AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live Oct.2: ಹೊಸ ಬಿಪಿಎಲ್ ಕಾರ್ಡ್‌ ವಿತರಣೆಗೆ ಸರ್ಕಾರ ಚಿಂತನೆ ಹಾಗೂ ಇತ್ತೀಚಿನ ಸುದ್ದಿಗಳು

Karnataka News Today Live Updates: ದೇಶಾದ್ಯಂತ ಇಂದು ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಈ ಕುರಿತ ಸುದ್ದಿಗಳೂ ಸೇರಿದಂತೆ ರಾಷ್ಟ್ರ, ರಾಜ್ಯ, ರಾಜಕೀಯ ಹಾಗೂ ಮನರಂಜನೆ, ಕ್ರೀಡೆ, ಕರ್ನಾಟಕದ ಸ್ಥಳೀಯ ಮಟ್ಟದ ಕ್ಷಣಕ್ಷಣದ ಸುದ್ದಿಗಳ ಅಪ್​ಡೇಟ್ ಇಲ್ಲಿ ಲಭ್ಯ.

TV9 Kannada News Live Oct.2: ಹೊಸ ಬಿಪಿಎಲ್ ಕಾರ್ಡ್‌ ವಿತರಣೆಗೆ ಸರ್ಕಾರ ಚಿಂತನೆ ಹಾಗೂ ಇತ್ತೀಚಿನ ಸುದ್ದಿಗಳು
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on:Oct 02, 2026 | 8:06 AM

Share

LIVE NEWS & UPDATES

  • 02 Oct 2026 08:05 AM (IST)

    ಏಷ್ಯನ್​ ಗೇಮ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ

    ಏಷ್ಯನ್​ ಗೇಮ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ದೊರೆತಿದೆ. ರಿಕರ್ವ್ ಬಿಲ್ಲುಗಾರಿಕೆ ಫೈನಲ್​​ನಲ್ಲಿ ಭಾರತ ಮಹಿಳಾ ತಂಡ ದಕ್ಷಿಣ ಕೊರಿಯಾವನ್ನು ಸೋಲಿಸಿ ಚಿನ್ನದ ಪದಕ ಗೆದ್ದುಕೊಂಡಿದೆ.

  • 02 Oct 2026 07:59 AM (IST)

    ಓಮನ್​ನ ಕೋ-ಪೈಲಟನ್ನು ಯುಎಇಗೆ ಹಸ್ತಾಂತರಿಸಿದ ಸೌದಿ

    ಫ್ಲೈದುಬೈ ವಿಮಾನದಲ್ಲಿ ಭಾರತೀಯ ಕ್ಯಾಪ್ಟನ್ ಮೇಲೆ ಒಮಾನಿ ಸಹ-ಪೈಲಟ್ ದಾಳಿ ಮಾಡಿದ ಘಟನೆ ಸಂಬಂಧ ಸದ್ಯ ಓಮನ್​ನ ಕೋ-ಪೈಲಟನ್ನು ಸೌದಿ ಅರೇಬಿಯಾ ಇದೀಗ ಯುಎಇಗೆ ಹಸ್ತಾಂತರಿಸಿದೆ. ಮತ್ತಷ್ಟು ಓದಿ

  • 02 Oct 2026 07:47 AM (IST)

    ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಚಿಂತನೆ: ಸಚಿವ

    ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ಬಿಪಿಎಲ್ ರೇಷನ್ ಕಾರ್ಡ್‌ಗಳಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಅನರ್ಹರ ಕಾರ್ಡ್ ರದ್ದುಪಡಿಸುವ ಪ್ರಕ್ರಿಯೆಯಿಂದಾಗಿ ಹೊಸ ಕಾರ್ಡ್‌ಗಳ ವಿತರಣೆ ಸ್ಥಗಿತಗೊಂಡಿತ್ತು. ಆದರೆ, ಕಳೆದ ಮೂರ್ನಾಲ್ಕು ವರ್ಷಗಳಿಂದ ಕಾಯುತ್ತಿರುವ ಬಡ ಜನರಿಗೆ ಆಹಾರ ಸಚಿವ ರಿಜ್ವಾನ್ ಅರ್ಷದ್ ಗುಡ್‌ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • 02 Oct 2026 07:46 AM (IST)

    ಬೆಂಗಳೂರಲ್ಲಿ ಬೃಹತ್ ಖೋಟಾ ನೋಟು ಜಾಲ ಪೊಲೀಸ್ ಬಲೆಗೆ

    ಬೆಂಗಳೂರಿನಲ್ಲಿ ಖೋಟಾ ನೋಟು ಮುದ್ರಿಸುವ ಬಹು ದೊಡ್ಡ ಜಾಲವೊಂದನ್ನು ಚಾಮರಾಜಪೇಟೆ ಪೊಲೀಸರು ಬಯಲಿಗೆಳೆದಿದ್ದು, 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. 500 ರೂ. ಮುಖಬೆಲೆಯ 4,337 ನಕಲಿ ನೋಟುಗಳು, ತಮಿಳುನಾಡಿನಲ್ಲಿ ಹೆಚ್ಚುವರಿ 6 ಲಕ್ಷ ರೂ. ಮೌಲ್ಯದ ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದೆ. ಮತ್ತಷ್ಟು ಓದಿ

  • 02 Oct 2026 07:44 AM (IST)

    ‘ಪ್ರೇಮದ ಊರಲಿ’ ಚಿತ್ರ ಭರ್ಜರಿ ಕಲೆಕ್ಷನ್

    ‘ಪ್ರೇಮದ ಊರಲಿ’ ಚಿತ್ರ ಬಿಡುಗಡೆಯಾದ ಮೊದಲ ವಾರದಲ್ಲೇ ಚಿತ್ರವು ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಸಕ್ಸಸ್ ಹಾದಿಯಲ್ಲಿ ಮುನ್ನುಗ್ಗುತ್ತಿದೆ. ಬಿಡುಗಡೆಯಾದ ಮೊದಲ ವಾರದಲ್ಲೇ ಚಿತ್ರವು ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಸಕ್ಸಸ್ ಹಾದಿಯಲ್ಲಿ ಮುನ್ನುಗ್ಗುತ್ತಿದೆ.

  • 02 Oct 2026 07:42 AM (IST)

    ವೈಟ್‌ಫೀಲ್ಡ್‌ನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ

    ಬೆಂಗಳೂರಿನ ವೈಟ್‌ಫೀಲ್ಡ್ ಭಾಗದಲ್ಲಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆಯಾದರೂ, ಅದೃಷ್ಟವಶಾತ್ ಚಾಲಕ ಸೇರಿದಂತೆ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

  • 02 Oct 2026 07:42 AM (IST)

    ಇಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್

    ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ಅಧಿಕೃತ ಮಾಹಿತಿ ನೀಡಿದ್ದು, ನಿಯಮ ಉಲ್ಲಂಘಿಸುವ ಅಂಗಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

  • 02 Oct 2026 07:41 AM (IST)

    ಇಸಿ ಕಚೇರಿಗೆ ಇಂದು ಬಿಜೆಪಿ ನಾಯಕರು

    ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಲಿದೆ. ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯ ವಿರುದ್ಧ ಧರಣಿ ನಡೆಸಿರುವ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರು ಆಯೋಗಕ್ಕೆ ದೂರು ಸಲ್ಲಿಸಿ ಒತ್ತಾಯಿಸಲಿದ್ದಾರೆ.

  • 02 Oct 2026 07:40 AM (IST)

    ಕುಮಟಾ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ

    ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದಿದೆ. ಘಟನೆಯಲ್ಲಿ 12 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಕುಮಟಾ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಡಿಯೋ ನೋಡಲು  ಇಲ್ಲಿ ಕ್ಲಿಕ್ ಮಾಡಿ

  • 02 Oct 2026 07:36 AM (IST)

    ಕೆಪಿಎಸ್​ಸಿ ಅಕ್ರಮದ ತನಿಖೆ ಚುರುಕು

    ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ KPSC ಕಚೇರಿಯಲ್ಲಿ ಮಹಜರು ಮುಗಿಸಿ ಇಡಿ ಅಧಿಕಾರಿಗಳು ತೆರಳಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಹಜರು ಕಾರ್ಯ ಆರಂಭವಾಗಿ ತಡರಾತ್ರಿ 1 ಗಂಟೆವರೆಗೂ ನಡೆದಿತ್ತು.

ದೇಶದೆಲ್ಲೆಡೆ ಇಂದು ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಗುತ್ತಿದೆ. ಇತ್ತ ಕರ್ನಾಟಕದಲ್ಲಿ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಜಾರಿ ನಿರ್ದೇಶನಾಲಯ ತನಿಖೆ ಚುರುಕುಗೊಂಡಿದೆ. ಮತ್ತೊಂದೆಡೆ, ಬಿಪಿಎಲ್ ಕಾರ್ಡ್​ಗೆ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದು, ಇದೀಗ ಹೊಸ ಬಿಪಿಎಲ್ ಕಾರ್ಡ್‌ ವಿತರಣೆಗೆ ಸರ್ಕಾರ ಚಿಂತನೆ ನಡೆಸಿರುವುದಾಗಿ ಕರ್ನಾಟಕ ಆಹಾರ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಸಿಂ ಡಿಕೆ ಶಿವಕುಮಾರ್ ಬಳಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರೊಂದಿಗೆ ಕರ್ನಾಟಕದ ಇತರ ವಿದ್ಯಮಾನಗಳು, ಬಿಗ್​ ಬಾಸ್ ಹಾಗೂ ಸಿನಿಮಾ ಸಂಬಂಧಿತ ಸುದ್ದಿಗಳು, ರಾಷ್ಟ್ರ-ಅಂತರರಾಷ್ಟ್ರೀಯ ಮಾಹಿತಿ, ಕ್ರೀಡಾ ವಿಷಯಗಳಿಗೆ ಸಂಬಂಧಿಸಿದ ತಾಜಾ ಮಾಹಿತಿ ಇಲ್ಲಿ ಲಭ್ಯ. ಅದಕ್ಕಾಗಿ ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Published On - Oct 02,2026 7:32 AM

Follow Us
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR