ಫೋಟೋ ತೆಗೆಸುವ ನೆಪ ಹೇಳಿ ಬಾಲಕಿಯ ಕರೆ ತಂದಿದ್ದ ಮಹಿಳೆ, ಇಬ್ಬರು ದುಷ್ಟರು ಸೇರಿ ಬಾಲಕಿಯ ಮೇಲೆ ಅತ್ಯಾಚಾರ

ಎಲ್ಐಸಿ ಬಾಂಡ್ ಫೋಟೋ ತೆಗೆದು ವಾಟ್ಸಾಪ್ ಮಾಡಬೇಕು. ಅದು ಹೇಗೆ ಎಂದು ತೋರಿಸಿಕೊಡು ಬಾ ಎಂದು ಗ್ರಾಮದ ಮಹಿಳೆ ಕರೆದುಕೊಂಡು ಹೋಗಿದ್ದಾಳೆ. ಬಳಿಕ ಗ್ರಾಮದ ಅಜ್ಜಿಯೊಬ್ಬರ ಮನೆಗೆ ಕರೆದುಕೊಂಡು ಹೋಗಿ ಏಕಾಏಕಿ ಬಾಲಕಿಯನ್ನು ಒಳಗೆ ಬಿಟ್ಟು ಬಾಗಿಲು ಹಾಕಿದ್ದಾಳೆ.

ಫೋಟೋ ತೆಗೆಸುವ ನೆಪ ಹೇಳಿ ಬಾಲಕಿಯ ಕರೆ ತಂದಿದ್ದ ಮಹಿಳೆ, ಇಬ್ಬರು ದುಷ್ಟರು ಸೇರಿ ಬಾಲಕಿಯ ಮೇಲೆ ಅತ್ಯಾಚಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Aug 13, 2021 | 1:50 PM

ತುಮಕೂರು: 10 ನೇ ತರಗತಿ ಬಾಲಕಿ ಮೇಲೆ ಇಬ್ಬರು ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಓರ್ವ 35 ವರ್ಷದ ಆರೋಪಿ ಸಿಕ್ಕಿಬಿದ್ದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇದಕ್ಕೆ ಮಹಿಳೆಯೂ ಸಾಥ್ ನೀಡಿದ್ದಾರೆ ಎನ್ನಲಾಗಿದೆ.

ಹೆಣ್ಣಿಗೆ ಹೆಣ್ಣೇ ಶತ್ರು ಎಂಬ ಮಾತಿದೆ. ಅದಕ್ಕೆ ತಕ್ಕಂತೆಯೇ ಇಲ್ಲೊಂದು ಕೃತ್ಯ ನಡೆದಿದೆ. ಬಾಲಕಿ ತನ್ನ ಮನೆಯಲ್ಲಿ ಇರುವಾಗ, ಎಲ್ಐಸಿ ಬಾಂಡ್ ಫೋಟೋ ತೆಗೆದು ವಾಟ್ಸಾಪ್ ಮಾಡಬೇಕು. ಅದು ಹೇಗೆ ಎಂದು ತೋರಿಸಿಕೊಡು ಬಾ ಎಂದು ಗ್ರಾಮದ ಮಹಿಳೆ ಕರೆದುಕೊಂಡು ಹೋಗಿದ್ದಾಳೆ. ಬಳಿಕ ಗ್ರಾಮದ ಅಜ್ಜಿಯೊಬ್ಬರ ಮನೆಗೆ ಕರೆದುಕೊಂಡು ಹೋಗಿ ಏಕಾಏಕಿ ಬಾಲಕಿಯನ್ನು ಒಳಗೆ ಬಿಟ್ಟು ಬಾಗಿಲು ಹಾಕಿದ್ದಾಳೆ. ಬಾಲಕಿ ಒಳಗೆ ಹೋದ ಮೇಲೆ ದುಷ್ಟರಿಬ್ಬರು ಅತ್ಯಾಚಾರ ಮಾಡಿದ್ದಾರೆ.

ಬಾಲಕಿಯ ಕೈಗೆ ಟೇಪ್ ಹಾಗೂ ಬಾಯಿಗೆ ಪ್ಲಾಸ್ಟರ್ ಹಾಕಿ ಲೈಗಿಂಕ ಕಿರುಕುಳ ಬಾಲಕಿ‌ ಮನೆಯೊಳಗೆ ಹೋದ ಬಳಿಕ ಇಬ್ಬರು ದುರುಳರು ಬಾಲಕಿಯನ್ನು ಮಂಚದ ಮೇಲೆ ನೂಕಿ ಕೈಗೆ ಟೇಪ್​​ ಹಾಗೂ ಬಾಯಿಗೆ ಪ್ಲಾಸ್ಟರ್ ಹಾಕಿದ್ದಾರೆ. ಬಳಿಕ ಒಬ್ಬರಾದಂತೆ ಮತ್ತೊಬ್ಬರು ಬಾಲಕಿಯ ಮೇಲೆರಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಪ್ರಾಣ ತೆಗೆಯುವ ಬೆದರಿಕೆ ಹಾಕಿ ಕಳಿಸಿದ್ದಾರೆ ಎನ್ನಲಾಗಿದೆ.

ಪೋಷಕರು ಕೂಲಿಗೆ ತೆರಳಿದ್ದಾಗ ಘಟನೆ, ಮನೆಯಲ್ಲಿ ಅಜ್ಜಿ ಮಾತ್ರ ಇದ್ದಳು ಬಾಲಕಿಯ ಪೋಷಕರು ಕೂಲಿಗೆ ತೆರಳಿದ್ದರಂತೆ, ಮನೆಯಲ್ಲಿ ಅಜ್ಜಿ ಮಾತ್ರ ಇದ್ದಳು. ಈ ವೇಳೆ ಗ್ರಾಮದ ಮಹಿಳೆ ಹೋಗಿ ಫೋಟೋ ತೆಗೆದು ವಾಟ್ಸಾಪ್ ಮಾಡಬೇಕು ಅಂತಾ ಕರೆದುಕೊಂಡು ಬಂದು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ಬಳಿಕ ಬಾಲಕಿ ಅಳುತ್ತಾ ಬಂದು ತನ್ನ ಅಜ್ಜಿಗೆ ವಿಚಾರ ಮುಟ್ಟಿಸಿದ್ದಾಳೆ. ಸ್ಥಳಕ್ಕೆ ಹೋಗಿ ನೋಡಿದಾಗ ಮೂವರೂ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಓರ್ವ ಆರೋಪಿ ಬಿಜೆಪಿ ಕಾರ್ಯಕರ್ತ ಇನ್ನೂ ಮೂವರಲ್ಲಿ ಒಬ್ಬ ಬಿಜೆಪಿ ಕಾರ್ಯನಾಗಿದ್ದು, ಇತ್ತೀಚೆಗೆ ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರಿದ್ದ ಎನ್ನಲಾಗಿದೆ. ಹಲವು ದಿನಗಳಿಂದ ಬಾಲಕಿ ಮೇಲೆ ಕಣ್ಣು ಹಾಕಿ, ಹೊಂಚು ಹಾಕುತ್ತಿದ್ದನಂತೆ. ಅಲ್ಲದೇ ಬಿಜೆಪಿಯಲ್ಲಿ ಇರುವ ಕಾರಣ ನನ್ನನ್ನು ಯಾರು ಏನೂ ಮಾಡಲು ಸಾಧ್ಯವಿಲ್ಲ ಅಂತಾ ಗ್ರಾಮದಲ್ಲಿ ಓಡಾಡಿಕೊಂಡು ಇದ್ದನಂತೆ. ಸ್ಥಳಕ್ಕೆ ಮಧುಗಿರಿ, ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಗ್ರಾಮಕ್ಕೆ ಮಧುಗಿರಿ ಡಿವೈಎಸ್ಪಿ, ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಓರ್ವ ಸಿಕ್ಕಿಬಿದ್ದಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಬಾಲಕಿಯನ್ನ ಸಾಂತ್ವನ ಕೇಂದ್ರಕ್ಕೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಹಾಸನ: ಹೆತ್ತ ಮಗಳದ್ದೇ ಒಡವೆ, ಹಣ ಕದ್ದು ಅಮಾಯಕರಂತೆ ನಟಿಸಿದ ಹೆತ್ತವರು ಜೈಲು ಪಾಲು

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ