AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake: ಟರ್ಕಿಯಲ್ಲಿನ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರದಿಂದ ಹೆಲ್ಪಲೈನ್​​ ಆರಂಭ

ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ 080-22340676 ಸಹಾಯವಾಣಿ ಆರಂಭಿಸಿದೆ.

Turkey Earthquake: ಟರ್ಕಿಯಲ್ಲಿನ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರದಿಂದ ಹೆಲ್ಪಲೈನ್​​ ಆರಂಭ
ಟರ್ಕಿ ಭೂಕಂಪದಿಂದ ಧರೆಗುರುಳಿದ ಕಟ್ಟಡಗಳು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Feb 08, 2023 | 10:34 AM

Share

ಬೆಂಗಳೂರು: ಟರ್ಕಿ (Turkey) ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು, ಜನತೆಯನ್ನು ಅಕ್ಷರಶಃ ನರಕಕ್ಕೆ ತಳ್ಳಿದೆ. ಭೂಕಂಪದಿಂದ ಈಗಾಗಲೇ 7,800ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ ಕಟ್ಟಡದ ಅವಶೇಷಗಳಡಿ ಇನ್ನೂ 1,80,000 ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ಎಲ್ಲರೂ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆ ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ ಮಾಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ನಿನ್ನೆಯಿಂದ (ಫೆ.7) ಸಹಾಯವಾಣಿ ಆರಂಭಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಭಾರತದ ರಾಯಭಾರಿ ಕಚೇರಿ ಜತೆ ಸಂಪರ್ಕದಲ್ಲಿದೆ.

ನಿನ್ನೆಯಿಂದ ಸದ್ಯ ಇಲ್ಲಿ ತನಕ ಯಾವುದೇ ಕರೆ ಬಂದಿಲ್ಲ. ಕರೆ ಬಂದ ತಕ್ಷಣ ಅಗತ್ಯ ಸಹಾಯಕ್ಕೆ ತಯಾರಾಗಿದ್ದೇವೆ. ಟರ್ಕಿ ಭೂಕಂಪನ ವಿಚಾರ ಸಂಬಂಧ, ಯಾರಿಗಾದ್ರು ಸಹಾಯ ಬೇಕಿದ್ದಲ್ಲಿ ತಕ್ಷಣ 080-22340676 ಸಹಾಯವಾಣಿ ನಂಬರ್​ಗೆ ಕರೆ ಮಾಡಿ ಎಂದು ಹೆಲ್ಪ್ ಲೈನ್ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.

4000 ಕ್ಕೂ ಹೆಚ್ಚು ಸಾವು

ಟರ್ಕಿಯಲ್ಲಿ 5,894 ಮಂದಿ ಮೃತಪಟ್ಟಿದ್ದು, ಸಿರಿಯಾದಲ್ಲಿ 1932 ಮಂದಿ ಸಾವನ್ನಪ್ಪಿದ್ದಾರೆ. ಅಂತಿಮವಾಗಿ ಸಾವಿನ ಸಂಖ್ಯೆ 20,000 ಮೀರಬಹುದು ಎಂದು ಅಂದಾಜಿಸಲಾಗಿದೆ. ಟರ್ಕಿ ಹಾಗೂ ಸಿರಿಯಾದಾದ್ಯಂತ ಸುಮಾರು 23 ಮಿಲಿಯನ್ ಜನರು ಈ ದುರಂತದಿಂದ ಪ್ರಭಾವಿತರಾಗಿದ್ದಾರೆ.

ಟರ್ಕಿಯಲ್ಲಿ ತುರ್ತು ಪರಿಸ್ಥಿತಿ

ದಕ್ಷಿಣ ಟರ್ಕಿಯಲ್ಲಿನ ವಿನಾಶಕಾರಿ ಭೂಕಂಪಗಳಿಂದ ನಲುಗಿರುವ 10 ಪ್ರಾಂತ್ಯಗಳನ್ನು ವಿಪತ್ತು ವಲಯವೆಂದು ಘೋಷಿಸಿದ ಎರ್ಡೊಗನ್ ಅವರು, ಮೂರು ತಿಂಗಳ ತುರ್ತು ಪರಿಸ್ಥಿತಿ ಮತ್ತು 7 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದಾರೆ.  ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಭೂಕಂಪದಿಂದಾಗಿ ಕನಿಷ್ಠ 20,426 ಜನ ಗಾಯಗೊಂಡಿದ್ದಾರೆ ಮತ್ತು 5,775 ಕಟ್ಟಡಗಳು ಧರೆಗುರುಳಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ದಶಕದಲ್ಲೇ ಅತಿದೊಡ್ಡ ಭೂಕಂಪ

ಸೋಮವಾರ ಟರ್ಕಿಯಲ್ಲಿ ಸಂಭವಿಸಿದ ಭೂಕಂಪವು ದಶಕದಲ್ಲೇ ಸಂಭವಿಸಿದ ಅತಿದೊಡ್ಡ ಪ್ರಾಕೃತಿಕ ವಿಕೋಪವಾಗಿದೆ ಎಂದು ಟರ್ಕಿ ದೇಶದ ಅಧ್ಯಕ್ಷರು ತಿಳಿಸಿದ್ದು, ಭೂಕಂಪ ಶಾಸ್ತ್ರಜ್ಞರ ಅಭಿಪ್ರಾಯದ ಪ್ರಕಾರ ಈ ಭೂಕಂಪ ಟರ್ಕಿಯಲ್ಲಿ ಈವರೆಗೆ ಸಂಭವಿಸಿದ ಭೂಕಂಪಗಳ ಪೈಕಿ ಅತಿ ದೊಡ್ಡದಾಗಿದೆ.

ಭಾರತಕ್ಕೆ ಧನ್ಯವಾದ ಹೇಳಿದ ಟರ್ಕಿ

ಕಳೆದ 24 ಗಂಟೆಗಳಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪದಿಂದ ತತ್ತರಿಸಿರುವ ಟರ್ಕಿ ದೇಶದ ನೆರವಿಗೆ ಭಾರತವು ಧಾವಿಸಿರುವ ಬೆನ್ನಲ್ಲೇ ಈಗ ಭಾರತಕ್ಕೆ ಧನ್ಯವಾದವನ್ನು ಅರ್ಪಿಸಿದೆ. ದೇಶಕ್ಕೆ ಹಣವನ್ನು ಒದಗಿಸಿದ ಉದಾರತೆಗಾಗಿ ಭಾರತವನ್ನು ದೋಸ್ತ್ ಎಂದು ಕರೆಯುತ್ತಾ, ಭಾರತಕ್ಕೆ ಟರ್ಕಿಯ ರಾಯಭಾರಿ ಫಿರತ್ ಸುನೆಲ್ ನವದೆಹಲಿಗೆ ಧನ್ಯವಾದ ಅರ್ಪಿಸಿದರು ಮತ್ತು ಅಗತ್ಯಕಾಲದಲ್ಲಿ ನೆರವಿಗೆ ಬಂದವನೇ ನಿಜವಾಗಿಯೂ ಸ್ನೇಹಿತ ಎಂದು ಹೇಳಿದರು. ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಮೂರು ತಿಂಗಳ ಅವಧಿಗೆ ಟರ್ಕಿಯ 10 ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್