
ಬೆಳಗಾವಿ ನಗರದ ಉದ್ಯಮಬಾಗದಲ್ಲಿ ಖಾಸಗಿ ಕಾಲೇಜು ಎದುರು ಸಿಹಿ ಚಾಕಲೇಟ್‌ನಲ್ಲಿ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಭೋಲು ಪ್ರಜಾಪತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 5 ಗ್ರಾಂ ಗಾಂಜಾ ಮಿಶ್ರಿತ ಚಾಕಲೇಟ್‌ಗೆ ರೂ. 50ರಂತೆ ಮಾರಲಾಗುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 7 ಕೆಜಿ ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್‌ಗಳು, ಮೊಬೈಲ್ ಹಾಗೂ ಸ್ಕೂಟಿಯನ್ನು ವಶಪಡಿಸಿಕೊಂಡಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ರಾಜೀವ್ ಗಾಂಧಿ ಬಡಾವಣೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರಿಗೆ ಶೈಲಾ ಹಾಗೂ ಚಂದ್ರಮಾನ್ ದೂರು ನೀಡಿದ್ದರು. ಇದರ ಕೋಪದಿಂದ ಕಟ್ಟಡ ನಿರ್ಮಿಸುತ್ತಿರುವ ಶಾಂತಾ ಎಂಬ ಮಹಿಳೆ, ಪೊಲೀಸರ ಎದುರಲ್ಲೇ ದೂರುದಾರರ ಮೇಲೆ ಹಲ್ಲೆ ನಡೆಸಿ ಕಪಾಳಮೋಕ್ಷ ಮಾಡಿದ್ದು, ಈ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹಾಸ್ಟೇಲ್‌ನಲ್ಲಿ 13 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮುಖ್ಯಸ್ಥ ಜಾನ್ ಶಾಮೈಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ತನ್ನ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ ಬಳಿಕ ದೂರು ದಾಖಲಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ತೆಲಂಗಾಣದಲ್ಲಿ ನಡೆದ ಅಪಘಾತದಲ್ಲಿ ಬೀದರ್‌ನ 6 ಕೂಲಿ ಕಾರ್ಮಿಕರು ಮೃತಪಟ್ಟಿರುವುದು ಅತ್ಯಂತ ದುಃಖಕರ. ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದ್ದು, ಸಂತ್ರಸ್ತರ ಬೆನ್ನೆಲುಬಾಗಿ ಸರ್ಕಾರ ನಿಲ್ಲಲಿದೆ.
‘ಅಯೋಧ್ಯೆ ರಾಮ ಜನ್ಮಭೂಮಿ ಟ್ರಸ್ಟ್ ಸಿಇಒ ಆಯ್ಕೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಬಂದ 5200 ಅರ್ಜಿಗಳಲ್ಲಿ 18 ಅಭ್ಯರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿಗಳೂ ಸೇರಿದಂತೆ ಅಭ್ಯರ್ಥಿಗಳಿಗೆ ಜನಿವಾರ ಧರಿಸುವಿಕೆ, ಶಿಕಾ, ಸಸ್ಯಾಹಾರ, ಮದ್ಯಪಾನ ನಿಷೇಧ, ರಾಮಭಕ್ತಿ ಹಾಗೂ ಸಾಂಪ್ರದಾಯಿಕ ಉಡುಗೆಯಂತಹ ಧಾರ್ಮಿಕ ಆಚರಣೆ ಮತ್ತು ಜೀವನಶೈಲಿಯ ಕುರಿತು ಕಠಿಣ ಪ್ರಶ್ನೆಗಳನ್ನು ಗೂಗಲ್ ಫಾರ್ಮ್ ಮೂಲಕ ಕೇಳಲಾಗಿದೆ. ಟ್ರಸ್ಟ್‌ನ ಪಾರದರ್ಶಕ ಆಡಳಿತಕ್ಕಾಗಿ ಈ ಹುದ್ದೆಯನ್ನು ಸೃಷ್ಟಿಸಲಾಗಿದ್ದು, ಸೆಪ್ಟೆಂಬರ್ 2ರೊಳಗೆ ಮೂರು ಹೆಸರುಗಳನ್ನು ಅಂತಿಮ ಶಿಫಾರಸು ಮಾಡಲಾಗುತ್ತದೆ. ಮತ್ತಷ್ಟು ಓದಿ
ಅಂತರರಾಷ್ಟ್ರೀಯ ಯುವ ದಿನದ ಹಿನ್ನೆಲೆಯಲ್ಲಿ ದೇಶದ ಯುವಜನತೆಯನ್ನು ಉದ್ದೇಶಿಸಿ ಸಂದೇಶ ಹಂಚಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, “ಯುವ ಸ್ನೇಹಿತರು ದೇಶದ ಭವಿಷ್ಯ ಮಾತ್ರವಲ್ಲ, ಇಂದಿನ ಭಾರತದ ಅತ್ಯಂತ ದೊಡ್ಡ ಶಕ್ತಿ” ಎಂದು ಶ್ಲಾಘಿಸಿದ್ದಾರೆ. ಅಲ್ಲದೆ, ಸಂಸ್ಕೃತ ಶ್ಲೋಕದ ಮೂಲಕ ದೃಷ್ಟಿ, ಮಾತು ಮತ್ತು ಕಾಯಕದ ಮಹತ್ವವನ್ನು ಯುವ ಸಮೂಹಕ್ಕೆ ತಿಳಿಸಿದ್ದಾರೆ. ಮತ್ತಷ್ಟು ಓದಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಆಂಡ್ರಾಯ್ಡ್ ಮೊಬೈಲ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದ ಹಿನ್ನೆಲೆ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರ ಅವರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಜೈಲು ಎಸ್‌ಪಿ ಅನ್ಶುಕುಮಾರ್‌ಗೆ ಡಿಜಿಪಿ ಅಲೋಕ್ ಕುಮಾರ್ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
Breaking News Today Live Updates in Kannada: ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆ ವಿವಾದ, ‘ಕಾಕ್ರೋಚ್ ಜನತಾ ಪಾರ್ಟಿ’ ಹುಟ್ಟು ಹಾಗೂ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಜೆನ್-ಝಿ ಪ್ರತಿಭಟನೆಗಳ ಬೆನ್ನಲ್ಲೇ, ಆ ವೀಡಿಯೊವನ್ನು ಉದ್ದೇಶಪೂರ್ವಕವಾಗಿ ಎಡಿಟ್ ಮಾಡಿ ವಾಣಿಜ್ಯ ಬಳಕೆ ಮಾಡಿಕೊಂಡವರ ವಿರುದ್ಧ ಕ್ರಮಕ್ಕೆ ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ CBIಯಿಂದ ಪ್ರತಿಕ್ರಿಯೆ ಕೋರಿದೆ. ಮತ್ತೊಂದೆಡೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ ಸೇರಿದಂತೆ ವಿವಿಧೆಡೆ 10ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನಿಗೆ ವಿಶೇಷ ಪೂಜೆ ಹಾಗೂ ರಥೋತ್ಸವಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಭಕ್ತರು ಹರಿದು ಬರುತ್ತಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 10:03 am, Wed, 12 August 26