AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಗೇಟ್​ ಕಟ್​; ಚೀಫ್ ಇಂಜಿನಿಯರ್​ಗೆ ಎಷ್ಟು ಫಿಕ್ಸ್ ಮಾಡಿದ್ದೀರಿ-ಕೈ ಸರ್ಕಾರಕ್ಕೆ ಹೆಚ್​ಡಿಕೆ ಪ್ರಶ್ನೆ

ತುಂಗಭದ್ರಾ ಜಲಾಶಯದ ಗೇಟ್​​ ಕಟ್​ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ‘ಚೀಫ್ ಇಂಜಿನಿಯರ್​ನ ನೇಮಕ ಮಾಡೋಕೆ ಎಷ್ಟೆಷ್ಟು ಫಿಕ್ಸ್ ಮಾಡಿದ್ದಿರಾ ಅದನ್ನ ನಿಲ್ಲಿಸಿ. ಇದನೆಲ್ಲಾ ನಾನು ಅನುಭವಿಸಿದ್ದೇನೆ. ಎಂಡಿ, ಚೀಫ್ ಇಂಜಿನಿಯರ್​ಗೆ ಇಷ್ಟು ಅಂತಾ ಫಿಕ್ಸ್ ಮಾಡಿದ್ದಾರೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ದ ಕಿಡಿಕಾರಿದರು.

ತುಂಗಭದ್ರಾ ಗೇಟ್​ ಕಟ್​; ಚೀಫ್ ಇಂಜಿನಿಯರ್​ಗೆ ಎಷ್ಟು ಫಿಕ್ಸ್ ಮಾಡಿದ್ದೀರಿ-ಕೈ ಸರ್ಕಾರಕ್ಕೆ ಹೆಚ್​ಡಿಕೆ ಪ್ರಶ್ನೆ
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ
ಸುನಿಲ್​ ಎಮ್​ ಹೆಚ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 13, 2024 | 3:04 PM

Share

ಬೆಂಗಳೂರು, ಆ.13: ತುಂಗಭದ್ರಾ ಜಲಾಶಯ ಗೇಟ್​ನ ಚೈನ್​ ಲಿಂಕ್​ ಕಟ್​ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ(H. D. Kumaraswamy), ‘ಸೇಫ್ಟಿ ಮೆಜಾರಿಟಿ ಕಮಿಟಿಗೆ ಒಂದು ಫಾರ್ಮೇಟ್ ಕೊಟ್ಟಿರುತ್ತಾರೆ. ಪ್ರತಿಯೊಂದು ವಸ್ತುಗಳನ್ನು ಚೆಕ್ ಮಾಡಬೇಕು. ಪ್ರತಿವರ್ಷ ಲೂಬ್ರಿಕೇಷನ್ ಮಾಡಬೇಕಾಗುತ್ತದೆ. ಈ ಹಿನ್ನಲೆ ಕೇಂದ್ರ ಸರ್ಕಾರ 2021 ರಲ್ಲಿ ಹೊಸ ಕಾನೂನು ತಂದರು, ಇದರ ಪ್ರಕಾರ ಕೇಂದ್ರ ಸರ್ಕಾರದಿಂದ ಒಬ್ಬ , ರಾಜ್ಯ ಸರ್ಕಾರದಿಂದ ಒಬ್ಬ ಅಧಿಕಾರಿ ಇರುತ್ತಾರೆ. ಚೀಫ್ ಇಂಜಿನಿಯರ್​ನ ನೇಮಕ ಮಾಡೋಕೆ ಎಷ್ಟೆಷ್ಟು ಫಿಕ್ಸ್ ಮಾಡಿದ್ದಿರಾ ಅದನ್ನ ನಿಲ್ಲಿಸಿ. ಇದನೆಲ್ಲಾ ನಾನು ಅನುಭವಿಸಿದ್ದೇನೆ. ಎಂಡಿ, ಚೀಫ್ ಇಂಜಿನಿಯರ್​ಗೆ ಇಷ್ಟು ಅಂತಾ ಫಿಕ್ಸ್ ಮಾಡಿದ್ದಾರೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ದ ಕಿಡಿಕಾರಿದರು.

ದುಡ್ಡು ಕೊಟ್ಟು ಬಂದವನು ಡ್ಯಾಂ ಏನಾಗಿದೆ ಅಂತಾ ನೋಡ್ತಾನ?

ತುಂಗಭದ್ರಾ ಡ್ಯಾಂಗೆ 70 ವರ್ಷ ಆಗಿದೆ. ಇದು ಟಿಬಿ ಬೋರ್ಡ್​ಗೆ ಬರುತ್ತದೆ. ಆಂಧ್ರ, ಕೇಂದ್ರ ಸರ್ಕಾರದ ಜವಾಬ್ದಾರಿ ಇದೆ. ಈ ಕುರಿತು ರಿಪೊರ್ಟ್ ಕೊಡೊದಕ್ಕೆ ಎಂದು ಒಂದು ಕಮಿಟಿ ಇದೆ. 122 ಟಿಎಂಸಿ ನಮ್ಮ ರಾಜ್ಯಕ್ಕೆ ಸಿಗಬೇಕು, 73 ಟಿಎಂಸಿ ನೀರು ಆಂಧ್ರಕ್ಕೆ ಸಿಗಬೇಕು. 103 ಟಿಎಂಸಿ ಈಗ ಸಿಗ್ತಿದೆ. ಇನ್ನು ದುಡ್ಡು ಕೊಟ್ಟು ಬಂದವನು ಈ ಡ್ಯಾಂ ಏನಾಗಿದೆ, ಗೇಟ್ ಏನಾಗಿದೆ ಅಂತಾ ಯಾಕೆ ನೋಡ್ತಾನೆ ಎಂದರು. ಈಗ ತರಾತುರಿಯಲ್ಲಿ ರಿಪೇರಿ ಮಾಡೋದಕ್ಕೆ ಹೋಗಿ ಮತ್ತೆ ಏನೇನೋ ಅವಾಂತರ ಆಗುವುದು ಬೇಡ, ರೈತರಿಗೆ ಕಾನ್ಫಿಡೆನ್ಸ್ ಬರುವಂತೆ ಮಾಡಿ. ನಿಮ್ಮ ಊಹೆ ಮೇಲೆ ನಿರ್ಧಾರ ಮಾಡಿ ರೈತರ ಬೆಳೆ ನಷ್ಟ ಮಾಡಬೇಡಿ ಎಂದು ಕೈ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ತುಂಗಭದ್ರಾ ಜಲಾಶಯದ ಆಯುಷ್ಯ ಮುಗಿದಿದೆ: ಜಲತಜ್ಞರು ನೀಡಿದ ಅಚ್ಚರಿಯ ಮಾಹಿತಿ ಇಲ್ಲಿದೆ

ಸದ್ಯ ಡ್ಯಾಂನಲ್ಲಿ 91.979 ಟಿಎಂಸಿ ನೀರು ಸಂಗ್ರಹ

ಹೌದು, ಕೊಪ್ಪಳ ತಾಲೂಕಿನ ಮುಶಿರಾಬಾದ್​​ ಬಳಿಯಿರುವ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ತುಂಡಾಗಿ ಎರಡು ದಿನದಲ್ಲಿ 14 ಟಿಎಂಸಿ ನೀರು ಹರಿದು ಹೋಗಿದೆ. ಈ ಜಲಾಶಯ 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಆಗಸ್ಟ್ 10ರಂದು ಡ್ಯಾಮ್​ನಲ್ಲಿ ಬರೋಬ್ಬರಿ 105 ಟಿಎಂಸಿ ನೀರು ಸಂಗ್ರಹವಿತ್ತು. ಸದ್ಯ ಡ್ಯಾಂನಲ್ಲಿ 91.979 ಟಿಎಂಸಿ ನೀರು ಸಂಗ್ರಹ ಇದೆ. ಇನ್ನು ತಾತ್ಕಾಲಿಕ ಗೇಟ್ ಅಳವಡಿಕೆಗೆ ತುಂಗಭದ್ರಾ ಡ್ಯಾಮ್​​​​ ಮಂಡಳಿ ನಿರ್ಧಾರ ಕೈಗೊಂಡಿದ್ದು, ಗೇಟ್​ ಅಳವಡಿಕೆ ಯಶಸ್ವಿಯಾದರೆ ಅಪಾರ ಪ್ರಮಾಣದ ನೀರು ಉಳಿಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Tue, 13 August 24

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ