Karnataka Dam Water Level: ತುಂಗಭದ್ರಾ ಡ್ಯಾಂ ಭರ್ತಿ, 14 ಪ್ರಮುಖ ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಅಧಿಕಗೊಂಡಿದ್ದರಿಂದ ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಜಲಾಯಶಗಳು ಭರ್ತಿಯಾಗುತ್ತಿವೆ. ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದರೆ ಸೆಪ್ಟೆಂಬರ್​​​ 05ರಂದು ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.

Karnataka Dam Water Level: ತುಂಗಭದ್ರಾ ಡ್ಯಾಂ ಭರ್ತಿ, 14 ಪ್ರಮುಖ ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ
ತುಂಗಭದ್ರಾ
Follow us
ಆಯೇಷಾ ಬಾನು
|

Updated on: Sep 05, 2024 | 7:46 AM

ಕರ್ನಾಟಕ ರಾಜ್ಯದಲ್ಲಿ ಉತ್ತಮ ಮಳೆಯಾದ ಪರಿಣಾಮ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ. ಜೊತೆಗೆ ಹೊರ ಹರಿವಿನ ಪ್ರಮಾಣದಲ್ಲೂ ಹೆಚ್ಚಳವಾಗಿದೆ. ಕೊಪ್ಪಳದ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್‌ ಗೇಟ್ ಚೈನ್ ಲಿಂಕ್ ಮುರಿದು ಹೋಗಿ ಸುಮಾರು 30 ಟಿಎಂಸಿ ನೀರು ನದಿಗೆ ವ್ಯರ್ಥವಾಗಿ ಹರಿದು ಹೋಗಿತ್ತು. ಆಗ ಡ್ಯಾಂ ಖಾಲಿ ಆಗಿತ್ತು. ಆದರೆ ಈಗ ಸಮಸ್ಯೆ ಬಗೆಹರಿದಿದ್ದು ತುಂಗಭದ್ರಾ ಡ್ಯಾಂ ಮತ್ತೆ ಭರ್ತಿಯಾಗಿದೆ. ಹಾಗಾದರೆ ಸೆ.5ರಂದು ತುಂಗಭದ್ರಾ ಸೇರಿದಂತೆ ಕರ್ನಾಟಕದ ಪ್ರಮುಖ 14 ಜಲಾಶಯಗಳ (Karnataka Dam Water Level)  ನೀರಿನ ಮಟ್ಟ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 122.13 121.43 45,322 21,561
ತುಂಗಭದ್ರಾ ಜಲಾಶಯ (Tungabhadra Dam) 497.71 105.79 101.46 73.78 39,945 15,533
ಮಲಪ್ರಭಾ ಜಲಾಶಯ (Malaprabha Dam) 633.80 37.73 36.48 21.88 3,929 2,344
ಕೆ.ಆರ್.ಎಸ್ (KRS Dam) 38.04 49.45 48.95 22.28 15,181 14,325
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 146.92 68.30 17,363 7,648
ಕಬಿನಿ ಜಲಾಶಯ (Kabini Dam) 696.13 19.52 19.32 13.57 8702 8350
ಭದ್ರಾ ಜಲಾಶಯ (Bhadra Dam) 657.73 71.54 68.21 46.01 15,574 10,348
ಘಟಪ್ರಭಾ ಜಲಾಶಯ (Ghataprabha Dam) 662.91 51.00 50.95 41.48 10,268 8,498
ಹೇಮಾವತಿ ಜಲಾಶಯ (Hemavathi Dam) 890.58 37.10 37.06 23.10 7541 11,250
ವರಾಹಿ ಜಲಾಶಯ (Varahi Dam) 594.36 31.10 24.58 9.10 3717 0
ಹಾರಂಗಿ ಜಲಾಶಯ (Harangi Dam)​​ 871.38 8.50 8.34 7.11 3512 3950
ಸೂಫಾ (Supa Dam) 564.00 145.33 134.89 77.12 23,077 4481
ನಾರಾಯಣಪುರ ಜಲಾಶಯ (Narayanpura Dam) 492.25 33.31 32.15 21.37 25,579 12,964
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 21.40 24.34 693 135

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹೀಗಾಗಿ ಈ ಭಾಗದ ಡ್ಯಾಂಗಳು ಮತ್ತಷ್ಟು ಜೀವ ಕಳೆ ಪಡೆಯುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ