ಚಿಕಿತ್ಸೆ ಫಲಿಸದೇ ತುಮಕೂರು ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ್ ಕೊರೊನಾ ಸೋಂಕಿಗೆ ಬಲಿ
ತುಮಕೂರು ಜಿಲ್ಲೆಯ ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ್ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದವಾರ ಕೊರೊನಾ ಪಾಸಿಟಿವ್ ಹಿನ್ನೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.
ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಭೀತಿ ಹೆಚ್ಚುತ್ತಿದ್ದು, ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯ ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ್ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ ವಾರ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಪಾಸಿಟಿವ್ ವರದಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಮಂಜುನಾಥ್ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವಿಗೀಡಾಗಿದ್ದಾರೆ.
ತುಮಕೂರಿನಲ್ಲಿ ವಿದ್ಯುತ್ ಇಲ್ಲದೆ ಕಾರಿನ ಬೆಳಕಿನಲ್ಲಿ ಅಂತ್ಯಕ್ರಿಯೆ ವಿದ್ಯುತ್ ಇಲ್ಲದೇ ಕಾರಿನ ಲೈಟ್ ಬೆಳಕಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಮುಕ್ತಿಧಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಹುಳಿಯಾರಿನ ರಂಗಲಕ್ಷ್ಮಮ್ಮ ಎನ್ನುವರು ಚಿಕ್ಕನಾಯಕನಹಳ್ಳಿಯ ಆಸ್ಪತ್ರೆ ಯಲ್ಲಿ ನಿಧನರಾಗಿದ್ದರು. ಮೃತದೇಹ ತರುವಷ್ಟರಲ್ಲಿ ರಾತ್ರಿಯಾಗಿತ್ತು. ವಿದ್ಯುತ್ ಇಲ್ಲದ ಕಾರಣ ಸಂಬಂಧಿಕರ ಕಾರಿನ ಹೆಡ್ಲೈಟ್ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ರಾತ್ರೋರಾತ್ರಿ ವಿದ್ಯುತ್ ಇಲ್ಲದೇ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ಜನರು ಆಗ್ರಹಿದ್ದಾರೆ.
ಇದನ್ನೂ ಓದಿ: 24 ಗಂಟೆಯಲ್ಲಿ 4,092 ಮಂದಿ ಕೊರೊನಾ ಸೋಂಕಿನಿಂದ ಸಾವು; 4 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲು
ಕೊರೊನಾ ಸೋಂಕಿತರಿಗೆ ಧೈರ್ಯ ತುಂಬಿದ ಬೀದರ್ ಜಿಲ್ಲಾಸ್ಪತ್ರೆಯ ವೈದ್ಯರು
Published On - 11:00 am, Sun, 9 May 21