ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ
ಕೊಪ್ಪಳದ ಮುನಿರಾಬಾದ್ನ ಕಾಡಾ ಕಚೇರಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಗಿದೆ. ಜಲಾಯಶದಿಂದ ನೀರು ಬಿಡುವ ಕುರಿತು ಬಳ್ಳಾರಿ ಉಸ್ತುವಾರಿ ಸಚಿವ ಆನಂದಸಿಂಗ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ.
ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ 18ರಿಂದ ನವೆಂಬರ್ 30ರ ವರೆಗೆ ನೀರು ಬಿಡಲು ತೀರ್ಮಾನ ಮಾಡಲಾಗಿದೆ. ಕೊಪ್ಪಳದ ಮುನಿರಾಬಾದ್ನ ಕಾಡಾ ಕಚೇರಿಯಲ್ಲಿ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಚಿವ ಆನಂದ್ ಸಿಂಗ್ ಅಧ್ಯಕ್ಷತೆಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜುಲೈ 18ರಿಂದ ಎಡದಂಡೆ ಮುಖ್ಯ ಕಾಲುವೆಗೆ 4,100ಕ್ಯೂಸೆಕ್ ನೀರು ಬಿಡಲಾಗುವುದು. ಬಲದಂಡೆ ಕೆಳಮಟ್ಟದ ಕಾಲುವೆಗೆ ಪ್ರತಿದಿನ 700 ಕ್ಯೂಸೆಕ್ ನೀರು ಬಿಡಲಾಗುವುದು. ಜುಲೈ 18ರಿಂದ ನವೆಂಬರ್ 30ರ ವರೆಗೆ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನಿತ್ಯ 1130 ಕ್ಯೂಸೆಕ್ ನೀರು ಬಿಡಲಾಗುವುದು ಎಂದು ಮಾಹಿತಿ ಲಭ್ಯವಾಗಿದೆ.
ಕೊಪ್ಪಳದ ಮುನಿರಾಬಾದ್ನ ಕಾಡಾ ಕಚೇರಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಗಿದೆ. ಜಲಾಯಶದಿಂದ ನೀರು ಬಿಡುವ ಕುರಿತು ಬಳ್ಳಾರಿ ಉಸ್ತುವಾರಿ ಸಚಿವ ಆನಂದಸಿಂಗ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಜನಪ್ರತಿನಿಧಿ, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುವುದು ವಿಳಂಭವಾಗುವ ಸಾಧ್ಯತೆ ಇದೆ. ಜಲಾಶಯದಲ್ಲಿ ಸದ್ಯ 36 ಟಿಎಂಸಿ ನೀರು ಸಂಗ್ರಹವಿದೆ. ಒಳಹರಿವು ಕೇವಲ 2039 ಕ್ಯೂಸೆಕ್ ಇದೆ. ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನಿತ್ಯ ಕನಿಷ್ಠ 0.50 ಟಿಎಂಸಿ ನೀರು ಬೇಕು. ಹೀಗಾಗಿ ಇನ್ನಷ್ಟು ದಿನ ಕಾಯ್ದು ಕಾಲುವೆಗೆ ನೀರು ಬಿಡೋ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು.
ಇದನ್ನೂ ಓದಿ: ವಾಣಿವಿಲಾಸ ಸಾಗರಕ್ಕೆ ಭದ್ರ ಡ್ಯಾಂನಿಂದ ನೀರು ಹರಿಸುವುದನ್ನು ತಕ್ಷಣಕ್ಕೆ ನಿಲ್ಲಿಸಿ: ರೈತ ಮುಖಂಡ ತೇಜಸ್ವಿ ಪಟೇಲ್ ಆಗ್ರಹ
ಅಧಿಕಾರಿಗಳು ಕೊಡುವುದು ರಿಪೋರ್ಟ್; ನಮಗೆ ಬೇಕಾಗಿರುವುದು ಸರ್ಟಿಫಿಕೇಟ್: ಕೆಆರ್ಎಸ್ ಡ್ಯಾಂ ಬಗ್ಗೆ ಪಟ್ಟು ಬಿಡದ ಸುಮಲತಾ