AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಶಿರಾದ ಚಿಕ್ಕಕೆರೆ ಬಾವಿಯಲ್ಲಿ ಎರಡು ಅಪರಿಚಿತ ಶವಗಳು ಪತ್ತೆ

ಬಾವಿಯಲ್ಲಿ ಎರಡು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಬಳಿ ನಡೆದಿದೆ. ಮೃತರಿಬ್ಬರು ತುಮಕೂರು ನಗರದ ನಿವಾಸಿಗಳು ಎಂದು ತಿಳಿದುಬಂದಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಾಯದಿಂದ ಶವಗಳನ್ನು ಹೊರತೆಗೆದಿದ್ದಾರೆ. ಸದ್ಯ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತುಮಕೂರು: ಶಿರಾದ ಚಿಕ್ಕಕೆರೆ ಬಾವಿಯಲ್ಲಿ ಎರಡು ಅಪರಿಚಿತ ಶವಗಳು ಪತ್ತೆ
ಶಿರಾದ ಚಿಕ್ಕಕೆರೆ ಬಾವಿಯಲ್ಲಿ ಎರಡು ಅಪರಿಚಿತ ಶವಗಳು ಪತ್ತೆ (ಸಾಂದರ್ಭಿಕ ಚಿತ್ರ)
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi|

Updated on: Sep 08, 2023 | 12:11 PM

Share

ತುಮಕೂರು, ಸೆ.8: ಜಿಲ್ಲೆಯ ಶಿರಾ ಪಟ್ಟಣದ ಚಿಕ್ಕಕೆರೆ ಬಳಿ ಇರುವ ಬಾವಿಯಲ್ಲಿ ಎರಡು ಅಪರಿಚಿತ ಮೃತದೇಹಗಳು ಪತ್ತೆಯಾದ (Dead Body Found) ಘಟನೆ ನಡೆದಿದೆ. ತುಮಕೂರು (Tumkur) ನಗರದ ನಿವಾಸಿಗಳಾದ ಹಾಜಿರಾ (40) ಮತ್ತು ಬಾಲಕಿ ಅಮ್ಮನ್ ಪಾಷಾ (12) ಮೃತರು ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ದಳದ ಸಿಬ್ಬಂದಿ ಸ್ಥಳೀಯರು ಸಹಾಯದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಬೊಪ್ಪಜ್ಜ ಎಂಬುವವರಿಗೆ ಸೇರಿದ ಬಾವಿ ಇದಾಗಿದೆ. ಸದ್ಯ ಸ್ಥಳಕ್ಕೆ ಆಗಮಿಸಿದ ಶಿರಾ ನಗರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತನಿಖೆ ನಡೆಸುತ್ತಿದ್ದಾರೆ.

ಕಾರು ಬೈಕ್ ಅಪಘಾತದಲ್ಲಿ ಯುವಕ ಸಾವು

ಮೈಸೂರು: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಚ್​ಡಿಎಫ್​ಸಿ ಬ್ಯಾಂಗ್ ಸಿಬ್ಬಂದಿಯಾಗಿರುವ ಮಾರಿಗುಡಿ ಬೀದಿಯ ಮಂಜುನಾಥ್ (26) ಮೃತ ದುರ್ದೈವಿ.

ಇದನ್ನೂ ಓದಿ: ಮೈಸೂರು: ಗಂಡ-ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ

ಮಂಜುನಾಥ್ ತನ್ನ ತಂಗಿ ಮಗಳು ಪೂರ್ವಿಕಾಳೊಂದಿಗೆ ಬುಲೆಟ್ ಬೈಕಿನಲ್ಲಿ ಹೋಗುವಾಗ ಮೈಸೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡಿದದ್ದ ಮಂಜುನಾಥ್ ಮತ್ತು ಪೂರ್ವಿಕಾಳನ್ನು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಸಾವನ್ನಪ್ಪಿದ್ದು, ಪೂರ್ವಿಕಾಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಪಘಾತ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ