AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Highlights: ಬೆಂಗಳೂರು ಆಲ್-ಹಿಂದ್ ಐಸಿಸ್ ಉಗ್ರ ಮಾಡ್ಯೂಲ್ ಕೇಸ್: ಶಂಕಿತ ಹನೀಫ್ ಖಾನ್‌ಗೆ 7 ವರ್ಷ ಕಠಿಣ ಜೈಲು ಶಿಕ್ಷೆ

Karnataka News Today Highlights: ಆಂಧ್ರದಲ್ಲಿ ಕೋವಿಡ್ ಸಾವು ಹಾಗೂ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಆತಂಕ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿರುವ ಟ್ರಂಪ್-ಇರಾನ್ ಸುಂಕದ ಸಮರ ಮತ್ತು ಮಂಗಳೂರಿನಲ್ಲಿ ಮುಂದುವರಿದ ಅಕ್ರಮ ಬಾಂಗ್ಲಾ ವಲಸಿಗರ ಬಂಧನ ಕಾರ್ಯಾಚರಣೆ ಸೇರಿದಂತೆ ದೇಶ, ವಿದೇಶ ಹಾಗೂ ರಾಜ್ಯದ ಇಂದಿನ ಎಲ್ಲಾ ಪ್ರಮುಖ ವಿದ್ಯಮಾನಗಳ ಕ್ಷಣಕ್ಷಣದ ಅಪ್ಡೇಟ್​​​​ ಇಲ್ಲಿ ಸಿಗಲಿದೆ

TV9 Kannada News Highlights: ಬೆಂಗಳೂರು ಆಲ್-ಹಿಂದ್ ಐಸಿಸ್ ಉಗ್ರ ಮಾಡ್ಯೂಲ್ ಕೇಸ್: ಶಂಕಿತ ಹನೀಫ್ ಖಾನ್‌ಗೆ 7 ವರ್ಷ ಕಠಿಣ ಜೈಲು ಶಿಕ್ಷೆ
Nia
ಭಾವನಾ ಹೆಗಡೆ
| Edited By: |

Updated on:Jul 14, 2026 | 10:57 PM

Share

Breaking News Today Live Updates in Kannada: ನೆರೆರಾಜ್ಯ ಆಂಧ್ರಪ್ರದೇಶದ ಕಡಪಾದಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದು, ಕರ್ನಾಟಕದಲ್ಲೂ ಜುಲೈನಲ್ಲಿ ಪ್ರಕರಣಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಸೋಂಕಿನ ಗಂಭೀರತೆ ಕಡಿಮೆ ಇದ್ದರೂ ರಾಜ್ಯದಲ್ಲಿ ಮತ್ತೊಮ್ಮೆ ಕೊರೊನಾ ಭೀತಿ ಶುರುವಾಗಿದೆ. ಮಂಗಳೂರಿನ ಉರ್ವಾ ಸಮೀಪ ಪೊಲೀಸರು ಕಾರ್ಯಾಚರಣೆ ನಡೆಸಿ 11 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಇತ್ತ ಅಮೆರಿಕ ಅಧ್ಯಕ್ಷ ಟ್ರಂಪ್ ಹಾರ್ಮುಜ್ ಜಲಸಂಧಿಯಲ್ಲಿ ಶೇ20ರಷ್ಟು ಸುರಕ್ಷತಾ ಶುಲ್ಕ ವಿಧಿಸಿದ್ದು, ಇರಾನ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸುಂಕದ ಸಮರದಿಂದ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಭಾರತದ ಆರ್ಥಿಕತೆಗೆ ಪೆಟ್ಟು ಬೀಳುವ ಆತಂಕ ಎದುರಾಗಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

LIVE NEWS & UPDATES

The liveblog has ended.
  • 14 Jul 2026 10:25 PM (IST)

    ಆಲ್-ಹಿಂದ್ ಐಸಿಸ್ ಉಗ್ರ ಸಂಚು ಪ್ರಕರಣ: ಪ್ರಮುಖ ಆರೋಪಿ ಹನೀಫ್ ಖಾನ್‌ಗೆ 7 ವರ್ಷ ಜೈಲು ಶಿಕ್ಷೆ

    ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಆಲ್-ಹಿಂದ್ ಐಸಿಸ್ (Al-Hind ISIS) ಮಾಡ್ಯೂಲ್‌ನ ಭಯೋತ್ಪಾದನಾ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ ಪ್ರಮುಖ ಆರೋಪಿಯಾದ ಮೊಹಮ್ಮದ್ ಹನೀಫ್ ಖಾನ್‌ಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 48,000 ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

  • 14 Jul 2026 08:56 PM (IST)

    ಬರ ಪರಿಸ್ಥಿತಿ ಹಿನ್ನೆಲೆ ಪ್ರಧಾನಿ ಮೋದಿಗೆ ಸಿಎಂ ಡಿ.ಕೆ.ಶಿವಕುಮಾರ್ ಪತ್ರ

    ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೃಷ್ಟಿಯಾಗಿರುವ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಧಿಕೃತವಾಗಿ ಪತ್ರ ಬರೆಯುವ ಮೂಲಕ ಕೇಂದ್ರ ಸರ್ಕಾರದ ತುರ್ತು ಹಸ್ತಕ್ಷೇಪಕ್ಕೆ ಆಗ್ರಹಿಸಿದ್ದಾರೆ. ಇಲ್ಲಿದೆ ನೋಡಿ ಸ್ಟೋರಿ

  • 14 Jul 2026 08:54 PM (IST)

    ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಕೆಪಿಎಸ್‌ಸಿ ಹಂಗಾಮಿ ಅಧ್ಯಕ್ಷ

    ಕರ್ನಾಟಕ ಲೋಕಸೇವಾ ಆಯೋಗದ (KPSC) ನೂತನ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ಬಿ. ಪ್ರಭುದೇವ್ ಅವರು ಇಂದು ರಾಜಭವನದ ಲೋಕಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಅಧಿಕೃತವಾಗಿ ಭೇಟಿ ಮಾಡಿದ್ದಾರೆ. ಇದು ಕೇವಲ ಸೌಜನ್ಯದ ಭೇಟಿಯಾಗಿದ್ದು, ನೂತನ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದ್ದಾರೆ.

  • 14 Jul 2026 06:59 PM (IST)

    ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್

    ಜಿಲ್ಲೆಯ ಜೈಲು ಇಲಾಖೆಯಲ್ಲಿ ಭಾರಿ ಸಂಚಲನ ಮೂಡಿಸಿರುವ ಘಟನೆಯೊಂದರಲ್ಲಿ, ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಜೈಲು ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾರೆ. ಈ ಹೈ-ಪ್ರೊಫೈಲ್ ಜೈಲ್ ಬ್ರೇಕ್ ಪ್ರಕರಣ ಇಡೀ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ.

  • 14 Jul 2026 06:28 PM (IST)

    ಬೆಳಗಾವಿ: ಜಮೀನಿನಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಸಾವು

    ಹಸಿರು ಪೈರಿನ ನಡುವೆ ಕಷ್ಟಪಟ್ಟು ದುಡಿಯುತ್ತಿದ್ದ ದಂಪತಿಗಳ ಮೇಲೆ ವಿಧಿ ವಿದ್ಯುತ್ ರೂಪದಲ್ಲಿ ಎರಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಅತ್ಯಂತ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

  • 14 Jul 2026 06:10 PM (IST)

    ಕೆಪಿಎಸ್‌ಸಿ ಅಧ್ಯಕ್ಷರ ಅಮಾನತು: ರಾಜ್ಯಪಾಲರ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಶಿವಶಂಕರಪ್ಪ ಸಾಹುಕಾರ್

    ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿರುವ ರಾಜ್ಯಪಾಲರ ಆದೇಶದ ವಿರುದ್ಧ ಇದೀಗ ಕಾನೂನು ಹೋರಾಟ ತೀವ್ರಗೊಂಡಿದೆ. ರಾಜ್ಯಪಾಲರ ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ ಅವರು ಕರ್ನಾಟಕ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದು, ಹಿರಿಯ ನ್ಯಾಯವಾದಿಗಳ ನಡುವೆ ನ್ಯಾಯಾಲಯದಲ್ಲಿ ಭಾರಿ ವಾದ-ವಿವಾದ ನಡೆದಿದೆ.

  • 14 Jul 2026 04:26 PM (IST)

    ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ‘ಬೌದ್ಧ ಧರ್ಮ’ದ ಹೆಸರು ಸೇರ್ಪಡೆಗೆ ಸಮಿತಿ ಸಲಹೆ

    ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ಕರ್ನಾಟಕದ ಹೆಮ್ಮೆಯ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಇನ್ಮುಂದೆ ಮಹತ್ವದ ಬದಲಾವಣೆಯೊಂದು ಆಗುವ ಸಾಧ್ಯತೆ ದಟ್ಟವಾಗಿದೆ. ನಾಡಗೀತೆಯಲ್ಲಿ ಜೈನ ಧರ್ಮದ ಉಲ್ಲೇಖದ ಜೊತೆಗೆ ಇದೀಗ ‘ಬೌದ್ಧ ಧರ್ಮ’ದ ಹೆಸರನ್ನು ಸೇರ್ಪಡೆಗೊಳಿಸಲು ಚಿಂತನೆ ನಡೆಸಲಾಗುತ್ತಿದೆ. ಇಲ್ಲಿದೆ ನೋಡಿ ಸ್ಟೋರಿ 

  • 14 Jul 2026 03:32 PM (IST)

    ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದ ಗುಡ್ ನ್ಯೂಸ್

    ಫಿಫಾ ವಿಶ್ವಕಪ್ (FIFA World Cup) ಫುಟ್‌ಬಾಲ್ ಪಂದ್ಯಗಳ ರೋಮಾಂಚನ ಕಣ್ತುಂಬಿಕೊಳ್ಳುತ್ತಿರುವ ಸಿಲಿಕಾನ್ ಸಿಟಿ ಜನತೆಗೆ ಬೆಂಗಳೂರು ನಗರ ಪೊಲೀಸರು ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ತಡರಾತ್ರಿ ನಡೆಯುವ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ನಗರದ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಮಧ್ಯರಾತ್ರಿ 3:30 ರವರೆಗೆ ಆಹಾರ ಸೇವೆ ಒದಗಿಸಲು ಬೆಂಗಳೂರು ಪೊಲೀಸ್ ಇಲಾಖೆ ವಿಶೇಷ ರಿಯಾಯಿತಿ ನೀಡಿ ಆದೇಶ ಹೊರಡಿಸಿದೆ.

  • 14 Jul 2026 02:39 PM (IST)

    ಪತ್ನಿ ಕೊಲೆ ಯತ್ನದ ಆರೋಪ; ಪಿಎಸ್ಐ ಭೈರಪ್ಪ ಬಂಧನ

    ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ, ಮಚ್ಚಿನಿಂದ ಕೊಲೆಗೆ ಯತ್ನಿಸಿದ ಆರೋಪದಡಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೈರಪ್ಪ ಎಂಬಾತನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಮೊದಲು ಎನ್‌ಸಿಆರ್ ದಾಖಲಿಸಿದ್ದ ಪೊಲೀಸರು, ಇದೀಗ ಕೊಲೆ ಯತ್ನ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

  • 14 Jul 2026 02:37 PM (IST)

    ‘ಶ್ರೀ ರಾಮ ಭೂಮಿ’ ಚಿತ್ರದಲ್ಲಿ ಅಶೋಕ್ ಸಿಂಘಾಲ್ ಪಾತ್ರದಲ್ಲಿ ಅನುಪಮ್ ಖೇರ್

    ಹಲವು ವಿವಾದಾತ್ಮಕ ಹಾಗೂ ಸೈದ್ಧಾಂತಿಕ ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ಅನುಪಮ್ ಖೇರ್, ಇದೀಗ ಹೊಸದಾಗಿ ಘೋಷಣೆಯಾಗಿರುವ ‘ಶ್ರೀ ರಾಮ ಭೂಮಿ’ ಸಿನಿಮಾದಲ್ಲಿ ಪ್ರಮುಖ ಪಾತ್ರಧಾರಿಯಾಗಿದ್ದಾರೆ. ರಾಮಜನ್ಮಭೂಮಿ ಹೋರಾಟದ ಮುಂಚೂಣಿ ನಾಯಕ ಅಶೋಕ್ ಸಿಂಘಾಲ್ ಅವರ ಪಾತ್ರದಲ್ಲಿ ಅನುಪಮ್ ಖೇರ್ ಬಣ್ಣ ಹಚ್ಚುತ್ತಿರುವುದು ವಿಶೇಷವಾಗಿದೆ. ಮತ್ತಷ್ಟು ಓದಿ

  • 14 Jul 2026 02:35 PM (IST)

    ಅಬ್ಬಿ ಜಲಪಾತದಲ್ಲಿ ಸುರಕ್ಷತಾ ನಿಯಮಗಳ ನಿರ್ಲಕ್ಷ್ಯ

    ಮಲೆನಾಡು ಭಾಗದಲ್ಲಿ ಸುರಿದ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಹಾನ್‌ಬಾಳ್‌ ಬಳಿಯ ಅಬ್ಬಿ ಜಲಪಾತ ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ, ಜಲಪಾತದಲ್ಲಿ ನೀರಿಗಿಳಿಯದಂತೆ ಎಚ್ಚರಿಕೆ ಸೂಚನಾ ಫಲಕಗಳಿದ್ದರೂ ಪ್ರವಾಸಿಗರು ನಿಯಮಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ನೀರಿಗಿಳಿಯುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ವೀಡಿಯೋ ನೋಡಿ

  • 14 Jul 2026 12:52 PM (IST)

    ನಾಳೆ ಕಾವೇರಿ ನೀರು ನಿರ್ವಹಣ ಸಮಿತಿ ಸಭೆ: ನೀರು ಬಿಡಲು ಕರ್ನಾಟಕ ನಕಾರ

    ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆಯಿರುವ ಹಿನ್ನೆಲೆಯಲ್ಲಿ ನಾಳೆ ದೆಹಲಿಯಲ್ಲಿ ಮಹತ್ವದ CWRC ಸಭೆ ನಡೆಯಲಿದೆ. ಜೂನ್ ಮತ್ತು ಜುಲೈ ಕೋಟಾದಡಿ 40.43 ಟಿಎಂಸಿ ನೀರಿಗಾಗಿ ತಮಿಳುನಾಡು ಪಟ್ಟು ಹಿಡಿದಿದ್ದು, ಜಲಾಶಯಗಳು ಬರಿದಾಗಿ ಬೆಂಗಳೂರಿನ ಕುಡಿಯುವ ನೀರಿಗೇ ಆಭಾವವಿರುವುದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ವಾದಿಸಲಿದೆ.

  • 14 Jul 2026 12:06 PM (IST)

    ಜೈಲಿನಿಂದ ಮೂವರು ಸಜಾ ಕೈದಿಗಳು ಗೋಡೆ ಹಾರಿ ಪರಾರಿ

    ಗೃಹ ಸಚಿವರ ತವರಾದ ಕಲಬುರಗಿಯ ಕೇಂದ್ರ ಕಾರಾಗೃಹದ ಬ್ಯಾರಕ್ ಕಂಬಿ ಕತ್ತರಿಸಿ, ಟವೆಲ್ ಹಾಗೂ ಹಾಸಿಗೆ ನೆರವಿನಿಂದ ಮೂವರು ಸಜಾ ಕೈದಿಗಳು ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಿದ್ದಾರೆ. ಈ ಘಟನೆ ಜೈಲಿನ ಭದ್ರತಾ ವ್ಯವಸ್ಥೆಯನ್ನು ಪ್ರಶ್ನಿಸುವಂತೆ ಮಾಡಿದ್ದು, ಪೊಲೀಸರು ಕೈದಿಗಳಿಗಾಗಿ ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಮತ್ತಷ್ಟು ಓದಿ

  • 14 Jul 2026 12:05 PM (IST)

    ತುಂಬಾಡ್ 2: ಸಮಂತಾ ಹಿಂದಿಕ್ಕಿ ಆಲಿಯಾ ಭಟ್ ಎಂಟ್ರಿ!

    ಕಲ್ಟ್ ಕ್ಲಾಸಿಕ್ ಸಿನಿಮಾ ‘ತುಂಬಾಡ್’ ಸೀಕ್ವೆಲ್ ನಿರ್ಮಾಣವಾಗುತ್ತಿದ್ದು, ನಟಿ ಸಮಂತಾ ಅವರ ಬದಲಿಗೆ ಆಲಿಯಾ ಭಟ್ ಮುಖ್ಯ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮರು ಬಿಡುಗಡೆಯಾಗಿ ದಾಖಲೆ ಗಳಿಕೆ ಮಾಡಿದ್ದ ಈ ಚಿತ್ರದ ಸೀಕ್ವೆಲ್ ಮೂಲಕ ಆಲಿಯಾ ಇದೀಗ ‘ತುಂಬಾಡ್’ ಪ್ರಪಂಚ ಪ್ರವೇಶಿಸುತ್ತಿದ್ದಾರೆ. ಮತ್ತಷ್ಟು ಓದಿ

  • 14 Jul 2026 10:45 AM (IST)

    ಗೂಗಲ್ ಐಓ ಕನೆಕ್ಟ್ ಸಮಾವೇಶದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭಾಗಿ

    ಮಾದಾವರದ ಬಿಐಇಸಿಯಲ್ಲಿ ನಡೆಯುತ್ತಿರುವ ‘ಗೂಗಲ್ ಐಓ ಕನೆಕ್ಟ್’ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಿ ಮಾತನಾಡಿದ್ದಾರೆ. ಎಐ ತಂತ್ರಜ್ಞಾನದ ಜಾಗತಿಕ ರಾಜಧಾನಿಯಾಗಿ ಬೆಂಗಳೂರು ಬೆಳೆಯುತ್ತಿದ್ದು, ಶಾಲೆ ಹಂತದಿಂದಲೇ ಸರ್ಕಾರ ಎಐ ಕಲಿಕೆಗೆ ಬೆಂಬಲ ನೀಡಲಿದೆ ಎಂದು ಸಿಎಂ ತಿಳಿಸಿದ್ದು, ಗೂಗಲ್ ಸಂಸ್ಥೆಗೆ ಧನ್ಯವಾದ ಅರ್ಪಿಸಿದ್ದಾರೆ.

  • 14 Jul 2026 10:45 AM (IST)

    ಬಾಂಗ್ಲಾದೇಶೀಯರನ್ನು ಕರೆತಂದ ಮೂವರ ವಿರುದ್ಧ ಪ್ರಕರಣ ದಾಖಲು

    ಕಾನೂನುಬಾಹಿರವಾಗಿ ಬಾಂಗ್ಲಾದೇಶ ಪ್ರಜೆಗಳನ್ನು ಮಂಗಳೂರಿಗೆ ಕೆಲಸಕ್ಕೆ ಕರೆತಂದ ಆರೋಪದಡಿ ಪಶ್ಚಿಮ ಬಂಗಾಳ ಮೂಲದ ಮೊಯ್ದಿನ್ ಇಸ್ಲಾಂ, ರಸುಲ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇವರಲ್ಲಿ ಇಬ್ಬರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದ್ದು, ಕೋಲ್ಕತ್ತಾದಲ್ಲಿ ಬಂಧನಕ್ಕೊಳಗಾಗಿರುವ ಮತ್ತೊಬ್ಬ ಆರೋಪಿ ರಸುಲ್ ಇಸ್ಲಾಂನನ್ನು ವಶಕ್ಕೆ ಪಡೆಯಲು ಪೊಲೀಸರು ಕೋಲ್ಕತ್ತಾಕ್ಕೆ ತೆರಳಿದ್ದಾರೆ.

  • 14 Jul 2026 10:00 AM (IST)

    ಅಮಾವಾಸ್ಯೆ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ

    ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟಕ್ಕೆ ಸಾವಿರಾರು ಭಕ್ತರು ಹರಿದುಬಂದಿದ್ದು, ಮುಖ್ಯ ದ್ವಾರ ತೆರೆಯದ ಪ್ರಾಧಿಕಾರದ ಬೇಜವಾಬ್ದಾರಿತನಕ್ಕೆ ರೊಚ್ಚಿಗೆದ್ದಿದ್ದಾರೆ. ಟಿಕೆಟ್ ಪಡೆದೂ ದರ್ಶನ ಸಿಗದೆ ಸುಸ್ತಾದ ಭಕ್ತರು ಬ್ಯಾರಿಕೇಡ್ ಹಾಗೂ ಗ್ರಿಲ್ಸ್ ಹತ್ತಿ ಒಳಪ್ರವೇಶಿಸಲು ಹರಸಾಹಸ ಪಟ್ಟ ಘಟನೆ ನಡೆದಿದೆ.

  • 14 Jul 2026 09:58 AM (IST)

    ಕುಡಿಯುವ ನೀರಿನ ಪೈಪ್‌ಗೆ ಕಲ್ಲು ತುಂಬಿದ ಕಿಡಿಗೇಡಿಗಳು

    ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಸುವ ತುಂಗಭದ್ರಾ ಪೈಪ್‌ಲೈನ್‌ಗೆ ಅಡವಿಸೋಮಾಪುರ ಬಳಿ ದುಷ್ಕರ್ಮಿಗಳು ಕಲ್ಲು ತುಂಬಿದ್ದು, ನೀರು ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ನಗರಸಭೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಲ್ಲು ತೆರವುಗೊಳಿಸಿದ್ದು, ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • 14 Jul 2026 08:30 AM (IST)

    ದಾವಣಗೆರೆ: ಲಾರಿ ಪಲ್ಟಿ; ಚಾಲಕ ಸ್ಥಳದಲ್ಲೇ ದುರ್ಮರಣ

    ಹಾವೇರಿಯಿಂದ ದಾಬಸ್‌ಪೇಟೆಗೆ ಸಿಮೆಂಟ್ ಶೀಟ್ ಹೊತ್ತು ಸಾಗುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿ ದಾವಣಗೆರೆಯ ತುಂಗಭದ್ರಾ ಬಡಾವಣೆ ಬಳಿ ಪಲ್ಟಿಯಾಗಿದೆ. ಸಿಮೆಂಟ್ ಶೀಟ್‌ಗಳ ಅಡಿ ಸಿಲುಕಿ ಚಾಲಕ ರಮೇಶ್ (55) ಸ್ಥಳದಲ್ಲೇ ಸಾವನ್ನಪ್ಪಿದ್ದು, ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 14 Jul 2026 08:29 AM (IST)

    ನೆಲಮಂಗಲದಲ್ಲಿ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ನಿವಾಸಿಗಳು

    ನೆಲಮಂಗಲದ ಮೋಟಗಾನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ಚಿರತೆ ಹಾವಳಿಯಿಂದ ಗ್ರಾಮಸ್ಥರು ಮನೆಯಿಂದ ಹೊರಬರಲು ಭೀತಿಗೊಂಡಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯಬೇಕೆಂದು ಗ್ರಾಮಸ್ಥರು ತೀವ್ರವಾಗಿ ಆಗ್ರಹಿಸಿದ್ದಾರೆ.

  • 14 Jul 2026 08:29 AM (IST)

    ಕೋಲಾರ: ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ

    ಕೋಲಾರ ಎಪಿಎಂಸಿ ಮಾರುಕಟ್ಟೆ ಬಳಿ ಗಾಂಜಾ ಮಾರುತ್ತಿದ್ದ ಉತ್ತರ ಪ್ರದೇಶ ಮೂಲದ ಬೋಲಾನಾಥ್ ಪಾಲ್ (45) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹2.5 ಲಕ್ಷ ಮೌಲ್ಯದ 4.5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 14 Jul 2026 08:29 AM (IST)

    ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

    ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ, ಮಾಜಿ ಸಚಿವ ರಾಮಚಂದ್ರೇಗೌಡ (88) ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 6 ಬಾರಿ ಎಂಎಲ್​ಸಿ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

  • 14 Jul 2026 08:28 AM (IST)

    ಕಲಬುರಗಿ: ಜೈಲಿನಿಂದ ಮೂವರು ಕೈದಿಗಳು ಪರಾರಿ

    ಕಲಬುರಗಿ ಕೇಂದ್ರ ಕಾರಾಗೃಹದ ಕಾಂಪೌಂಡ್ ಹಾರಿ ಬೀದರ್ ಕೊಲೆ ಪ್ರಕರಣದ ಸಜಾ ಕೈದಿಗಳಾದ ಮಸ್ತಾನ್, ಸಂತೋಷ್ ಮತ್ತು ಸಾಗರ್ ತಡರಾತ್ರಿ ಪರಾರಿಯಾಗಿದ್ದಾರೆ. ಈ ಕುರಿತು ಫರತಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೈದಿಗಳಿಗಾಗಿ ತೀವ್ರ ಹುಡುಕಾಟ ನಡೆದಿದೆ.

Published On - Jul 14,2026 8:27 AM

Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ