ಒಗಳ ಕಳ್ಳಾಟ ಬಯಲು: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು ಎಸ್‌ಐಆರ್ ಪತ್ರ ವಿತರಣೆ!

ಟಿ.ಬೇಗೂರಿನಿಂದ ಬಸ್​ನಲ್ಲಿ ಬಂದಿದ್ದ ಭುವನಾ, ಬಸ್ ನಿಲ್ದಾಣದಿಂದ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಅಪಘಾತವಾಗಿದೆ. ಭುವನಾ ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯವಾಗಿದ್ದು, ಪ್ರಜ್ಞಾಶೂನ್ಯರಾಗಿದ್ದಾರೆ, ಆದರೆ ಹಾರ್ಟ್​ಬೀಟ್ ಇದೆ. ಭುವನಾ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಪಘಾತದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಗೆ ಯಾರನ್ನು ಹೊಣೆ ಮಾಡಬೇಕೆಂದು ನನಗೆ ಗೊತ್ತಾಗುತ್ತಿಲ್ಲ. ಹುಟ್ಟು ಸಾವು ನಮ್ಮ ಕೈಯಲ್ಲಿಲ್ಲ, ಭುವನಾ ಅಪಘಾತ ಆಕಸ್ಮಿಕ ಘಟನೆ. ನಮಗೂ ಕುಟುಂಬವಿದೆ, ಭುವನಾ ಕುಟುಂಬ ಸದಸ್ಯರ ನೋವು ನಮಗೂ ತಿಳಿಯುತ್ತದೆ ಎಂದು ಡಿಸಿ ಶುಭಕಲ್ಯಾಣ್ ಹೇಳಿದ್ದಾರೆ.

ಮತ್ತೊಬ್ಬ ಸಿಬ್ಬಂದಿಗೂ ಅಪಘಾತ

ಇನ್ನು ಇದೇ ರೀತಿಯಾಗಿ SIR ಕರ್ತವ್ಯಕ್ಕೆ ತೆರಳುತ್ತಿದ್ದ ಮತ್ತೊಬ್ಬ ಸಿಬ್ಬಂದಿಗೂ ಅಪಘಾತವಾಗಿದ್ದು, ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹುಣಸೆಘಟ್ಟ ವೃತ್ತದ ಬಳಿ ಬೆಳಗ್ಗೆ 7.30ಕ್ಕೆ ದ್ವಿಚಕ್ರ ವಾಹನದಿಂದ ಬಿದ್ದು ವಿಎಇ ಸಹನಾ ಗಾಯಗೊಂಡಿದ್ದಾರೆ. ವಿಡಿಯೋ ಕಾಲ್ ಮೂಲಕ SIR ಪ್ರಕ್ರಿಯೆ ತೋರಿಸುವಂತೆ ತಹಶೀಲ್ದಾರ್ ಲೋಕೇಶ್​​ ಸೂಚನೆಯಂತೆ ಸ್ಥಳ ತೋರಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಸದ್ಯ ಗಾಯಾಳು ಸಹನಾ ತಿಪಟೂರಿನ ವೈಭವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿಸಿ ಕಚೇರಿ ಎದುರು ವಿಎಒಗಳು ಧರಣಿ

ಇನ್ನು ಈ ಘಟನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ತುಮಕೂರು ಡಿಸಿ ಕಚೇರಿ ಎದುರು ವಿಎಒಗಳು ಧರಣಿ ಮಾಡುತ್ತಿದ್ದಾರೆ. ಈ ವೇಳೆ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮಗಳ ವೈಯಕ್ತಿಕ ಪ್ರತಿಷ್ಠೆಗಾಗಿ ನೌಕರರನ್ನು ಬಲಿಪಶು ಮಾಡುತ್ತೀರಾ? ಜಿಲ್ಲಾಧಿಕಾರಿಗಳಿಗೆ ಕಾರು, ಬಂಗಲೆ ಎಲ್ಲೂ ಇದೆ, ಆದರೆ ನಮ್ಮ ಬಡ ನೌಕರರಿಗೆ ಏನ್ ಸವಲತ್ತು ಇದೆ ಎಂದು ನೇರವಾಗಿ ಪ್ರಶ್ನೆ ಮಾಡಿದ್ದಾರೆ. ಮುಖ್ಯ ಕಾರ್ಯದರ್ಶಿ ಜೊತೆ ಮಾತನಾಡಿ ರಾಜ್ಯಮಟ್ಟದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
Video: ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು!
Video: ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು!