ಶಿವಕುಮಾರ ಸ್ವಾಮೀಜಿ ಜಯಂತಿ: ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ ಪ್ರಧಾನಿ ಮೋದಿ ಹೇಳಿದ್ದಿಷ್ಟು

ಶ್ರೀಗಳ 117 ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಸರಳವಾಗಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಜಯಂತಿ ಪ್ರಯುಕ್ತ ಪ್ರಧಾನಿ ಮೋದಿ ಕನ್ನಡದಲ್ಲೇ ಸಂದೇಶ ಪ್ರಕಟಿಸಿದ್ದು, ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದಿದ್ದಾರೆ.

ಶಿವಕುಮಾರ ಸ್ವಾಮೀಜಿ ಜಯಂತಿ: ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ ಪ್ರಧಾನಿ ಮೋದಿ ಹೇಳಿದ್ದಿಷ್ಟು
ಪ್ರಧಾನಿ ಮೋದಿ & ಶಿವಕುಮಾರ ಸ್ವಾಮೀಜಿ
Follow us
Ganapathi Sharma
|

Updated on: Apr 01, 2024 | 10:41 AM

ಬೆಂಗಳೂರು, ಏಪ್ರಿಲ್ 1: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ (Siddagangaa Mutt) ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ (Shivakumara Swami) ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಮೋದಿ, ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಮೋದಿ ಎಕ್ಸ್​ ಸಂದೇಶ

‘ಪರಮಪೂಜ್ಯ ಡಾ. ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ’ ಎಂದು ಎಕ್ಸ್​ ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಶ್ರೀಗಳ 117 ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಸರಳವಾಗಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಜಯಂತಿ ಪ್ರಯುಕ್ತ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಸೋಮವಾರ ಬೆಳಗ್ಗೆ ನೆರವೇರಿತು. ವಿವಿಧ ಮಠಾಧೀಶರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾದರು.

11 ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ರಾಜಕಾರಣಿಗಳು, ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ.

ಇದನ್ನೂ ಓದಿ: ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

ರುದ್ರಾಕ್ಷಿ ಮಂಟಪದಲ್ಲಿ ಶಿವಕುಮಾರ ಶ್ರೀಗಳ ಪ್ರತಿಮೆ ಮೆರವಣಿಗೆ ನಡೆಸಲಾಯಿತು. ಪುಷ್ಪಾಲಂಕಾರದೊಂದಿಗೆ ಸಿಂಗಾರಗೊಂಡಿರುವ ರುದ್ರಾಕ್ಷಿ ಮಂಟಪದಲ್ಲಿ ಗದ್ದುಗೆ ಬಳಿಯಿಂದ ವಸ್ತು ಪ್ರದರ್ಶನ ಆವರಣದವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆ ವೇಳೆ ಸಿದ್ಧಗಂಗಾ ಮಠದ ಭಕ್ತರು, ಮಕ್ಕಳು ಭಾಗಿಯಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ