AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದುಂಬಿ ಹರಿಯುತ್ತಿರುವ ತುಂಗಾಭದ್ರ, ಕೃಷ್ಣ ನದಿ: ಹಲವೆಡೆ ಪ್ರವಾಹ ಭೀತಿ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆ ಆಗುತ್ತಿದೆ. ಪರಿಣಾಮ ಕರ್ನಾಟಕದ ಎಲ್ಲಾ ಜಲಾಶಯಗಳು ಭರ್ತಿ ಆಗಿವೆ. ಆಯಾ ಡ್ಯಾಂನ ನೀರನ್ನು ನದಿಗೆ ಬಿಡಲಾಗುತ್ತಿದೆ. ಉಕ್ಕಿಹರಿಯುತ್ತಿವೆ. ಹೀಗಾಗಿ ನದಿ ಪಾತ್ರದ ಪ್ರದೇಶಗಳು ಮುಳುಗುವ ಭೀತಿ ಎದುರಾಗಿದೆ. ಒಳಹರಿವು ಹೆಚ್ಚಳ ಕಾರಣ ನದಿಗೆ ಇಳಿಯದಂತೆ ಜಿಲ್ಲಾಧಿರಿಗಳಿಂದ ಸೂಚನೆ ನೀಡಿಲಾಗಿದೆ.

ಮೈದುಂಬಿ ಹರಿಯುತ್ತಿರುವ ತುಂಗಾಭದ್ರ, ಕೃಷ್ಣ ನದಿ: ಹಲವೆಡೆ ಪ್ರವಾಹ ಭೀತಿ
ಮೈದುಂಬಿ ಹರಿಯುತ್ತಿರುವ ತುಂಗಾಭದ್ರ, ಕೃಷ್ಣ ನದಿ: ಹಲವೆಡೆ ಪ್ರವಾಹ ಭೀತಿ
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 25, 2024 | 5:23 PM

Share

ಯಾದಗಿರಿ, ಜುಲೈ 25: ಮಹಾರಾಷ್ಟ್ರ ಭಾಗದಲ್ಲಿ ಅಬ್ಬರಿಸುತ್ತಿರುವ ಮಳೆ (rain) ಉತ್ತರ ಕರ್ನಾಟಕದಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ನದಿಗಳೆವೂ ಬೋರ್ಗರೆಯುತ್ತಿದ್ದು ಸೇತುವೆಗಳು ಮುಳುಗಿದ್ದರೆ, ಗ್ರಾಮಗಳು ಜಲಾವೃತ ಆಗುತ್ತಿವೆ. ಮಳೆ ಬರಲಿ ಎನ್ನುತ್ತಿದ್ದವರು ಸಾಕಪ್ಪ ಸಾಕು ಎನ್ನುವಂತಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆಯಿಂದ ಕರ್ನಾಟಕದ (Karnataka) ಬಹುತೇಕ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಹೆಚ್ಚುವರಿ ನೀರನ್ನು ನದಿಗಳಿಗೆ ಬಿಡಲಾಗುತ್ತಿದ್ದು, ಉಕ್ಕಿಹರಿಯುತ್ತಿವೆ. ಹೀಗಾಗಿ ಆತಂಕ ಶುರುವಾಗಿದೆ.

ಕೃಷ್ಣಾ ನದಿಗೆ 2.5 ಲಕ್ಷ ಕ್ಯೂಸೆಕ್ ಒಳಹರಿವು ಸಾಧ್ಯತೆ

ಕೃಷ್ಣಾ ನದಿಗೆ ಕ್ಷಣ ಕ್ಷಣಕ್ಕೂ ಒಳ ಹರಿವು ಹೆಚ್ಚುತ್ತಿದ್ದು, ನದಿ ಪಾತ್ರದ ಪ್ರದೇಶಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ ರೋಷನ್ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಭೇಟಿ ನೀಡಿದ್ದಾರೆ. ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಇಂದು ಸಂಜೆ ಕೃಷ್ಣಾ ನದಿಗೆ 2.5 ಲಕ್ಷ ಕ್ಯೂಸೆಕ್ ಒಳಹರಿವು ಸಾಧ್ಯತೆ ಇದೆ. ಆಲಮಟ್ಟಿ ಡ್ಯಾಂವರೆಗೂ ನಾವು ಪ್ರವಾಹ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ ಎಂದರು.

ಆಲಮಟ್ಟಿ ಡ್ಯಾಂನಿಂದ ಈಗಾಗಲೇ ಎರಡೂವರೆ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಆಗಿದೆ. ಘಟಪ್ರಭಾ ನದಿ ಹಿಡಕಲ್ ಡ್ಯಾಂನಿಂದ 25 ಸಾವಿರ ಕ್ಯೂಸೆಕ್ ಬಿಡುಗಡೆ ಮಾಡಲಾಗಿದ್ದು, ಲೋಳಸೂರ್ ಬ್ರಿಡ್ಜ್‌ನಿಂದ 25 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಹೀಗಾಗಿ ರಾತ್ರಿ ವೇಳೆ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ ನೀರು ರಿಲೀಸ್ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಸಂಚಾರ ಸ್ಥಗಿತ

ಮಹಾರಾಷ್ಟ್ರದ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಕೋಯ್ನಾ ಡ್ಯಾಂ ಶೇಕಡ 70ರಷ್ಟು ಭರ್ತಿ ಇದ್ದು ಇನ್ನೂ ಶೇಖಡ 30ರಷ್ಟು ಬಾಕಿ ಇದೆ. ನಾವು ಹೇಳಿದ ಬಳಿಕೆ ನದಿ ತೀರದ ಗ್ರಾಮಗಳ ಜನ ಕಾಳಜಿ ಕೇಂದ್ರಕ್ಕೆ ಹೋಗಬೇಕು. ನಾವು ಈಗಾಗಲೇ ಬೋಟ್ ವ್ಯವಸ್ಥೆ ಸೇರಿ ಎಲ್ಲ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ.

ಮುಳುಗಡೆ ಹಂತಕ್ಕೆ ತಲುಪಿದ ರಾಯಚೂರು-ಯಾದಗಿರಿ-ಕಲಬುರಗಿ ಜಿಲ್ಲೆಗೆ ಸಂಪರ್ಕಿಸುವ ಸೇತುವೆ

ಯಾದಗಿರಿಯ ನಾರಾಯಣಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಿಂದ ಕೃಷ್ಣಾ ನದಿಗೆ 2.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ರಾಯಚೂರಿನ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ‌ ಪ್ರವಾಹ ಭೀತಿ ಉಂಟಾಗಿದೆ.

ಡ್ಯಾಂನಿಂದ ಕೃಷ್ಣಾ ನದಿಗೆ 2.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ಕೊಳ್ಳೂರು ಬಳಿಯ ಸೇತುವೆ ಮುಳುಗಡೆ ಹಂತಕ್ಕೆ ತಲುಪಿದೆ. ರಾಯಚೂರು-ಯಾದಗಿರಿ-ಕಲಬುರಗಿ ಜಿಲ್ಲೆಗೆ ಸಂಪರ್ಕಿಸುವ ಸೇತುವೆ ಆಗಿದೆ. ಸದ್ಯ ಕೊಳ್ಳೂರು ಬಳಿಯ ಸೇತುವೆಗೆ ಅಧಿಕಾರಿಗಳು ಭೇಟಿ ನೀಡಿದ್ದು, ಸಂಜೆ ಬಳಿಕ ಸಂಚಾರ ನಿರ್ಬಂಧ ಸಾಧ್ಯತೆ ಇದೆ.

ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ದೂದ್ ಗಂಗಾ ನದಿ, ಪ್ರವಾಹ ಭೀತಿಯಲ್ಲಿ ನದಿಪಾತ್ರದ ಗ್ರಾಮಸ್ಥರು

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕರಕಲಗಡ್ಡಿ ಸೇರಿ ಕೆಲ ನಡುಗಡ್ಡೆ ಗ್ರಾಮಗಳಿಗೆ ಬೋಟ್ ಮೂಲಕ ವೈದ್ಯಕೀಯ ಕಿಟ್, ಫುಡ್ ಕಿಟ್​​ಗಳ ಅಗತ್ಯವಸ್ತು ಪೂರೈಕೆ ಮಾಡಲಾಗಿದೆ. ಲಿಂಗಸಗೂರು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ, ತಹಶೀಲ್ದಾರ್ ಶಂಶಾಲಂ, ಡಿವೈಎಸ್​ಪಿ ದತ್ತಾತ್ರೇಯ ನೇತೃತ್ವದಲ್ಲಿ ವಿತರಣೆ ಮಾಡಲಾಗಿದೆ.

ನದಿ ಪಾತ್ರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಸೂಚನೆ

ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರಕ್ಕೆ ತೆರಳದಂತೆ ಡಂಗುರ ಸಾರುವ ಮೂಲಕ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ನಿರಂತರ ಒಳಹರಿವು ಹೆಚ್ಚಳ ಕಾರಣ ನದಿಗೆ ಅಳವಡಿಸಿದ್ದ ಪಂಪಸೆಟ್ ಮೋಟರ್​​ಗಳನ್ನ ತೆರವುಗೊಳಿಸುವಂತೆ ಹಾಗೂ ನದಿಯಲ್ಲಿ ಮೀನುಗಾರಿಕೆ ಕೂಡ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ.

105.788 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯ‌ ಸಂಪೂರ್ಣ ಭರ್ತಿಯಾದ ಹಿನ್ನಲೆಯಲ್ಲಿ 22 ಕ್ರಸ್ಟ್ ಗೇಟ್ ಗಳನ್ನ ತೆರೆಯುವ ಮೂಲಕ ನದಿ ಸೇರಿ ವಿಜಯನಗರ ಕಾಲುವೆ, ಎಡದಂಡೆ ಹಾಗೂ ಬಲದಂಡೆ ಕಾಲುವೆಗೂ ಸಹ ನೀರು ಬಿಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ