AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

105 TMC ಸಾಮರ್ಥ್ಯದ ಟಿಬಿ ಡ್ಯಾಂನಲ್ಲಿ 80 ಟಿಎಂಸಿ ಮಾತ್ರ ನೀರು ಸಂಗ್ರಹ: ಕಾರಣವೇನು? ಇಲ್ಲಿದೆ ವಿವರ

ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ತುಂಗಭದ್ರಾ ಜಲಾಶಯ 105 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಆದರೂ ಕೂಡ 80 ಟಿಎಂಸಿ ನೀರನ್ನು ಮಾತ್ರ ಸಂಗ್ರಹಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಉಳಿದ 25 ಟಿಎಂಸಿ ನೀರನ್ನು ಸಂಗ್ರಹಿಸದಿರುವ ಬಗ್ಗೆ ಪ್ರಶ್ನಿಸುತ್ತಿದ್ದಾರೆ.

105 TMC ಸಾಮರ್ಥ್ಯದ ಟಿಬಿ ಡ್ಯಾಂನಲ್ಲಿ 80 ಟಿಎಂಸಿ ಮಾತ್ರ ನೀರು ಸಂಗ್ರಹ: ಕಾರಣವೇನು? ಇಲ್ಲಿದೆ ವಿವರ
ತುಂಗಭದ್ರಾ ಜಲಾಶಯ
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ|

Updated on:Jul 07, 2025 | 11:04 AM

Share

ಬಳ್ಳಾರಿ, ಜುಲೈ 07: ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಜೀವನಾಡಿ ಆಗಿರುವ ಕೊಪ್ಪಳ (Koppal) ತಾಲೂಕಿನ ಮುನಿರಾಬಾದ ಬಳಿಯಿರುವ ತುಂಗಭದ್ರಾ ಜಲಾಶಯ (Tungabhadra Dam) ಭರ್ತಿ ಹಂತಕ್ಕೆ ಬಂದಿದೆ. 105 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 80 ಟಿಎಂಸಿ ಮಾತ್ರ ನೀರು ಸಂಗ್ರಹಿಸಲಾಗಿದೆ. ಟಿ.ಬಿ ಬೋರ್ಡ್​ ಬಾಕಿ 25 ಟಿಎಂಸಿ ನೀರನ್ನು ಏಕೆ ಸಂಗ್ರಹಿಸುತ್ತಿಲ್ಲ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಉತ್ತರ ಇಲ್ಲಿದೆ.

2024 ರ ಆಗಸ್ಟ್ 10 ರಂದು ರಾತ್ರಿ ಡ್ಯಾಂನ 19 ನೇ ಕ್ರೆಸ್ಟ್​ ಗೇಟ್ ಕೊಚ್ಚಿಕೊಂಡು ಹೋಗಿತ್ತು. ಹೀಗಾಗಿ, ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹೋಗಿತ್ತು. ಕ್ರೆಸ್ಟ್ ಗೇಟ್ ಸಂಖ್ಯೆ 19ಕ್ಕೆ ಐದು ಸ್ಟಾಪ್‌ಲಾಗ್‌ಗಳನ್ನು ಯಶಸ್ವಿಯಾಗಿ ಅಳವಡಿಸಿದ್ದರು. ಕ್ರೆಸ್ಟ್ ​ಗೇಟ್ ​ದುರಸ್ಥಿ ನಂತರ ರಾಜ್ಯ ಸರ್ಕಾರ ಜಲಾಶಯದ ಎಲ್ಲ ಕ್ರೆಸ್ಟ್​ ಗೇಟ್​ಗಳನ್ನು ಬದಲಾಯಿಸುವುದಾಗಿ ಹೇಳಿತ್ತು. ತಾಂತ್ರಿಕ ತಜ್ಞರ ತಂಡ ಕೂಡ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಡ್ಯಾಂ ಕಾರ್ಯದರ್ಶಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು 2024ರ ನವೆಂಬರ್ ಮೊದಲ ವಾರದಲ್ಲಿ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

70 ವರ್ಷ ಹಳೆಯದಾದ 33 ಕ್ರೆಸ್ಟ್ ಗೇಟ್‌ಗಳು ಇನ್ನೂವರೆಗೂ ಹಾಗೆ ಇವೆ. ಯಾವುದೇ ಜಲಾಯಶದ ಕ್ರೆಸ್ಟ್ ​ಗೇಟ್ ​ಮತ್ತು ಚೈನ್​ಲಿಂಕ್​ ಅನ್ನು 50 ವರ್ಷಕ್ಕೊಮ್ಮೆ ಬದಲಾಯಿಸಬೇಕು ಎಂದು ತಜ್ಞರು ಹೇಳಿದ್ದರು. ಆದರೆ, ಇನ್ನೂವರೆಗೂ ಜಲಾಶಯದ 33 ಕ್ರೆಸ್ಟ್ ಗೇಟ್‌ಗಳನ್ನು ಬದಲಾಯಿಸಿಲ್ಲ. ಮತ್ತು ಕ್ರೆಸ್ಟ್ ಗೇಟ್‌ ನಂಬರ್​ 19ಕ್ಕೆ ಮತ್ತೆ ಸಮಸ್ಯೆಯಾಗಬಾರದೆಂದು ಕೇವಲ ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹಿಸಲು ನಿರ್ಧರಿಸಲಾಗಿದೆ. ಸದ್ಯ ಜಲಾಶಯದಲ್ಲಿ 77 ಟಿಎಂಸಿ ನೀರು ಸಂಗ್ರಹವಾಗಿದೆ. ಜಾಲಾಶಯದ 19 ಕ್ರೆಸ್ಟ್ ಗೇಟ್​ಗಳ ಮೂಲಕ 62,000 ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ.

ಇದನ್ನೂ ಓದಿ
Image
ನಿರ್ಬಂಧ ಉಲ್ಲಂಘಿಸಿ TB ಡ್ಯಾಂ ಆವರಣದಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ
Image
ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ನಂತರ 7 ಟಿಎಂಸಿಗೂ ಹೆಚ್ಚು ನೀರು ಸಂಗ್ರಹ
Image
ತುಂಗಭದ್ರಾ ಜಲಾಶಯದ ಆಯುಷ್ಯ ಮುಗಿದಿದೆ: ಜಲತಜ್ಞರು ನೀಡಿದ ಮಾಹಿತಿ ಇಲ್ಲಿದೆ
Image
ತುಂಗಭದ್ರಾ ಡ್ಯಾಂ ಗೇಟ್​ನ ಚೈನ್​ ಕಟ್​: ದುರಸ್ತಿ ಕಾರ್ಯಕ್ಕೆ ಬೇಕು 1 ವಾರ!

ಇದನ್ನೂ ಓದಿ: ತುಂಗಭದ್ರಾ ಆಯ್ತು, ಅಪಾಯದಲ್ಲಿದೆ ರಾಜ್ಯದ ಮತ್ತೊಂದು ಪ್ರಮುಖ ಡ್ಯಾಂ

ರಾಜ್ಯ ಸರ್ಕಾರ ಇನ್ನಾದರೂ ತುಂಗಭದ್ರಾ ಜಲಾಶಯದ 33 ಕ್ರೆಸ್ಟ್​ ಗೇಟ್​ಗಳನ್ನು ಬದಲಾಯಿಸಿ, ಹೊಸ ಕ್ರೆಸ್ಟ್​ ಗೇಟ್​ಗಳನ್ನು ಅಳವಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Mon, 7 July 25

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ