ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಾಗುವು: ಆರಗ ಜ್ಞಾನೇಂದ್ರ
ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿ ಇವತ್ತು ಮಧ್ಯಾಹ್ನ ಬಿಸಿ ನಾಗೇಶ್ ಅವರ ತಿಪಟೂರಿನಲ್ಲಿರುವ ಮನೆಗೆ ನುಗ್ಗಿದ್ದಾರೆ.
ತುಮಕೂರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ (BC Nagesh) ಮನೆಗೆ ಮುತ್ತಿಗೆ ಹಿನ್ನೆಲೆ ಗೃಹ ಸಚಿವ ಆರಗ (Araga Jnanendra) ಜ್ಞಾನೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿ ಇವತ್ತು ಮಧ್ಯಾಹ್ನ ಬಿಸಿ ನಾಗೇಶ್ ಅವರ ತಿಪಟೂರಿನಲ್ಲಿರುವ ಮನೆಗೆ ನುಗ್ಗಿದ್ದಾರೆ. ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಮನೆಗೆ ನುಗ್ಗಿದ್ದಾರೆ. ನನಗೆ ಬಂದ ಮಾಹಿತಿ ಪ್ರಕಾರ ನಾಗೇಶ್ ಮನೆಗೆ ಬೆಂಕಿ ಹಾಕೋದಿಕ್ಕೆ ಮುಂದಾಗಿದ್ರು ಅನ್ನೋ ಮಾಹಿತಿ ಇದೆ. ಈಗಾಗಲೇ 15 ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಎರಡು ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಈ ರೀತಿಯಾದ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲಾ ಎಂದು ಕಿಡಿ ಕಾರಿದ್ದಾರೆ.
ಇದನ್ನು ಓದಿ: ಮಳಲಿ ದರ್ಗಾ ವಿವಾದ: ವಿಎಚ್ ಪಿ ಸಲ್ಲಿಸಿದ ಅರ್ಜಿ ವಜಾಗೊಳಿಸುವಂತೆ ವಾದ ಮಂಡಿಸುತ್ತಿರುವ ದರ್ಗಾ ಪರ ವಕೀಲರು
ಈ ಪ್ರಕರಣದ ಹಿಂದೆ ಯಾರಿದ್ದಾರೆ ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ಬೆಂಗಳೂರಿಂದ ಐವರು ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು NSUI ಮುಖಂಡರು ಬಂದಿದ್ದಾರೆ. ಪ್ರೀಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಇವಾಗ ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ದಾವಣಗೆರೆಯ NSUI ಉಪಾಧ್ಯಕ್ಷ ಫೈಲ್ವಾನ್ ಅಲಿ ರೇಹಮಾನ್ ಎಂಬಾತ ಬಂದಿದ್ದಾನೆ. ಯಾರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ