ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಂಧಿಸಿ ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ದೂರು ನೀಡಿದ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕರನ್ನು ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳವಂತೆ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಂಧಿಸಿ ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ದೂರು ನೀಡಿದ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ
ಶ್ರೀರಾಮಸೇನೆಯ ನಾಯಕ ಪ್ರಮೋದ್ ಮುತಾಲಿಕ್
TV9kannada Web Team

| Edited By: Ayesha Banu

Jun 10, 2022 | 7:41 AM

ತುಮಕೂರು. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ತುಮಕೂರು ಎಸ್ಪಿಗೆ ದೂರು ನೀಡಲಾಗಿದೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕರನ್ನು ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳವಂತೆ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಮೈಕ್ ಬಳಕೆ ವಿಚಾರದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದಾದರೆ ಅಧಿಕಾರ ಬಿಟ್ಟು ಕೆಳಗಿಳಿಯಲಿ. ಕೋರ್ಟ್ ಆದೇಶ ಪಾಲಿಸದವರಿಗೆ ಗುಂಡು ಹೊಡೆಯುವ ಆದೇಶ ಜಾರಿಗೊಳಿಸ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದರು. ಹೀಗಾಗಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ವೆಲ್ಫೇರ್ ಆಫ್ ಇಂಡಿಯಾ ಪಕ್ಷ, ಮುತಾಲಿಕ್ ಸಮಾಜದಲ್ಲಿ ಸಾಮರಸ್ಯ ಕದಡುವ ಪ್ರಚೋದನಕಾರಿ ಹೇಳಿಕೆ‌ ನೀಡಿದ್ದಾರೆಂದು ದೂರು ನೀಡಿದ್ದಾರೆ. ಪ್ರಮೋದ್ ಮುತಾಲಿಕ್ ರನ್ನ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಆತ್ಮಸಾಕ್ಷಿಗನುಗುಣವಾಗಿ ಜೆಡಿಎಸ್​​ ಅಭ್ಯರ್ಥಿಗೆ ಮತ ಹಾಕುತ್ತೇನೆ: ಜಿ.ಟಿ.ದೇವೇಗೌಡ

ಕೊಲೆ ಬೆದರಿಕೆ ಪ್ರಕರಣ: ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಪ್ರಮೋದ್ ಮುತಾಲಿಕ್ ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಅವರಿಗೆ ದೂರು ನೀಡಿದ್ದಾರೆ. ‘ಮಾರಿಗುಡಿ-6 ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಕಲಾದ ಜೀವಬೆದರಿಕೆ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಪೋಸ್ಟ್ಗೆ ಲೈಕ್ ಹಾಗೂ ಶೇರ್ ಮಾಡಿದವರ ವಿರುದ್ಧವೂ ದೂರು ದಾಖಲಿಸಬೇಕು ಎಂದಿದ್ದಾರೆ. ಇದರ ಜೊತೆಗೆ ದೂರವಾಣಿ ಕರೆ ಮೂಲಕವೂ ಬಂದ ಬೆದರಿಕೆಗಳ ಬಗ್ಗೆಯೂ ದೂರಿನಲ್ಲಿ ತಿಳಿಸಿದ್ದು, ದೂರವಾಣಿ ಸಂಖ್ಯೆಯನ್ನೂ ದೂರಿನಲ್ಲಿ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada