ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಆರೋಪಿ ವಶಕ್ಕೆ

ಗೃಹಸಚಿವ ಡಾ.ಜಿ.ಪರಮೇಶ್ವರ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಪೊಲೀಸರಿಗೆ ಪೊಲೀಸರೇ ರಕ್ಷಣೆ ಕೊಡುವ ಕಾಲ ಬಂದಿದೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಮಹಿಳಾ ಪಿಎಸ್‌ಐ ಮೇಲೆಯೇ ಲೈಂಗಿಕ ಕಿರುಕುಳ ನೀಡಿ ಪ್ರಕರಣ ನಡೆದಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಆರೋಪಿ ವಶಕ್ಕೆ
ಸಾಂದರ್ಭಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ Edited By: Rakesh Nayak Manchi

Updated on: Oct 05, 2023 | 2:51 PM

ತುಮಕೂರು, ಅಕ್ಟೋಬರ್ 05: ಗೃಹಸಚಿವ ಡಾ.ಜಿ.ಪರಮೇಶ್ವರ ಅವರ ತವರು ಜಿಲ್ಲೆ ತುಮಕೂರಿನಲ್ಲಿ (Tumkur) ಪೊಲೀಸರಿಗೆ ಪೊಲೀಸರೇ ರಕ್ಷಣೆ ಕೊಡುವ ಕಾಲ ಬಂದಿದೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಮಹಿಳಾ ಪಿಎಸ್‌ಐ ಮೇಲೆಯೇ ಲೈಂಗಿಕ ಕಿರುಕುಳ ನೀಡಿ ಪ್ರಕರಣ ನಡೆದಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ನಾಗರಕಟ್ಟೆಯ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಡಿಜೆ ವಾಹನದ ಬಳಿ ಮಹಿಳಾ ಪಿಎಸ್‌ಐ ಭದ್ರತಾ ಕರ್ತವ್ಯದಲ್ಲಿದ್ದರು. ಮೆರವಣಿಗೆಯು ಎಂಜಿ ರಸ್ತೆಯ ಮಹದೇವ ಸ್ಟೇಷನರಿ ಅಂಗಡಿ ಬಳಿ ತಲುಪುತ್ತಿದ್ದಂತೆ ಪಿಎಸ್​ಐಗೆ ಲೈಂಗಿಕ ಕಿರುಕುಳ ನೀಡಲಾಗಿದೆ.

ಇದನ್ನೂ ಓದಿ: ತುಮಕೂರು: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮಕ್ಕಳು, ಪತ್ನಿಯನ್ನು ಮನೆಯಿಂದ ಹೊರ ಹಾಕಿದ ಪತಿ

ಹನುಮಂತಪುರದ ದರ್ಶನ್ ಎಂಬಾತನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us