ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ತಾಯಿ

ಮಹಿಳೆಯೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಥಸಂದ್ರ ಗ್ರಾಮದಲ್ಲಿ ನಡೆದಿದೆ.

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ತಾಯಿ
(ಸಾಂದರ್ಭಿಕ ಚಿತ್ರ)
Image Credit source: express photo
Edited By:

Updated on: Jul 02, 2023 | 5:44 PM

ತುಮಕೂರು: ಮಹಿಳೆಯೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಶಿರಾ (Sira) ತಾಲೂಕಿನ ರಥಸಂದ್ರ ಗ್ರಾಮದಲ್ಲಿ ನಡೆದಿದೆ. ಮನು (30) ಸಾವನ್ನಪ್ಪಿದ ಮಹಿಳೆ. ತನ್ನ ಇಬ್ಬರು ಮಕ್ಕಳ ಜೊತೆ ಬಟ್ಟೆ ತೊಳೆಯಲೆಂದು ಕೆರೆಗೆ ಬಳಿ ಹೋಗಿದ್ದರು. ಈ ವೇಳೆ ಆಟವಾಡುತ್ತಿದ್ದ ಮಕ್ಕಳು ಕೆರೆಗೆ ಬಿದ್ದಿದ್ದಾರೆ. ಈ ವೇಳೆ ಈಜು ಬಾರದ ಮನು ತನ್ನ ಜೀವವನ್ನು ಲೆಕ್ಕಿಸದೆ ಕರೆಗೆ ಹಾರಿ ಕರುಳಕುಡಿಗಳನ್ನು ರಕ್ಷಿಸಿ ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಸ್ವಸ್ಥಗೊಂಡ ಇಬ್ಬರು ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ, ಶಿಕ್ಷಕ ಅಮಾನತು

ತುಮಕೂರು: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊಳಲುಗುಂದ ಗ್ರಾಮದ ಶಾಲಾ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಹೊಳಲುಗುಂದ‌ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಗೋಪಾಲ್ ಎನ್ನುವರನ್ನ ಅಮಾನತು ಮಾಡಿ ಡಿಡಿಪಿಐ ನಂಜಯ್ಯ ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡಿರುವ ಶಿಕ್ಷಕ ಗೋಪಾಲ್ ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನಂತೆ. ಈ ಬಗ್ಗೆ ಶಿಕ್ಷಕಿ ಡಿಡಿಪಿಐಗೆ ದೂರು ನೀಡಿದ್ದರು. ಈ ಬಗ್ಗೆ ಪರಿಶೀಲನೆ ಮಾಡಿದ ಡಿಡಿಪಿಐ ನಂಜಯ್ಯ, ಗೋಪಾಲ್​ನನ್ನು ಸಸ್ಪೆಂಡ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Sun, 2 July 23