ಕೇಂದ್ರ ಸಚಿವ ಪಿಯೂಶ್ ಗೋಯಲ್ ಕಾರ್ಯಕ್ರಮದಲ್ಲಿ ಭಾರತ ಮಾತೆ ಭಾವಚಿತ್ರಕ್ಕೆ ಅಪಮಾನ?
ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರು ಭಾಗವಹಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾರತ ಮಾತೆಗೆ ಅಪಮಾನವೆಸಗಿರುವಂತಹ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ತುಮಕೂರು: ಕೇಂದ್ರ ಸಚಿವ ಪಿಯೂಶ್ ಗೋಯಲ್ (Union Minister Piyush Goyal) ಅವರು ಭಾಗವಹಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾರತ ಮಾತೆಗೆ ಅಪಮಾನವೆಸಗಿರುವಂತಹ ಘಟನೆ ನಡೆದಿದೆ ಎನ್ನಲಾಗುತ್ತಿದೆ. ನಗರದ ಸ್ನೇಹ ಸಂಗಮ ಸಭಾಂಗಣದಲ್ಲಿ ಆಯೋಜಿಸಿದ್ದ ವಾಣಿಜ್ಯೋದ್ಯಮಿಗಳು, ಲೆಕ್ಕ ಪರಿಶೋಧಕರು ಮತ್ತು ವಿವಿಧ ವಾಣಿಜ್ಯ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಲು ಹೋಗುವಾಗ ಭಾರತ ಮಾತೆಯ ಭಾವಚಿತ್ರದ ಎದುರು ಅತಿಥಿಗಳು ಶೂ ಬಿಟ್ಟಿದ್ದಾರೆ. ಸದ್ಯ ಇದು ಎಲ್ಲರ ಟೀಕೆಗೆ ಗುರಿಯಾಗಿದ್ದಾರೆ. ವೇದಿಕೆ ಮೇಲೆ ಭಾರತ ಮಾತೆ ಫೋಟೋ ಇಟ್ಟು ಪೂಜೆ ಮಾಡಲಾಗಿತ್ತು. ಅವಸರದಲ್ಲಿ ಭಾರತ ಮಾತೆ ಫೋಟೋ ಮುಂದೆಯೇ ಚಪ್ಪಲಿ ಬಿಡಲಾಗಿದೆ. ಜೊತೆಗೆ ಸಚಿವರೊಂದಿಗೆ ಫೋಟೋ ತೆಗೆಸಿಕೊಳ್ಳುವ ಅವಸರದಲ್ಲಿ ಭಾರತ ಮಾತೆ ಫೋಟೋಗೆ ಪುಷ್ಟ ನಮನ ಮಾಡುವುದನ್ನು ಸಹ ಮೆರೆತಿದ್ದಾರೆ. ಆ ಮೂಲಕ ಭಾರತ ಮಾತೆಗೆ ಅಪಮಾನ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.
ಅಂಬೇಡ್ಕರ್ ಜಯಂತಿ ಕೈಬಿಟ್ಟ ಸರ್ಕಾರ: ಆರೋಪ
ಇತ್ತೀಚೆಗೆ ಏಪ್ರಿಲ್, ಮೇನಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಪ್ರಕಟಿಸಿತ್ತು. ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಬಗ್ಗೆ ಉಲ್ಲೇಖಿಸಿರಲಿಲ್ಲ. ಹಾಗಾಗಿ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬಂದಿದ್ದವು. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಜಯಂತಿಗಳ ಪಟ್ಟಿಯಲ್ಲಿ ಅಂಬೇಡ್ಕರ್ ಜಯಂತಿಯೇ ನಾಪತ್ತೆ ಆಗಿತ್ತು. ಈ ಹಿನ್ನೆಲೆ ಜಯಂತಿ ಕೈ ಬಿಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು.
ಅದೇ ರೀತಿಯಾಗಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಸಿದ್ದರು. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು.
ಘಟನೆ ಹಿನ್ನೆಲೆ
ಫೆಬ್ರವರಿ 8ರಂದು ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆ್ಯಡ್ ಸ್ಪರ್ಧೆಯಲ್ಲಿ ಜಾತಿ ವ್ಯವಸ್ಥೆಯನ್ನ ಖಂಡಿಸುವ ಸಂದೇಶ ನೀಡುವ ಭರದಲ್ಲಿ ವಿದ್ಯಾರ್ಥಿಗಳು ಬಿ. ಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್ ಡೋಂಟ್ ಟಚ್ ಮಿ, ಟಚ್ ಮಿ ಅಂತ ಹಾಡು ಹಾಕಿ ಅವಮಾನ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು ಎಂದು ವಿವಾದಾತ್ಮಕ ಸ್ಕಿಟ್ ಪ್ರದರ್ಶನ ಮಾಡಲಾಗಿತ್ತು.
ಇದನ್ನೂ ಓದಿ: YSV Datta: ವೈಎಸ್ವಿ ದತ್ತಾ ಅವರಿಂದ ಜೆಡಿಎಸ್ ಪಕ್ಷಕ್ಕೆ ದೋಖಾ: ಕುಮಾರಸ್ವಾಮಿ ವಾಗ್ದಾಳಿ
ಜೈನ್ ವಿಶ್ವವಿದ್ಯಾಲಯದ ವಿರುದ್ಧ ಸಿಡಿದೆದ್ದ ದಲಿತ ಹಾಗೂ ವಿವಿಧ ಸಂಘಟನೆಗಳು
ಘಟನೆ ಹಿನ್ನೆಲೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಮೇಲೆ ದಲಿತ ಹಾಗೂ ವಿವಿಧ ಸಂಘಟನೆಗಳು ಸಿಡಿದೆದ್ದಿದ್ದರು. ದಲಿತ ಸಂಘಟನೆಗಳು, ಎನ್ಎಸ್ಯೂಐ ಯಿಂದ ಯೂನಿವರ್ಸಿಟಿ ಮುಂದೆ ಪ್ರತಿಭಟನೆ ಮಾಡಲಾಗಿತ್ತು. ಅಂಬೇಡ್ಕರ್, ದಲಿತರ ಮೇಲೆ ಆಕ್ಷೇಪಾರ್ಹ ಹೇಳಿಕೆ ಆರೋಪ ಹಿನ್ನಲೆ ರಾಜ್ಯಾದ್ಯಂತ ಪ್ರತಿಭಟನೆಗೆ ದಲಿತ ಸಂಘಟನೆಗಳು ನಿರ್ಧರಿಸಿದ್ದವು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:13 pm, Fri, 7 April 23