ತುಮಕೂರು, ಮಾರ್ಚ್ 11: ದೇವಸ್ಥಾನದ ತೇರಿಗೆ ಆಕಸ್ಮಿಕವಾಗಿ ಬೆಂಕಿ (fire) ತಗುಲಿ ಹೊತ್ತಿ ಉರಿದಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿರುವ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಕಲ್ಲೇಶ್ವರ ದೇವಸ್ಥಾನದ ಮುಭಾಗದಲ್ಲಿ ಶೇಡ್ ಮಾಡಿ ತೇರು ನಿಲ್ಲಿಸಲಾಗಿತ್ತು. ಇಂದು ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆಗೆ ತೇರು ಸಂಪೂರ್ಣ ಆಹುತಿ ಆಗಿದೆ. ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನೆಲಮಂಗಲ: ದೇವಸ್ಥಾನದ ಉದ್ಘಾಟನೆಗೆ ಕರೆದಿಲ್ಲವೆಂದು ಆರೋಪಿಸಿ ಖಜಾಂಚಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ರಾವುತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರೀ ಲಕ್ಷ್ಮೀನಾರಾಯಣ, ರಾಧಾಕೃಷ್ಣ ದೇವಾಲಯದಲ್ಲಿ ಗಲಾಟೆ ಮಾಡಿ ಹಲ್ಲೆ ಮಾಡಲಾಗಿದೆ.
ಇದನ್ನೂ ಓದಿ: ಚಾಮರಾಜನಗರ ವ್ಯಾಪ್ತಿಯಲ್ಲಿ ಕಾಡಿಗೆ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವುದು ಮೇಲ್ನೊಟಕ್ಕೆ ಪತ್ತೆ
ದೇವಾಲಯದ ಖಜಾಂಚಿ ದಿನೇಶ್ ಮೇಲೆ ಹಲ್ಲೆ ಮಾಡಲಾಗಿದ್ದು, ಸದ್ಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಹೇಂದ್ರ, ಅಶೋಕ್ ಕುಮಾರ್, ಕಮಲ್, ಪಂಕಜ್, ಮರ್ಧುಲ್, ನಿರಂಜನ್, ಬಬ್ಲು ಎಂಬುವವರು ರಾಡ್ ಹಾಗೂ ಹಾಕಿ ಬ್ಯಾಟ್ ಹಿಡಿದು ಹಲ್ಲೆ ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ; ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯ
ದೇವಾಲಯದಲ್ಲಿ 1500 ಜನ ಸದಸ್ಯರಿದ್ದಾರೆ. ಸದ್ಯ ಹಲ್ಲೆಯ ವಿಡಿಯೋ ಮೊಬೈಲ್ ಹಾಗೂ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದ 7 ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ರಾಂಪುರದಲ್ಲಿ ಪ್ರೀತಂ ಎಂಬುವರಿಗೆ ಸೇರಿದ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವಂತಹ ಘಟನೆ ನಡೆದಿದೆ. ಮನೆ ಮುಂದೆ ಇದ್ದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರಿಗೆ ಬೆಂಕಿ ಹಚ್ಚಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.