ಕಂಬಳ ನೋಡಲು ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ದುರಂತ ಅಂತ್ಯ!
ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಆಯೋಜಿಸಲಾಗಿದ್ದು, ಭಾರೀ ಬೆಂಬಲ ವ್ಯಕ್ತವಾಗಿದೆ. ಅರಮನೆ ಮೈದಾನದಲ್ಲಿ ಕೋಣಗಳ ಓಟ ನೋಡಲು ಬೆಂಗಳೂರಿನ ಮೂಲೆ ಮೂಲೆಗಳಿಂದ ಆಗಮಿಸಿದ್ದು, ಮಧ್ಯರಾತ್ರಿ ವರೆಗೂ ಜನ ಕಿಕ್ಕಿರಿದು ಸೇರಿದ್ದಾರೆ. ಆದ್ರೆ, ಈ ಕಂಬಳವನ್ನು ನೋಡಲು ಮಂಗಳೂರಿನ ಬಂದಿದ್ದ ಇಬ್ಬರು ದುರಂತ ಅಂತ್ಯಕಂಡಿದ್ದಾರೆ.
ತುಮಕೂರು, (ನವೆಂಬರ್ 26): ಬೋರ್ವೆಲ್ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ, ದಕ್ಷಿಣ ಕನ್ನಡ ಜಿಲ್ಲೆಯ ಪರೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶಾನ್ ಶೆಟ್ಟಿ(20) ಹಾಗೂ ಭಟ್ಟರ ತೋಟದ ಫಿಲಿಪ್ಸ್ ನೇರಿ(32) ಮೃತ ದುರ್ದೈವಿಗಳು. ಬೆಂಗಳೂರಿನಲ್ಲಿ ಕಂಬಳ (Bengaluru Kambala) ನೋಡಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕರಾವಳಿ ಭಾಗದಲ್ಲಿ ಕಂಬಳ ಫೇಮಸ್, ಅಲ್ಲಿನ ಜನರಿಗೆ ಕಂಬಳ ಅಂದ್ರೆ ಅಚ್ಚುಮೆಚ್ಚು, ಅದಕ್ಕಾಗಿಯೇ ಮಂಗಳೂರಿನ ಬೆಂಗಳೂರಿಗೆ ಕಂಬಳ ನೋಡಲು ಬಂದಿದ್ದರು. ಆದ್ರೆ, ಕಂಬಳ ಕಣ್ತುಂಬಿಕೊಂಡು ವಾಪಸ್ ಮನೆಗೆ ಹೋಗಬೇಕಿದ್ದರೆ ಈ ದುರಂತ ಸಂಭವಿಸಿದೆ.
ಇದನ್ನೂ ಓದಿ: ಬೆಂಗಳೂರು ಕಂಬಳ 2ನೇ ದಿನ: ನಟ ದರ್ಶನ ಭಾಗಿ ಸಾಧ್ಯತೆ, ಅರ್ಜುನ್ ಜನ್ಯರಿಂದ ಸಂಗೀತ ರಸ ಸಂಜೆ
ಇನ್ನು ಲಾರಿ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಪೊಲೀಸರು ಹಾಗೂ ಸ್ಥಳೀಯರು ಹರಸಾಹಸಪಟ್ಟು ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಡಿವೈಡರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ
ಬೆಂಗಳೂರು: ಮತ್ತೊಂದೆಡೆ ಕೆಎಸ್ಆರ್ಟಿಸಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 20 ಪ್ರಯಾಣಿಕರು ಪ್ರಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಬಳಿ ಈ ಘಟನೆ ನಡೆದಿದೆ, ಇನ್ನು ಬಸ್ನಲ್ಲಿ ಮುಂದೆ ಕುಳಿತಿದ್ದ ಮಹಿಳೆಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಸೋಮವಾರಪೇಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಬಸ್ ಅನ್ನು ಕ್ರೇನ್ ಮೂಲಕ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:47 am, Sun, 26 November 23