Evening Digest | ಇಂದು ನೀವು ಮಿಸ್ ಮಾಡಿಕೊಳ್ಳದೇ ಗಮನಿಸಬೇಕಾದ 9 ಪ್ರಮುಖ ಸುದ್ದಿ, ಬೆಳವಣಿಗೆಗಳಿವು
Kannada News Today: ದಿನವಿಡೀ ಹರಿದುಬರುವ ಸುದ್ದಿ ಪ್ರವಾಹದಲ್ಲಿ ಅತಿಮುಖ್ಯ ಸುದ್ದಿ / ಬೆಳವಣಿಗೆ ನಿಮ್ಮ ಕಣ್ತಪ್ಪಬಾರದು. ಹೀಗಾಗಿಯೇ 9 ಪ್ರಮುಖ ಸುದ್ದಿಗಳನ್ನು ನಿಮ್ಮ ಮುಂದಿಡುವ ಪ್ರಯತ್ನ ಟಿವಿ9 ಡಿಜಿಟಲ್ ತಂಡ ಮಾಡಿದೆ.
ಇಂದು ನೀವು ಮಿಸ್ ಮಾಡಿಕೊಳ್ಳದೇ ಗಮನಿಸಬೇಕಾದ 9 ಪ್ರಮುಖ ಸುದ್ದಿ / ಬೆಳವಣಿಗೆಗಳ ಮಾಹಿತಿ ಇಲ್ಲಿದೆ. ದೇಶ-ವಿದೇಶಗಳಿಂದ ನಾಲ್ಕು ದಿಕ್ಕಿನಿಂದ ಸಾವಿರಾರು ಸುದ್ದಿ ಹರಿದಾಡುತ್ತಿರುತ್ತವೆ. ಕ್ಷಣಾರ್ಧದಲ್ಲಿ ಬಹುತೇಕ ಸುದ್ದಿಗಳನ್ನು ನಿಮಗೆ ತಲುಪಿಸುವ ಕಾರ್ಯ ಟಿವಿ9 ವೆಬ್ಸೈಟ್ ಮಾಡುತ್ತಿದೆ. ದಿನವಿಡೀ ಹರಿದುಬರುವ ಸುದ್ದಿ ಪ್ರವಾಹದಲ್ಲಿ ಅತಿಮುಖ್ಯ ಸುದ್ದಿ / ಬೆಳವಣಿಗೆ ನಿಮ್ಮ ಕಣ್ತಪ್ಪಬಾರದು. ಹೀಗಾಗಿಯೇ 9 ಪ್ರಮುಖ ಸುದ್ದಿಗಳನ್ನು ನಿಮ್ಮ ಮುಂದಿಡುವ ಪ್ರಯತ್ನ ಟಿವಿ9 ಡಿಜಿಟಲ್ ತಂಡ ಮಾಡಿದೆ.
1) ಸದನದಲ್ಲಿ ಸಿದ್ದರಾಮಯ್ಯ ವ್ಯಂಗ್ಯ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದ ಸಚಿವರಿಗೇ ಸ್ವತಃ ಭಯ ಇರುವಾಗ ಆ ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನತೆಗೆ ಹೇಗೆ ರಕ್ಷಣೆ ನೀಡುತ್ತಾರೆ? ಸಚಿವರ ಮನವಿ ಪುರಸ್ಕರಿಸಿ ಕೋರ್ಟ್ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಿತು. Link: ಬಾಂಬೆಗೆ ಹೋದವರು ಮಾತ್ರ ಯಾಕೆ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ಗೆ ಹೋದ್ರು? ಸದನದಲ್ಲಿ ಸಿದ್ದರಾಮಯ್ಯ ವ್ಯಂಗ್ಯ
2) ಎನ್ಡಿಎ ಅಭ್ಯರ್ಥಿಗಳು ಕೇರಳ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿ ವಜಾ ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಮೂವರು ಎನ್ಡಿಎ ಅಭ್ಯರ್ಥಿಗಳ ನಾಮಪತ್ರವನ್ನು ಚುನಾವಣಾ ಅಧಿಕಾರಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿ ವಜಾ ಆಗಿದೆ. Link: Kerala Assembly Elections 2021: ನಾಮಪತ್ರ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಎನ್ಡಿಎ ಅಭ್ಯರ್ಥಿಗಳು ಕೇರಳ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿ ವಜಾ
3) ಶೀಘ್ರ ಗುಣಮುಖರಾಗಿ ಎಂದು ಕಮಲ್ಗೆ ಹಾರೈಸಿದ ಬಿಜೆಪಿ ಅಭ್ಯರ್ಥಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೊಯಮತ್ತೂರು ದಕ್ಷಿಣ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕಿ ವನತಿ ಶ್ರೀನಿವಾಸನ್ ಅವರ ಹೇಳಿಕೆಗೆ ರಾಜಕೀಯದಲ್ಲಿ ಹೊರಗಿನವರು ಎಂಬುದಿಲ್ಲ ಎಂದು ಮಕ್ಕಳ್ ನೀಧಿ ಮಯ್ಯಂ (MNM) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ. Link: Tamil Nadu Elections 2021: ರಾಜಕೀಯದಲ್ಲಿ ಹೊರಗಿನವರು ಎಂಬುದಿಲ್ಲ: ಬಿಜೆಪಿ ಅಭ್ಯರ್ಥಿಯ ಹೇಳಿಕೆಗೆ ಕಮಲ್ ಹಾಸನ್ ಪ್ರತಿಕ್ರಿಯೆ
4) ಯಾರ ಪರವೂ ಇಲ್ಲ, ವಿರೋಧವೂ ಇಲ್ಲ; ಬಸವರಾಜ ಬೊಮ್ಮಾಯಿ ನಾವು ಕೇವಲ ಒಂದು ಸಿಡಿ ಬಗ್ಗೆ ತನಿಖೆ ಮಾಡುತ್ತಿಲ್ಲ. ಎಲ್ಲ 19 ಸಿಡಿಗಳ ಬಗ್ಗೆಯೂ ತನಿಖೆ ಮಾಡುತ್ತಿದ್ದೇವೆ. ತನ್ನ ಬಳಿ 19 ಸಿಡಿ ಇದೆ ಎಂದು ಹೇಳಿಕೆ ನೀಡಿದ್ದ ವ್ಯಕ್ತಿಗೆ ನೊಟೀಸ್ ನೀಡಿದ್ದೇವೆ. ಆದರೆ ಆ ವ್ಯಕ್ತಿ ಈವರೆಗೂ ವಿಚಾರಣೆಗೆ ಬಂದಿಲ್ಲ. ನಮಗೆ ಹಲವಾರು ಸಂಘ ಸಂಸ್ಥೆಗಳಿಂದ ದೂರು ಬಂದಿದೆ. Link: ಒಂದು ಸಿಡಿ ಅಲ್ಲ, ಎಲ್ಲಾ 19 ಸಿಡಿಗಳ ಬಗ್ಗೆಯೂ ತನಿಖೆ ಮಾಡುತ್ತೇವೆ; ಗೃಹ ಸಚಿವ ಬಸವರಾಜ ಬೊಮ್ಮಾಯಿ
5) ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ಎಲ್ಲಿದೆ ಎಂದು ಎನ್ಸಿಪಿ ವರಿಷ್ಠ ಶರದ್ ಪವಾರ್ ಪ್ರಶ್ನೆ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಮೇಲೆ ಗೃಹ ಸಚಿವ ಅನಿಲ್ ದೇಶ್ಮುಖ್ ₹ 100 ಕೋಟಿ ವಸೂಲಿ ಮಾಡುವಂತೆ ಒತ್ತಡ ಹೇರಿರಲು ಸಾಧ್ಯವೇ ಇಲ್ಲ. ಏಕೆಂದರೆ ಪರಮ್ವೀರ್ ಸಿಂಗ್ ಆರೋಪಿಸಿದ ಅವಧಿಯಲ್ಲಿ ಫೆಬ್ರವರಿ 15ರಿಂದ 27 ರವರೆಗೆ ಅನಿಲ್ ದೇಶ್ಮುಖ್ ಕೊರೊನಾ ಸೋಂಕಿಗೆ ತುತ್ತಾಗಿ ಹೋಂ ಕ್ವಾರಂಟೈನ್ನಲ್ಲಿದ್ದರು ಎಂದು ಎನ್ಸಿಪಿ ವರಿಷ್ಠ ಶರದ್ ಪವಾರ್ ಹೇಳಿದ್ದಾರೆ. Link: ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ತನಿಖೆಯ ದಾರಿ ತಪ್ಪಿಸಲು ₹ 100 ಕೋಟಿ ಭ್ರಷ್ಟಾಚಾರದ ಆರೋಪ: ಶರದ್ ಪವಾರ್
6) ತುಪ್ಪದ ಬೆಡಗಿಗೆ ಖುಲಾಯಿಸಿದ ಅದೃಷ್ಟ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ರಾಗಿಣಿ ದ್ವಿವೇದಿ ಜನವರಿಯಲ್ಲಿ ಜಾಮೀನಿನ ಆಧಾರದಲ್ಲಿ ಹೊರಬಂದಿದ್ದಾರೆ. ಹೀಗೆ ಹೊರಬರುತ್ತಿದ್ದಂತೆ ಅವರ ಅದೃಷ್ಟ ಖುಲಾಯಿಸಿದೆ. Link: ತುಪ್ಪದ ಬೆಡಗಿಗೆ ಖುಲಾಯಿಸಿದ ಅದೃಷ್ಟ; ಖಡಕ್ ತನಿಖಾಧಿಕಾರಿಯಾಗಿ ಬರಲು ಸಿದ್ಧರಾಗುತ್ತಿದ್ದಾರೆ ರಾಗಿಣಿ ದ್ವಿವೇದಿ
7) ಮತ್ತೆ ಆರಂಭವಾದ ಐಎಎಸ್ ಪರ್ವ ಕಳೆದ ವರ್ಷ ಕೊರೊನಾ ಸೋಂಕು ಹರಡುವುದಕ್ಕೆ ತಡೆಯೊಡ್ಡಲೆಂದು ಜಾರಿ ಮಾಡಿದ ಲಾಕ್ಡೌನ್ ಕಾರಣದಿಂದಾಗಿ ಐಎಎಸ್ ಕನಸು ಹೊತ್ತಿದ್ದ ಆಕಾಂಕ್ಷಿಗಳು ತುಸು ಹಿನ್ನಡೆ ಅನುಭವಿಸುವಂತಾಯಿತು. ಈ ವರ್ಷ ಮತ್ತೆ ಐಎಎಸ್ ಪರ್ವ ಆರಂಭವಾಗಿದೆ. Link: UPSC Calendar: ಐಎಎಸ್, ಐಎಫ್ಎಸ್ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನ
8) ಮೊದಲ ಏಕದಿನ ಪಂದ್ಯ ಮಾಹಿತಿ ಇಲ್ಲಿದೆ ಮೊದಲ ಪಂದ್ಯವನ್ನು ಕಳೆದುಕೊಂಡಿದ್ದರೂ ಭಾರತ ಟೆಸ್ಟ್ ಸರಣಿಯನ್ನು ಆರಾಮವಾಗಿ ಗೆದ್ದುಕೊಂಡಿತು. ಐದು ಪಂದ್ಯಗಳ ಟ್ವೆಂಟಿ -20 ಇಂಟರ್ನ್ಯಾಷನಲ್ (ಟಿ 20 ಐ) ಸರಣಿಯನ್ನು ಗೆಲ್ಲುವ ಮೂಲಕ ತಮ್ಮ ಗೆಲುವಿನ ಸರಣಿಯನ್ನು ಮುಂದುವರೆಸಿದೆ. Link: India vs England: ಮೊದಲ ಏಕದಿನ ಪಂದ್ಯ ಆರಂಭವಾಗುವ ಸಮಯ, ದಿನಾಂಕ, ನೇರ ಪ್ರಸಾರ ಯಾವ ಚಾನೆಲ್ನಲ್ಲಿ? ಇಲ್ಲಿದೆ ಮಾಹಿತಿ
9) ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ರಕ್ಷಿತ್ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಸಾಹಸ ನಿರ್ದೇಶನಕ್ಕೆ 2019ನೇ ಸಾಲಿನ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಲಭಿಸಿದೆ. ಚಿತ್ರಕ್ಕೆ ವಿಕ್ರಮಂ ಮೋರ್ ಅವರು ಸಾಹಸ ನಿರ್ದೇಶನ ಮಾಡಿದ್ದರು. ಇನ್ನು ಬೆಸ್ಟ್ ಬುಕ್ ಆನ್ ಸಿನಿಮಾ ವಿಭಾಗದಲ್ಲಿ ಎರಡನೇ ವಿಜೇತರಾಗಿ ಪಿ.ಆರ್ ರಾಮದಾಸ ನಾಯ್ಡು ಆಯ್ಕೆ ಆಗಿದ್ದಾರೆ. Link: National Film Awards 2019: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಒಲಿದ ರಾಷ್ಟ್ರ ಪ್ರಶಸ್ತಿ
ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.tv9kannada.com ನೋಡುತ್ತಿರಿ.