
ಬೆಂಗಳೂರಿನ ಮೈಸೂರು ರಸ್ತೆಯ ಅಂಚೆಪಾಳ್ಯದಲ್ಲಿ ಮುಂಜಾನೆ ವಾಕಿಂಗ್ ತೆರಳಿದ್ದ ನಾಗರಾಜ್ (60) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಬನ್ನೇರುಘಟ್ಟದಿಂದ ಬಂದ ಶಂಕಿತ ಆನೆಯಿಂದ ಈ ದುರಂತ ಸಂಭವಿಸಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ ಹಾಗೂ ಮೃತರ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹಿಸಿ ಸ್ಥಳೀಯರು ಆರ್‌ಆರ್ ಆಸ್ಪತ್ರೆ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ವೀಡಿಯೋ ನೋಡಿ
ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಕೋಕಾ ಕೋರ್ಟ್‌ನಿಂದ ಜಾಮೀನು ಸಿಕ್ಕಿದ್ದರೂ ಭಜರಂಗದಳ ಮುಖಂಡ ಭರತ್ ಕುಮ್ಡೇಲು ಸೇರಿದಂತೆ 6 ಜನರ ಮೇಲೆ ದ.ಕ ಜಿಲ್ಲಾಡಳಿತ ಗೂಂಡಾ ಕಾಯಿದೆ ಹೇರಿರುವುದು ಹಾಗೂ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸ್ ನೋಟೀಸ್ ನೀಡಿರುವುದನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಇಂದು ಬಿ.ಸಿ.ರೋಡ್ ಚಲೋಗೆ ಕರೆ ನೀಡಿವೆ. ಕಾಂಗ್ರೆಸ್ ಸರ್ಕಾರ ಹಾಗೂ ದ.ಕ ಜಿಲ್ಲಾ ಪೊಲೀಸ್ ಇಲಾಖೆಯ ನಡೆ ವಿರೋಧಿಸಿ ಇಂದು ಬೆಳಿಗ್ಗೆ 10:30ಕ್ಕೆ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದ್ದು, ಕರಾವಳಿಯಲ್ಲಿ ಮತ್ತೆ ಕಾವೇರಿದ ವಾತಾವರಣ ನಿರ್ಮಾಣವಾಗಿದೆ.
ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಪ್ರಯಾಣ ಬೆಳೆಸಿದರು. ಪ್ರಮುಖ ರಾಜಕೀಯ ವಿಷಯಗಳ ಚರ್ಚೆಗಾಗಿ ಅವರು ದೆಹಲಿ ತಲುಪಲಿದ್ದಾರೆ.
ಬೆಳಗಿನ ಜಾವ ದೆಹಲಿಗೆ ಪ್ರಯಾಣಿಸುವ ಮುನ್ನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂಪ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೆ.ಎನ್. ಗಣೇಶ್ ಅವರು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಕೇದಾರನಾಥದ ಚಿರ್ಬಾಸಾ ಬಳಿ ಬೆಟ್ಟದಿಂದ ಬಂಡೆಗಳು ಕುಸಿದು ಉತ್ತರ ಪ್ರದೇಶದ 5 ವರ್ಷದ ಬಾಲಕ ಯಶ್ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಹಾನಿಗೊಳಗಾದ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಿದ ರಕ್ಷಣಾ ಪಡೆಗಳು ರಾತ್ರಿಯಿಡೀ ಶ್ರಮಿಸಿ ಸುಮಾರು 1,500 ಯಾತ್ರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿವೆ.
ಪರೀಕ್ಷಾ ಭಯ ಹಾಗೂ ಒತ್ತಡ ನಿವಾರಣೆಗೆ ಮೂಡುಬಿದಿರೆಯ ಆಳ್ವಾಸ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ ವಿಶೇಷ ಅಭಿಯಾನ ನಡೆಸಿ ಗಮನಸೆಳೆದಿದ್ದಾಳೆ. ಸಹ-ವಿದ್ಯಾರ್ಥಿಗಳಿಗೆ ಮಾಸ್ಟರ್ ಕ್ಲಾಸ್ ಮೂಲಕ ಕೌನ್ಸೆಲಿಂಗ್ ಹಾಗೂ ಸಮಯ ನಿರ್ವಹಣೆ ಮಾರ್ಗದರ್ಶನ ನೀಡಿ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ಗೆ ಪಾತ್ರಳಾಗಿದ್ದಾಳೆ. ಮತ್ತಷ್ಟು ಓದಿ
ಬಲವಾದ ಗಾಳಿಯಿಂದಾಗಿ ಗುವಾಹಟಿಯಿಂದ ಬಂದ ಇಂಡಿಗೋ ವಿಮಾನ ಲ್ಯಾಂಡಿಂಗ್ ವೇಳೆ ಹಿಂಭಾಗ ರನ್‌ವೇಗೆ ತಾಗಿದ್ದು (ಟೇಲ್ ಸ್ಟ್ರೈಕ್), ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ವಿಮಾನವನ್ನು ತಾಂತ್ರಿಕ ಪರಿಶೀಲನೆಗೆ ಒಳಪಡಿಸಲಾಗಿದ್ದು, ಡಿಜಿಸಿಎ (DGCA) ತನಿಖೆ ನಡೆಸುವ ಸಾಧ್ಯತೆಯಿದೆ. ಮತ್ತಷ್ಟು ಓದಿ
ದಾವಣಗೆರೆ ತಾಲೂಕಿನ ಹೆಬ್ಬಾಳ್ ಟೋಲ್ ಗೇಟ್ ಬಳಿ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ನಾಳೆ (ಸೆಪ್ಟೆಂಬರ್ 29) ನಡೆಸಲು ಉದ್ದೇಶಿಸಿದ್ದ ಹೆದ್ದಾರಿ ಬಂದ್ ಹೋರಾಟವನ್ನು ರೈತರು ಕೈಬಿಟ್ಟಿದ್ದಾರೆ.ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಅಭಿನವ ಪ್ರಣವಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಮುಂಬರುವ ದಿನಗಳಲ್ಲಿ ಕೆರೆಗಳಿಗೆ ನೀರು ಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀಗಳು ಅಭಯ ನೀಡಿದ್ದಾರೆ. ಸ್ವಾಮೀಜಿಯವರ ಭರವಸೆಗೆ ಗೌರವ ನೀಡಿದ ರೈತ ಹೋರಾಟಗಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
ಹರಿಯಾಣದ ಫರಿದಾಬಾದ್ ಜಿಲ್ಲೆಯ ಸೀಹಿ ಗ್ರಾಮದಲ್ಲಿ ಆಟವಾಡುತ್ತಾ ಬೋರ್‌ವೆಲ್‌ಗೆ ಬಿದ್ದಿದ್ದ ನೇಹಾ (2.5 ವರ್ಷ) ಎಂಬ ಬಾಲಕಿಯನ್ನು 10 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ ಎಂದು ವೈದ್ಯರು ಘೋಷಿಸಿದ್ದಾರೆ.
Breaking News Today Live Updates in Kannada: ದೊಡ್ಡೇರಿ ಫಾರ್ಮ್‌ಹೌಸ್‌ನ ನಕಲಿ ಔಷಧ ತಯಾರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪ್ರಶಾಂತ್‌ನನ್ನು ಎಸ್‌ಐಟಿ ಇಂದು ಬೆಳಿಗ್ಗೆ 10 ಗಂಟೆಯ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಿದೆ. ನಕಲಿ ಜಾಲ ಎಲ್ಲೆಲ್ಲಿ ವ್ಯಾಪಿಸಿದೆ ಹಾಗೂ ಎಷ್ಟು ದಿನಗಳಿಂದ ನಡೆಯುತ್ತಿತ್ತು ಎಂಬ ಸತ್ಯಾಸತ್ಯತೆ ಹೊರಬರಬೇಕಿದೆ. ಮತ್ತೊಂದೆಡೆ, ವಾರದಲ್ಲಿ 5 ದಿನಗಳ ಬ್ಯಾಂಕಿಂಗ್ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಐಬಿಎ ಭರವಸೆ ನೀಡಿದ ಹಿನ್ನೆಲೆಯಲ್ಲಿ ಇಂದಿನಿಂದ ನಡೆಯಬೇಕಿದ್ದ 3 ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದ್ದು, ಬ್ಯಾಂಕ್ ಗ್ರಾಹಕರು ನಿರಾಳರಾಗಿದ್ದಾರೆ. ಇನ್ನು ಕ್ರೀಡಾ ರಂಗದಲ್ಲಿ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಶತಕ ಸಿಡಿಸುವ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಹೆಸರಿಗೆ ಮತ್ತೊಮ್ಮೆ 10 ಪ್ರಮುಖ ದಾಖಲೆಗಳನ್ನು ಸೇರ್ಪಡೆಗೊಳಿಸಿದ್ದಾರೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 8:30 am, Mon, 28 September 26