AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ತುಮಕೂರಿನ ಕಲ್ಲೇಶ್ವರ ದೇವಸ್ಥಾನದ ತೇರು: ಶಾರ್ಟ್​ಸರ್ಕ್ಯೂಟ್ ಶಂಕೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿರುವ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದ ತೇರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿರುವಂತಹ ಘಟನೆ ನಡೆದಿದೆ. ಬೆಂಕಿ ಕೆನ್ನಾಲಿಗೆಗೆ ತೇರು ಸಂಪೂರ್ಣ ಆಹುತಿ ಆಗಿದೆ. ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ತುಮಕೂರಿನ ಕಲ್ಲೇಶ್ವರ ದೇವಸ್ಥಾನದ ತೇರು: ಶಾರ್ಟ್​ಸರ್ಕ್ಯೂಟ್ ಶಂಕೆ
ಪ್ರಾತಿನಿಧಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Mar 11, 2024 | 5:39 PM

Share

ತುಮಕೂರು, ಮಾರ್ಚ್​ 11: ದೇವಸ್ಥಾನದ ತೇರಿಗೆ ಆಕಸ್ಮಿಕವಾಗಿ ಬೆಂಕಿ (fire) ತಗುಲಿ ಹೊತ್ತಿ ಉರಿದಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿರುವ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಕಲ್ಲೇಶ್ವರ ದೇವಸ್ಥಾನದ ಮುಭಾಗದಲ್ಲಿ ಶೇಡ್ ಮಾಡಿ ತೇರು ನಿಲ್ಲಿಸಲಾಗಿತ್ತು. ಇಂದು ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆಗೆ ತೇರು ಸಂಪೂರ್ಣ ಆಹುತಿ ಆಗಿದೆ. ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೇವಸ್ಥಾನದ ಉದ್ಘಾಟನೆಗೆ ಕರೆಯದ ಆರೋಪ: ಖಜಾಂಚಿ ಮೇಲೆ ಹಲ್ಲೆ

ನೆಲಮಂಗಲ: ದೇವಸ್ಥಾನದ ಉದ್ಘಾಟನೆಗೆ ಕರೆದಿಲ್ಲವೆಂದು ಆರೋಪಿಸಿ ಖಜಾಂಚಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ರಾವುತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರೀ ಲಕ್ಷ್ಮೀನಾರಾಯಣ, ರಾಧಾಕೃಷ್ಣ ದೇವಾಲಯದಲ್ಲಿ ಗಲಾಟೆ ಮಾಡಿ ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ: ಚಾಮರಾಜನಗರ ವ್ಯಾಪ್ತಿಯಲ್ಲಿ ಕಾಡಿಗೆ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವುದು ಮೇಲ್ನೊಟಕ್ಕೆ ಪತ್ತೆ

ದೇವಾಲಯದ ಖಜಾಂಚಿ ದಿನೇಶ್ ಮೇಲೆ ಹಲ್ಲೆ ಮಾಡಲಾಗಿದ್ದು, ಸದ್ಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಹೇಂದ್ರ, ಅಶೋಕ್ ಕುಮಾರ್, ಕಮಲ್, ಪಂಕಜ್, ಮರ್ಧುಲ್, ನಿರಂಜನ್, ಬಬ್ಲು ಎಂಬುವವರು ರಾಡ್ ಹಾಗೂ ಹಾಕಿ ಬ್ಯಾಟ್ ಹಿಡಿದು ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ; ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯ

ದೇವಾಲಯದಲ್ಲಿ 1500 ಜನ ಸದಸ್ಯರಿದ್ದಾರೆ. ಸದ್ಯ ಹಲ್ಲೆಯ ವಿಡಿಯೋ ಮೊಬೈಲ್ ಹಾಗೂ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದ 7 ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಕಿಡಿಗೇಡಿಗಳಿಂದ ಕಾರಿಗೆ ಬೆಂಕಿ: ಕ್ಷಣಾರ್ಧದಲ್ಲಿ ಹೊತ್ತಿ ಉರಿದು ಕಾರು

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ರಾಂಪುರದಲ್ಲಿ ಪ್ರೀತಂ ಎಂಬುವರಿಗೆ ಸೇರಿದ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವಂತಹ ಘಟನೆ ನಡೆದಿದೆ. ಮನೆ ಮುಂದೆ ಇದ್ದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರಿಗೆ ಬೆಂಕಿ ಹಚ್ಚಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್