ನಿನ್ನೆ ಕೊವಿಡ್ನಿಂದ ಕುಪ್ಪೂರು ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಮೃತಪಟ್ಟಿದ್ದರು. ಇಂದು ಅಂತಿಮ ನಮನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಡೆಯೂರು ಶ್ರೀ ಗಳಾದ ರೇಣುಕಾ ಶಿವಾಚಾರ್ಯ ಸ್ವಾಮಿಜಿಗಳ ನೇತೃತ್ವದಲ್ಲಿ ಹಾಗೂ ವಿವಿಧ ಮಠಾಧಿಶರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಈಗಾಗಲೇ ಮಠದ ಬಳಿ ಬಿಗಿ ಪೊಲೀಸ್ ಭಧ್ರತೆ ವ್ಯವಸ್ಥೆ ಮಾಡಲಾಗಿದೆ.
ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಈಗಾಗಲೇ ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು, ವಿವಿಧ ಮಠದ ಮಠಾಧೀಶರು ಆಗಮನಿಸಿದ್ದಾರೆ. ಇಂದು ಮಧ್ಯಾಹ್ನ ಶ್ರೀಗಳ ಕ್ರೀಯಾಸಮಾಧಿ ವೀರಶೈವ ಪದ್ಧತಿಯಂತೆ ನಡೆಯಲಿದೆ. ಕ್ರಿಯಾ ಸಮಾಧಿ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಮತ್ತು ರಾಜಕಾರಣಿಗಳು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:
ಸುಬ್ರಹ್ಮಣ್ಯನಿಗೆ 56 ಲಕ್ಷ ರೂ. ಮೌಲ್ಯದ ಬೆಳ್ಳಿ ರಥ ಸಮರ್ಪಣೆ; ಭಕ್ತರ ಕೋರಿಕೆ ಈಡೇರಿಸಿದ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ
ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯ